ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ: ಸಿಎಂ ಸಿದ್ದರಾಮಯ್ಯ
CM Siddaramaiah: ನಮ್ಮ ಸರ್ಕಾರದ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ಆಗಿರುವ ನಷ್ಟ ಅಂದಾಜು 33,770 ಕೋಟಿ ರೂಪಾಯಿ. ಕೇಂದ್ರ ಸರ್ಕಾರದಿಂದ ನಾವು ಕೇಳಿರುವುದು 17,901 ಕೋಟಿ ರೂಪಾಯಿ ಪರಿಹಾರ. ಕೇಂದ್ರ ಸರ್ಕಾರದಿಂದ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಂದಿಲ್ಲ. ಬಿಜೆಪಿ ನಾಯಕರೇ, ರಾಜ್ಯದ ರೈತರ ಬಗ್ಗೆ ನಿಮಗೆ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಮೊದಲು ಹೆಚ್ಚು ಪರಿಹಾರಕ್ಕಾಗಿ ಒತ್ತಾಯಿಸಿ ಎಂದವರು ಹೇಳಿದ್ದಾರೆ.
CM Siddaramaiah: "ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ" ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ. ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ. ಈ ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರ ಬರ ಅಧ್ಯಯನ ಯಾತ್ರೆ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ನಾಯಕರೇ, ನಿಮ್ಮದೇ ಪಕ್ಷದ ಸರ್ಕಾರಕ್ಕೆ ಸೇರಿದ ತಜ್ಞರ ತಂಡವೇ ದೆಹಲಿಯಿಂದ ಬಂದು ಕರ್ನಾಟಕದಲ್ಲಿನ ಬರಪರಿಸ್ಥಿತಿಯನ್ನು ಅಧ್ಯಯನ ಮಾಡಿ ಹೋಗಿದೆ. ಈಗ ನೀವು ಅದೇ ಉದ್ದೇಶದಿಂದ ಇನ್ನೊಂದು ಪ್ರವಾಸಕ್ಕೆ ಹೊರಟಿದ್ದೀರಿ. ಯಾಕೆ, ನಿಮ್ಮದೇ ಸರ್ಕಾರ ಕಳಿಸಿರುವ ಬರ ಅಧ್ಯಯನ ತಂಡದ ಮೇಲೆ ನಿಮಗೆ ನಂಬಿಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ನಮ್ಮ ಸರ್ಕಾರದ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ಆಗಿರುವ ನಷ್ಟ ಅಂದಾಜು 33,770 ಕೋಟಿ ರೂಪಾಯಿ. ಕೇಂದ್ರ ಸರ್ಕಾರದಿಂದ ನಾವು ಕೇಳಿರುವುದು 17,901 ಕೋಟಿ ರೂಪಾಯಿ ಪರಿಹಾರ. ಕೇಂದ್ರ ಸರ್ಕಾರದಿಂದ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಂದಿಲ್ಲ. ಬಿಜೆಪಿ ನಾಯಕರೇ, ರಾಜ್ಯದ ರೈತರ ಬಗ್ಗೆ ನಿಮಗೆ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಮೊದಲು ಹೆಚ್ಚು ಪರಿಹಾರಕ್ಕಾಗಿ ಒತ್ತಾಯಿಸಿ ಎಂದವರು ಹೇಳಿದ್ದಾರೆ.
ಇದನ್ನೂ ಓದಿ- ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ : ಈ ಭಾಗದಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನೊಂದಿಗೆ ಅಬ್ಬರಿಸಲಿದ್ದಾನೆ ವರುಣ
ಡಬಲ್ ಎಂಜಿನ್ ಸರ್ಕಾರ ಬಂದರೆ ರಾಜ್ಯದಲ್ಲಿ ಹಾಲು-ಜೇನಿನ ಹೊಳೆ ಹರಿಯತ್ತದೆ ಎಂದು ಅಮಾಯಕ ಕನ್ನಡಿಗರನ್ನು ನಂಬಿಸಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸಂಸದರನ್ನು ಗೆಲ್ಲಿಸಿಕೊಂಡರಲ್ಲಾ, ಅವರೇನು ಮಾಡುತ್ತಿದ್ದಾರೆ? ಕಳ್ಳೆಕಾಯಿ ತಿನ್ನುತ್ತಿದ್ದಾರಾ? ಅವರೆಂದಾದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಬಾಯಿ ಬಿಟ್ಟಿದ್ದಾರಾ? ಎಂದು ರಾಜ್ಯ ಬಿಜೆಪಿ ಸಂಸದರ ವಿರುದ್ಧ ಸಿಎಂ ವಾಗ್ಧಾಳಿ ನಡೆಸಿದ್ದಾರೆ.
ಬಿಜೆಪಿ ನಾಯಕರೇ ನೀವು ಯಾತ್ರೆ ಮಾಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನೀವು ಯಾತ್ರೆ ಹೊರಡಬೇಕಾಗಿರುವುದು ದೆಹಲಿಗೆ. ನಿಮ್ಮ ಪಕ್ಷದ 25 ಲೋಕಸಭಾ ಸದಸ್ಯರನ್ನು ಕಟ್ಟಿಕೊಂಡು ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರ ಕಾಲಿಗಾದರೂ ಬಿದ್ದು ಬರಪರಿಹಾರಕ್ಕೆ ಹೆಚ್ಚು ಹಣ ಕೊಡುವಂತೆ ಕೇಳಿ. ನಿಮಗೆ ಕೇಳುವ ಧೈರ್ಯ ಇಲ್ಲ ಎಂದಾದರೆ ಪ್ರಧಾನಿ ಜೊತೆ ಭೇಟಿಗಾಗಿ ನನಗಾದರೂ ಒಂದು ಅಪಾಯಿಂಟ್ ಮೆಂಟ್ ಕೊಡಿಸಿ ಬಿಡಿ.
ಇದನ್ನೂ ಓದಿ- ಬೆಳಗಾವಿಯಲ್ಲಿ ರಮೇಶ್ v/s ಡಿಕೆಶಿ ಟಾಕ್‌ವಾರ್
ನೆಲ-ಜಲ-ಭಾಷೆಯ ವಿಚಾರದಲ್ಲಿ ಕರ್ನಾಟಕಕ್ಕೆ, ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ಸಾಲು ಸಾಲು ಅನ್ಯಾಯ ಮಾಡಿ ಯಾವ ಮುಖ ಹೊತ್ತು ರಾಜ್ಯ ಪ್ರವಾಸ ಹೊರಟಿದ್ದೀರಿ? ಬರಪೀಡಿತ ಜನರಿಗೆ ಬೇಕಾಗಿರುವುದು ನಿಮ್ಮ ಬಾಯಿ ಮಾತಿನ ಸಾಂತ್ವನ ಅಲ್ಲ, ಅವರಿಗೆ ಬೇಕಾಗಿರುವುದು ಪರಿಹಾರ. ಬರಗಾಲದ ನಷ್ಟ - ನೋವನ್ನು ಬಳಸಿಕೊಂಡು ರಾಜಕೀಯ ಬೇಳೆ ಬೇಯಿಸಲು ಹೊರಟಿರುವ ನಿಮ್ಮನ್ನು ಜನ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ, ಜಾಗ್ರತೆಯಿಂದಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.