ಮೊದಲನೇ ಕಂತಿನಲ್ಲಿ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ : ಸಿಎಂ ಘೋಷಣೆ
ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಕೇಂದ್ರದಿಂದ ಸಿಕ್ಕಿಲ್ಲ. ಅದಕ್ಕಾಗಿ ಪರಿಹಾರ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಬೆಂಗಳೂರು : ಮೊದಲನೇ ಕಂತಿನಲ್ಲಿ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ಈ ತುರ್ತು ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಈ ಕುರಿತು ತುರ್ತು ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಅವರು, ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಕೇಂದ್ರದಿಂದ ಸಿಕ್ಕಿಲ್ಲ. ಆದಕಾರಣ ಮೊದಲನೇ ಕಂತಿನಲ್ಲಿ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ರಾಜ್ಯದ ಮುಖ್ಯಮಂತ್ರಿಗಳೇ ಹಾಗೂ ಸಚಿವರೇ ಈ ಸ್ಟೋರಿ ತಪ್ಪದೇ ನೋಡಿ
ಅಲ್ಲದೆ, ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನ ಉದ್ಯೋಗ ಕೊಡಲು ಅನುಮತಿ ಕೋರಲಾಗಿತ್ತು. ಕೇಂದ್ರ ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ, 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. 18171.44 ಕೋಟಿ ಪೆಇಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು.
ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು, 21-9-2023 ರಂದು ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ 4/10 ರಿಂದ 9/10 ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ:ಕಾಂತರಾಜು ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧ: ಸಚಿವ ಶಿವರಾಜ್ ತಂಗಡಗಿ
ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲದ ಸ್ಥಿತಿ ಇದೆ. 4663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಅಧಿಕಾರಿಗಳನ್ನಾದರೂ ಭೇಟಿ ಮಾಡಿ ಎಂದು ಹೇಳಿ ನಾನು ಮೂವರು ಸಚಿವರನ್ನು ದೆಹಲಿಗೆ ತೆರಳಲು ಹೇಳಿದ್ದೆ. 3 ಜನ ಡೆಲ್ಲಿಗೆ ಹೋಗಿದಾರೆ. ಅಧಿಕಾರಿಗಳಿಗೆ ವಿವರಿಸಿದ್ದಾರೆ, ಫೈನಾನ್ಸ್ ಮಿನಿಸ್ಟರ್ ಅವರನ್ನು ನಮ್ಮ ಸಚಿವರು ಭೇಟಿ ಮಾಡಿದಾರೆ ಕೇಂದ್ರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ ಎಂದು ಸಿಎಂ ತಿಳಿಸಿದರು.
ರಾಜ್ಯದ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ನಾನೇ ಭೇಟಿ ಮಾಡ್ತೀನಿ, ಸಮಯ ಕೊಡಿ ಎಂದು ಪತ್ರ ಬರೆದಿದ್ದೀನಿ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ. ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ 460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು , ಮೇವಿಗೆ 327 ಕೋಟಿ ಬಿಡುಗಡೆ, 780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ ಎಂದರು.
ಇದನ್ನೂ ಓದಿ: ತುಮಕೂರಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಮದ್ಯ ಅಕ್ರಮ ಮಾರಾಟ
ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ. ಹಲವು ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ ಬೀಜ ವಿತರಣೆ ಮಾಡಿದ್ದೇವೆ. ಈಗ ಮೊದಲ ಕಂತು ಅರ್ಹ ರೈತರಿಗೆ ತಲಾ 2000 ರೂವರೆಗೆ ಬೆಳೆ ಪರಿಹಾರ ಹಣ ನೀಡಲು ನಿರ್ಧರಿಸಿದ್ದೇವೆ. ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ ಎನ್ನುವ ಕಾರಣದಿಂದ ರಾಜ್ಯ ಸರ್ಕಾರ ಮೊದಲ ಕಂತು ಬಿಡುಗಡೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.