4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ : ಸಿಎಂ ಸಿದ್ದರಾಮಯ್ಯ

ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. 4860 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Written by - Krishna N K | Last Updated : Oct 6, 2023, 03:10 PM IST
  • ಕೇಂದ್ರದ ಅಧ್ಯಯನ ತಂಡಕ್ಕೆ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ವಿವರಿಸಲಾಗಿದೆ.
  • ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.
  • 4860 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.
4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ : ಸಿಎಂ ಸಿದ್ದರಾಮಯ್ಯ title=

ಚಿತ್ರದುರ್ಗ : ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ವಾಸ್ತವಿಕವಾಗಿ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ. ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ 4860 ಕೋಟಿ ರೂ. ಪರಿಹಾರವನ್ನು ಕೋರಲಾಗಿದ್ದು, ಈ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಮುರುಘಾಮಠದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ರಾಜ್ಯದ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿರುವ ಬಗ್ಗೆಪ್ರತಿಕ್ರಿಯೆ ನೀಡುತ್ತಾ, ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ.  ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ , ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶದಗಳಲ್ಲಿ ನೀರಿರುವುದಿಲ್ಲ. ಕೇಂದ್ರದ ಮಾರ್ಗಸೂಚಿಯಂತೆ  4860 ಕೋಟಿ  ರೂ.ಗಳ ಪರಿಹಾರವನ್ನು  ಕೇಂದ್ರದಿಂದ ಕೋರಲಾಗಿದೆ. ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ , ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬಿಜೆಪಿ ಸಮಾಜ ಒಡೆವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಹೊಲಿಯುತ್ತಿದೆ : ಡಿಸಿಎಂ

ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಧಾನ್ಯತೆ : ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದಲ್ಲಿನ ವಿಳಂಬವಾಗುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ,  ಹಿಂದಿನ ಸರ್ಕಾರದವರು ಈ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಈ ಮೊತ್ತವನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಕೋರಲಾಗಿದೆ. ನಮ್ಮ ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುವುದು. ಪ್ರಸಕ್ತ ವರ್ಷ ಹಾಗೂ ಮುಂದಿನ ವರ್ಷವೂ ಕೂಡ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

7 ನೇ ವೇತನ ಆಯೋಗದ ಅಧ್ಯಕ್ಷರೊಂದಿಗೆ ಮಾತನಾಡಿದ್ದು, ವರದಿ ಸಲ್ಲಿಕೆಯಾದ ನಂತರ ತೀರ್ಮಾನ ಕೈಗೊಳ್ಳಲಾಗುವುದು. ನಿಗಮ ಮಂಡಳಿಗಳ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News