ಡಿ.ಕೆ.ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ
Lok Sabha Election Results 2024: ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಂಚು ರೂಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೈತಿಕತೆ ಕುಸಿಯಬೇಕು ಅಂತಾ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರವೂ ಉಳಿಯಲ್ಲ. ರಾಜಕೀಯ ಧ್ರುವೀಕರಣ ಶುರುವಾಗತ್ತದೆ ಅಂತಾ ಸುರೇಶ್‌ಗೌಡ ಹೇಳಿದ್ದಾರೆ.
Lok Sabha Election Results 2024: ಮಾಜಿ ಸಂಸದ ಡಿ.ಕೆ.ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣವೆಂದು ಬಿಜೆಪಿ ಶಾಸಕ ಸುರೇಶ್ ಗೌಡ ಬಾಂಬ್ ಸಿಡಿಸಿದ್ದಾರೆ. ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಎಲ್ಲರೂ ಸೇರಿ ಡಿ.ಕೆ.ಸುರೇಶ್‌ರನ್ನು ಸೋಲಿಸುತ್ತಾರೆ ಅಂತಾ ಒಂದು ತಿಂಗಳ ಹಿಂದೆಯೇ ಹೇಳಿದ್ದೆ. ಈಗ ಅದು ರಿಪೀಟ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕೆಂದು ಒಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ.ಸುರೇಶ್‌ರನ್ನು ಸೋಲಿಸಿದ್ದಾರೆ. 2 ಲಕ್ಷ ಮತಗಳ ಅಂತರದಿಂದ ಸುರೇಶ್‌ರನ್ನು ಸೋಲಿಸುತ್ತಾರೆ ಅಂತಾ ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಸುರೇಶ್‌ರನ್ನು ಸೋಲಿಸಿದ್ದಾರೆ. ಇದು ಸಂಚಿನ ಒಂದು ಭಾಗ ಎಂದು ಹೇಳಿದ್ದಾರೆ.
ಇದನ್ನೂ ಓದಿ: Rain Alert: ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, 7 ಜಿಲ್ಲೆಗೆ ಆರೆಂಜ್ & 12 ಜಿಲ್ಲೆಗೆ ಯೆಲ್ಲೋ ಅಲರ್ಟ್!
ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಂಚು ರೂಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೈತಿಕತೆ ಕುಸಿಯಬೇಕು ಅಂತಾ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರವೂ ಉಳಿಯಲ್ಲ. ರಾಜಕೀಯ ಧ್ರುವೀಕರಣ ಶುರುವಾಗತ್ತದೆ ಅಂತಾ ಸುರೇಶ್‌ಗೌಡ ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿ ಒಳಜಗಳ ಶುರುವಾಗುತ್ತದೆ. ಈಗಾಗಲೇ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಕಿತ್ತಾಟ ಶುರುವಾಗಿದೆ. ಬೆಂಗಳೂರು ಗ್ರಾಮಾಂತರ ಸೋಲಿನಿಂದ ಇಲ್ಲೂ ಜಗಳ ಶುರುವಾಗಿದೆ. ಶೀಘ್ರವೇ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಅಂತಾ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಖಾಸಗಿ ವೀಡಿಯೋ ಬ್ಲಾಕ್ ಮೇಲ್: ಮಾನಕ್ಕೆ ಹೆದರಿ ವಿಷ ಸೇವಿಸಿದ ಕುಟುಂಬ
ಜೂನ್ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿತ್ತು. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್‌ರನ್ನು 2,69,647 ಮತಗಳ ಅಂತರದಿಂದ ಸೋಲಿಸಿದ್ದಾರೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಮಂಜುನಾಥ್ ಅವರು 10,79,002 ಮತಗಳನ್ನು ಪಡೆದುಕೊಂಡಿದ್ದು, ಡಿ.ಕೆ.ಸುರೇಶ್ ಅವರ 8,09,355 ಮತಗಳನ್ನು ಪಡೆದುಕೊಂಡಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.