ಮೈಸೂರು‌: ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ  ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


COMMERCIAL BREAK
SCROLL TO CONTINUE READING

ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ NTA ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ ಎಂದರು.


ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಏನು ಮಾಡಿದರು ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಆರ್.ಎಸ್.ಎಸ್ ನಾ ರಾಜಕೀಯ ಮುಖವಾಡ ಅದು ಹಾಗಾಗಿ ಉತ್ತರ  ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆರ್.ಎಸ್.ಎಸ್ ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ ಎಂದರು.


ಇದನ್ನೂ ಓದಿ: ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ, ಅಧ್ಯಯನ ನಡೆಸಿ ತೀರ್ಮಾನ: ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ 


ರಾಯ್ ಎಂಬುವರಿಗೆ 2010 ರ್ಯಾಲಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬಂಧಿಸಲು ಆದೇಶ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯದ್ದು ದ್ವೇಷದ ರಾಜಕಾರಣ. ಹೆದರಿಸುವುದು ಬೆದರಿಸುವುದು, ಇಡಿ, ಸಿಬಿಐ ಬಳಕೆ ಮಾಡುವುದನ್ನು ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಅದಕ್ಕಾಗಿ ಜನ ಈ ಬಾರಿ ಅವರಿಗೆ ಬಹುಮತ ಕೊಡಲಿಲ್ಲ ಎಂದರು. 


ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಮ್ಮ ಮೇಲೆ, ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದರು. 


ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ ಪ್ರೀತಿಯ ರಾಜಕ್ಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು.


ದ್ವೇಷದ ರಾಜಕಾರಣವನ್ನು ನಾನು  ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು  ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ ಎಂದರು.


ಇದನ್ನೂ ಓದಿ: ಜೂನ್ 17ರಂದು ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಈ ಮಾರ್ಗಗಳಲ್ಲಿ ಸೇವೆ ರದ್ದು!!


ಎಸ್.ಸಿ.ಎಸ್.ಟಿ ಮೆರಿಟ್ ವಿದ್ಯಾರ್ಥಿವೇತನವನ್ನು ಶೇ.  60ರಿಂದ ಶೇ 75 ಕ್ಕೆ ಏರಿಸಿದ್ದು, 6 ಲಕ್ಷ ಸೀಲಿಂಗ್ ಲಿಮಿಟ್ ನಿಗದಿಪಡಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. 


ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನ ಶುಲ್ಕ ಶೇ.10%ರಷ್ಟು  ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಈ ಬಗ್ಗೆ ನನಗೆ ಗೊತ್ತಿಲ್ಲ ವಿಚಾರ ಮಾಡುವುದಾಗಿ ತಿಳಿಸಿದರು. ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣೆಯನ್ನು ಆದಷ್ಟೂ ಶೀಘ್ರದಲ್ಲಿ  ಮಾಡುತ್ತೇವೆ  ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.