Prajwal Revanna PenDrive Case: ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.


COMMERCIAL BREAK
SCROLL TO CONTINUE READING

ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು.


ಎಚ್‌ಡಿ ರೇವಣ್ಣ (HD Revanna) ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅವರು ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದರು. 


ಇದನ್ನೂ ಓದಿ- ನೂರಾರು ಹೆಣ್ಣುಮಕ್ಕಳ ಶೋಷಿಸುವ ರಾಕ್ಷಸನ ಪರ ಮೋದಿ ಪ್ರಚಾರ ಮಾಡಿದ್ದು ಯಾಕೆ?: ರಾಹುಲ್‌ ಗಾಂಧಿ


ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮಾಡಿರುವ ಆರೋಪವಿದೆ!
ಪ್ರಜ್ವಲ್ ರೇವಣ್ಣ (Prajwal Revanna) ಅವರ ಮೇಲೆ ಬಲಾತ್ಕಾರ ಮತ್ತು ಲೈಂಗಿಕ ಶೋಷಣೆ ಮಾಡಿರುವ ಆರೋಪವಿದೆ. ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 


ಸಂತ್ರಸ್ತ ಮಹಿಳೆಗೆ ರಕ್ಷಣೆ: 
ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಿರುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮಾಹಿತಿನೀಡಿದರು. 


ಎಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಎಚ್‌ಡಿ ದೇವೇಗೌಡರು (HD Devegowda) ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಯಾಕೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದಾರೆ. ರಾಜಕೀಯ ಹಾಗೂ ಕೃತ್ಯಗಳನ್ನು ಒಟ್ಟಿಗೆ ಮಾಡುತ್ತಾರೆ ಎಂದರು. 


ಇದನ್ನೂ ಓದಿ- ತನಿಖಾಧಿಕಾರಿಗಳ ಮುಂದೆ ಹಾಜರಾಗದೇ ಹೋದರೆ ರೇವಣ್ಣ ಬಂಧನ : ಪರಮೇಶ್ವರ್


ಅಮಿತ್ ಶಾ ರಾಜಕೀಯ ಹೇಳಿಕೆ! 
ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಲವ್ ಜಿಹಾದ್ (Love Jihad) ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅಮಿತ್ ಶಾ ಅವರು ರಾಜಕೀಯ ಹೇಳಿಕೆ ನೀಡಿದ್ದಾರೆ. ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ ಎಂದರು. 


ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ,  ಅಧಿಕಾರ ಉಳಿಸಿಕೊಳ್ಳಲು, ಬಿಜೆಪಿ ಮಾಡಬಾರದ್ದನ್ನು ಮಾಡುತ್ತಿದೆ. ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವ, ಮೀಸಲಾತಿ, ಐಕ್ಯತೆ, ಸಮಾನತೆಯಲ್ಲಿ ನಂಬಿಕೆ ಇಲ್ಲ . ಅಮಾಯಕರ ಕಣ್ಣೀರು, ಅವರಿಗೆ ಕಿರುಕುಳ ಕೊಟ್ಟು ಸಮಾಜ ಒಡೆಯುವುದು ಬಿಜೆಪಿಗೆ ರೂಢಿಯಾಗಿದೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.