SSLC ಟಾಪರ್‌ ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ 1 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯನವರು, ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ.

Written by - Puttaraj K Alur | Last Updated : May 14, 2024, 11:47 PM IST
  • SSLC ಟಾಪರ್‌ಗಳನ್ನು ಸನ್ಮಾನಿಸಿ ಗೌರವಿಸಿದ ಸಿಎಂ ಸಿದ್ದರಾಮಯ್ಯ
  • SSLC ಟಾಪರ್‌ ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ 1 ಕೋಟಿ
  • ದ್ವಿತೀಯ ಸ್ಥಾನ ಪಡೆದ ನವನೀತ್ ಕೆ.ಸಿ ಶಾಲೆಗೆ 50 ಲಕ್ಷ ಅನುದಾನ
SSLC ಟಾಪರ್‌ ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ 1 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ title=
SSLC ಟಾಪರ್‌ಗಳಿಗೆ ಸಿಎಂ ಗೌರವ

ಬೆಂಗಳೂರು: SSLC ಟಾಪರ್‌ ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ೧ ಕೋಟಿ ಅನುದಾನ ಘೋಷಿಸಿದ್ದಾರೆ. SSLC ಟಾಪರ್‌ಗಳನ್ನು ಸನ್ಮಾನಿಸಿದ ಬಳಿಕ ಅವರು ಈ ಘೋಷಣೆ ಮಾಡಿದ್ದಾರೆ. 

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಹಾಗೂ ದ್ವಿತೀಯ ರ‍್ಯಾಂಕ್‌ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಸಿಎಂ ಸಿದ್ದರಾಮಯ್ಯನವರು ಮಂಗಳವಾರ ಸನ್ಮಾನಿಸುವ ಮೂಲಕ ಶುಭ ಹಾರೈಸಿದ್ದಾರೆ. 

ಇದನ್ನೂ ಓದಿ: ಜೈಲಿನಿಂದ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿದ ಎಚ್.ಡಿ.ರೇವಣ್ಣ!

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯನವರು, ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ಗ್ರಾಮೀಣ ಮಕ್ಕಳು ಇನ್ನಷ್ಟು ಶೈಕ್ಷಣಿಕ ಸಾಧನೆಗಳನ್ನು ಮಾಡುವಂತಾಗಲಿ, ಈ ಮಕ್ಕಳು ಓದಿದ ಶಾಲೆ ಮತ್ತಷ್ಟು ಸರ್ಕಾರಿ ಶಾಲೆಗಳಿಗೆ ಸ್ಪೂರ್ತಿಯಾಗಲಿ ಎಂದು ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ 1 ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ. 

ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News