ಮೈಸೂರು : ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ತಮ್ಮ ಕಾಲೇಜು ದಿನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.


COMMERCIAL BREAK
SCROLL TO CONTINUE READING

ಜಾತಿ ಸಮಾಜ ಚಲನೆರಹಿತ;ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ: ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನೆ ಮಾಡಿ ಮಾತನಾಡಿದರು. 


ಇದನ್ನೂ ಓದಿ: ಎಲೆಕ್ಟ್ರಾನಿಕ್‌ ಸಿಟಿಯ ಫಾರ್ಮ್‌ ಹೌಸ್‌ನ ರೇವ್‌ ಪಾರ್ಟಿ ಪ್ರಕರಣ!


ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ ಎಂದರು. ಅಲ್ಲದೆ, ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ ಎಂದರು. 


ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.