ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಕುರಿತು ಯಾವ ಗೊಂದಲವೂ ಇಲ್ಲ : ಸಿಎಂ
ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಯನ್ನು ಜಾರಿಗೆಗೊಳಿಸುವಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಬೆಂಗಳೂರು : 5 ಉಚಿತ ಯೋಜನೆಗಳ ಸಾಲಿನಲ್ಲಿರುವ ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಯ ಕುರಿತಂತೆ ಯಾವ ಗೊಂದಲವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಅವರು ಇಂದು ತಮ್ಮ ಸ್ವಕ್ಷೇತ್ರ ಮೈಸೂರಿಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ನಾವು ನುಡಿದಂತೆ ನಡೆಯುವವರು ಎಂದರು. ಅಲ್ಲದೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭರವಸೆಗಳನ್ನು ನೀಡಿದ್ದರು. ಅವುಗಳಲ್ಲಿ ಎಷ್ಟು ಈಡೇರಿವೆ ಎಂಬ ಬಗ್ಗೆ ಎಷ್ಟು ಚರ್ಚೆಯಾಗಿದೆಯೇ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ನಾಳೆಯಿಂದ ಮಹಿಳೆಯರ ಉಚಿತ ಸಾರಿಗೆ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ
ಇಂದು ಮೈಸೂರಿಗೆ ತೆರಳಿ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ತಿಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.