CM Siddaramaiah: ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ  ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.


COMMERCIAL BREAK
SCROLL TO CONTINUE READING

ವರುಣಾ ವಿಧಾನಸಭಾ ಕ್ಷೇತ್ರ (Varuna Assembly Constituency) ದ ಬಿಳಿಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ.  ಪುರುಷರ ಜೇಬಿಗೆ ಹಣ ಉಳಿತಾಯವಾಗಿದೆ. ಜನಸಾಮಾನ್ಯರ ಜೇಬಿಗೆ ಹಣ ಹಾಕಿ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಾಲಾನುಭವಿಗಳಾಗಿದ್ದಾರೆ ಎಂದರು. 


ನರೇಂದ್ರ ಮೋದಿ (Narendra Modi) ನುಡಿದಂತೆ ನಡೆದಿದ್ದಾರಾ? ದೇಶದ ಜನರಿಗಾಗಿ ಏನೂ ಕಾರ್ಯಕ್ರಮ ರೂಪಿಸದೆ ಕೇವಲ ಅಚ್ಛೆ ದಿನ್ ಆಯೆಗಾ ಎಂದು ಡೈಲಾಗ್ ಹೊಡೆದರೆ ಸಾಕಾ? ಡೈಲಾಗ್ ನಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ , ರಸಗೊಬ್ಬರ ಬೆಲೆ ಕಡಿಮೆ ಆಗತ್ತಾ? ಬರೀ ಬಾಯಲ್ಲಿ ಡೈಲಾಗ್ ಹೊಡೆದರೆ ಜನರ ಬದುಕಿನ ಸಂಕಷ್ಟ ಕಡಿಮೆ ಆಗ್ತದಾ ಎಂದು ಆಕ್ರೋಶ ವ್ಯಕ್ತಪಡಿಸಿದರು. 


ಇದನ್ನೂ ಓದಿ- Lok Sabha Election 2024: ಕಾಂಗ್ರೆಸ್ ಪರಿವಾರ್ ವಾದ:17 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಪ್ರಕಟ ; ಮಕ್ಕಳು, ಅಳಿಯಂದಿರಿಗೆ ಮಣೆ!


ಬರೀ 56 ಇಂಚಿನ ಖಾಲಿ ಎದೆ ಇದ್ದರೆ ಸಾಲದು. ಅದರೊಳಗೆ ಮಾತೃ ಹೃದಯ ಇರಬೇಕು. ಇಲ್ಲದಿದ್ದರೆ ಹೀಗೇ ಆಗೋದು. ಉದ್ಯೋಗ ಸೃಷ್ಟಿ‌ ಆಗೋದಿಲ್ಲ. ರೈತರ ಆದಾಯವೂ ದುಪ್ಪಟ್ಟಾಗುವುದಿಲ್ಲ ಎಂದು ಟೀಕಿಸಿದರು. 


ಮುಂದಿನ ಜನ್ಮದಲ್ಲಿ ಮುಸ್ಲೀಮನಾಗಿ ಹುಟ್ಟುತ್ತೇನೆ ಎಂದವರು ದೇವೇಗೌಡರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ ದೇಶಬಿಟ್ಟು ಹೋಗುತ್ತೇನೆ ಎಂದವರೂ ಇದೇ ದೇವೇಗೌಡರು. ಈಗ ತಮಗೂ ನರೇಂದ್ರ ಮೋದಿಯವರಿಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ಯಾಕಿಷ್ಟು ಈ ನಾಟಕ ದೇವೇಗೌಡರೇ, ನೀವು ಹೇಳಿದ್ದನ್ನು ನೆನಪಿಸಿದರೆ ಅದು ಗರ್ವ ಹೇಗಾಗುತ್ತದೆ ಎಂದು ಪ್ರಶ್ನಿಸಿದರು. 


ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವ ಜಯಂತಿ ದಿನ. ಎರಡನೇ ಬಾರಿ ಸಿಎಂ ಆಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು. ಬಸವಣ್ಣನವರು ಲಿಂಗಾಯತ ಧರ್ಮ‌ ಸ್ಥಾಪಿಸಿ ಮನುಷ್ಯ ಧರ್ಮದ ಏಳಿಗೆಗೆ ಮುಂದಾದರು. ಬಸವಾದಿ ಶರಣರು ಒಂದು ಜಾತಿ-ಧರ್ಮಕ್ಕೆ ಸೇರಿದವರಲ್ಲ. ನಾವು ಬಸವಾದಿ ಶರಣರ ಆಶಯದಂತೆ ಕಾಯಕ ಮತ್ತು ದಾಸೋಹ ಮೌಲ್ಯದಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು. 


ಇದನ್ನೂ ಓದಿ- Lok Sabha Election 2024: ಚಾಮರಾಜನಗರದ ಗಡಿ ಭಾಗದ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ಹಣ ಪೋಲೀಸರ ವಶಕ್ಕೆ 


ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ  ಸಿ.ಎಂ.ಸಿದ್ದರಾಮಯ್ಯ ಅವರು ಕೃತಜ್ಞತೆಯ ಮಾತುಗಳನ್ನಾಡಿದರು. 


ಸಮಾಜ ಕಲ್ಯಾಣ ಸಚಿವ ಹೆಚ್.ಸಿ‌.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು. 


ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamrajnagar Loksabha Constituency) ಅಭ್ಯರ್ಥಿ ಸುನಿಲ್ ಬೋಸ್ (Sunil Bose), ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ಸೇರಿ ವರುಣಾ ವಿಧಾನಸಭಾ ಕ್ಷೇತ್ರದ ಮುಖಂಡರು , ಬ್ಲಾಕ್ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸ್ಥಳೀಯ ನಾಯಕರುಗಳು ಸಭೆಯಲ್ಲಿ ಉಪಸ್ಥಿತರಿದ್ದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಶಪಥ ಮಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.