ಎಷ್ಟೇ ಖರ್ಚಾದರೂ ಸರಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ
Guarantee Schemes: ಗ್ಯಾರಂಟಿ ಯೋಜನೆಗೆ ಎಷ್ಟೇ ಖರ್ಚಾದರೂ ಸರಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಭರವಸೆ
Guarantee Scheme: ಗ್ಯಾರಂಟಿ ಯೋಜನೆಗಳಿಂದಾಗಿ ಬಿಜೆಪಿ ನಾಯಕರಿಗೆ ಹೊಟ್ಟೆಯುರಿ ಉಂಟಾಗಿದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭಾ ಚುನಾವಣೆ ಆದ ಬಳಿಕ ಗ್ಯಾರಂಟಿ ಯೋಜನೆ (Guarantee scheme) ನಿಲ್ಲಿಸುತ್ತಾರೆ ಎಂದು ಸುಳ್ಳು ಹಬ್ಬಿಸುತ್ತಿದ್ದಾರೆ. ನಾನು ನಿಮಗೆ ಭರವಸೆ ಕೊಡುತ್ತೇನೆ, ಗ್ಯಾರಂಟಿ ಯೋಜನೆಗೆ ಎಷ್ಟೇ ಖರ್ಚಾದರೂ ಸರಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಮುಂದುವರೆಸುತ್ತೇವೆ ಎಂದರು.
ಕೊಳ್ಳೇಗಾಲದ ಎಂಜಿಎಸ್‌ವಿ ಮೈದಾನದಲ್ಲಿ ನಡೆದ ಪ್ರಜಾ ಧ್ವನಿ ಸಮಾವೇಶ (Praja Dvanhi Samavesh) ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah), ಬಡವರು, ದಲಿತರು, ಹಿಂದುಳಿದ ವರ್ಗಗಳು ಕಂಡರೇ ಬಿಜೆಪಿ ಅವರಿಗೆ ಆಗಲ್ಲ. ಗ್ಯಾರಂಟಿ ಜಾರಿಯಿಂದ ಅವರಿಗೆ ಹೊಟ್ಟೆಯುರಿ ಉಂಟಾಗಿದೆ, ಅದಕ್ಕೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಇತ್ತೀಚೆಗೆ ವೈರಲ್ಲಾಗಿದ್ದ ಪತ್ರಿಕಾ ತುಣುಕಿನ ವಿರುದ್ಧ ಕಿಡಿಕಾರಿದರು.
ಇದನ್ನೂ ಓದಿ- ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ
ಬಿಜೆಪಿ ಅವರು ಮಾತಿಗೆ ತಪ್ಪಿ ನಡೆಯುವವರು, ಸುಳ್ಳು ಅವರ ಮನೆ ದೇವರು. ಆದರೆ, ಕಾಂಗ್ರೆಸ್ (Congress) ನುಡಿದಂತೆ ನಡೆಯುವ ಸರ್ಕಾರ, ಬಡವರಿಗೆ ಅಕ್ಕಿ ಕೊಟ್ಟರೆ ಕಾಂಗ್ರೆಸ್ ಪರ ನಿಲ್ಲುತ್ತಾರೆಂದು ಅಕ್ಕಿಯನ್ನೇ ಕೊಡಲಿಲ್ಲ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.
ಹಿಟ್ಲರ್ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವವರು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi), ಅವರು ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿಯಾಗಿದ್ದಾರೆ. ಬಿಜೆಪಿ ಆಡಳಿತದಲ್ಲಿ ಸಂವಿಧಾನ ಸುರಕ್ಷಿತವಾಗಿಲ್ಲ, ಸಂವಿಧಾನ ಉಳಿಯಬೇಕಾದರೇ ಕಾಂಗ್ರೆಸ್ ಗೆಲ್ಲಬೇಕು ಎಂದರು.
ಇದನ್ನೂ ಓದಿ- ಮಧ್ಯರಾತ್ರಿವರೆಗೂ ಮೆಟ್ರೋ ಅವಧಿ ವಿಸ್ತರಣೆ : ಬಿಎಂಆರ್ ಸಿಎಲ್ ಆದೇಶ
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಸಂಪೂರ್ಣ ವಿಫಲರಾಗಿದ್ದಾರೆ. ಇಂದಿಗೂ ಕೂಡ ಕಪ್ಪು ಹಣ ವಾಪಾಸ್ ತಂದಿಲ್ಲ, ಮೇಕ್ ಇನ್ ಇಂಡಿಯಾ (Make In India) ಆಗಿಲ್ಲ, ಅಚ್ಚೇ ದಿನ್ ಬಂದಿಲ್ಲ ಎಂದು ಕಿಡಿಕಾರಿದರು.
ಮೋದಿ ಮುಖ ನೋಡಿ ವೋಟ್ ಹಾಕಿ ಎಂದು ರಾಜ್ಯದ ನಾಯಕರು ಹೇಳುತ್ತಿದ್ದಾರೆ. ಇಲ್ಲಿನ ನಾಯಕರಿಗೆ ಓಟ್ ಕೇಳುವ ನೈತಿಕತೆ ಇಲ್ಲಾ, ಮೋದಿ ಮುಖ ಬಿಟ್ಟು ಚುನಾವಣಾ ವಸ್ತುವಿಲ್ಲ, ತಮ್ಮ ಸಾಧನೆ ಹೇಳಿ ಅವರು ಮತ ಕೇಳುತ್ತಿಲ್ಲ. ತಾವು ಈ ಬಾರಿ ಕೆಟ್ಟದಾಗಿ ಸೋಲುತ್ತೇವೆ ಎಂದು ಹೆದರಿ ಬಿಜೆಪಿ- ಜೆಡಿಎಸ್ ಒಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.