ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯನವರು ಇಂದು(ಭಾನುವಾರ) ತಮಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ತ್ಯಜಿಸಿದ್ದಾರೆ. ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಜೀರೋ ಟ್ರಾಫಿಕ್ ಬೇಡ ಅಂತಾ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೋ ಟ್ರಾಫಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: DK Shivakumar : ನೊಣವಿನಕೆರೆ ಅಜ್ಜಯ್ಯನ ಮಠದತ್ತ ಡಿಕೆಶಿ ಪ್ರಯಾಣ; ಕೆಟ್ಟು ನಿಂತ ಎಸ್ಕಾಟ್ ವಾಹನ
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ.
— Siddaramaiah (@siddaramaiah) May 21, 2023
ತಮ್ಮ ವಾಹನ ಸಂಚಾರಕ್ಕೆ ನೀಡಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ವಾಹನ ಸಂಚರಿಸುವ ವೇಳೆ ಅವರ ಸುಗಮ ಸಂಚಾರಕ್ಕೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರಿಂದ ಸಿಗ್ನಲ್ಗಳಲ್ಲಿ ವಾಹನ ಸವಾರರು ಕೆಲವು ನಿಮಿಷ ಕಾಯಬೇಕಾಗುತ್ತದೆ. ಇದು ಸಾರ್ವಜಕರಿಗೆ ತೊಂದರೆ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗುತ್ತದೆ. ಇದರಿಂದ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ತಮಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ಹೇಳಿದ್ದಾರೆ.
ಇದನ್ನೂ ಓದಿ: 12 ನೇ ತರಗತಿ ತೇರ್ಗಡೆಯಾದ ಸಿಎಂ ಸಿದ್ದರಾಮಯ್ಯ ಮೊಮ್ಮಗ ಧವನ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.