ನೀತಿ ಆಯೋಗದ ಸಭೆಗೆ ಹಾಜರಾಗದೇ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈಲ್ವೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಕೊಡದೇ ಕೇಂದ್ರ ಸರ್ಕಾರದ ವಿರುದ್ದ ಅಸಹಕಾರ ತೋರುತ್ತಿದ್ದಾರೆ.
ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಬೇಕಾದ ಯೋಜನೆಗಳ ಕುರಿತು ಚರ್ಚಿಸುವ ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮೊದಲ ಪದಕ: ಶೂಟಿಂಗ್ʼನಲ್ಲಿ ಕಂಚು ಗೆದ್ದ ಮನು ಭಾಕರ
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈಲ್ವೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಕೊಡದೇ ಕೇಂದ್ರ ಸರ್ಕಾರದ ವಿರುದ್ದ ಅಸಹಕಾರ ತೋರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ಅಪಪ್ರಚಾರದಲ್ಲಿ ನಿಸ್ಸೀಮರು. ನಿರಂತರವಾಗಿ ಕೇಂದ್ರದ ಮೇಲೆ ಆಪಾದನೆ ಮಾಡುವುದು ಅವರಿಗೆ ಚಟವಾಗಿದೆ. ಕಾಂಗ್ರೆಸ್ ಪಕ್ಷದವರು ಅಪಪ್ರಚಾರ ಮಾಡುವ ಮೂಲಕ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದ ವಾಗ್ದಾಳಿ ನಡೆಸಿದರು.
ಈ ಬಾರಿ ರಾಜ್ಯದ ರೈಲ್ವೆ ಯೋಜನೆಗಳಿಗೆ 7,329 ಕೋಟಿ ರೂಪಾಯಿ ಕೊಟ್ಟಿದ್ದೇವೆ. ಕಳೆದ ಬಾರಿ, ಅದರ ಹಿಂದಿನ ಬಾರಿಯೂ 7 ಸಾವಿರ ಕೋಟಿ ಕೊಡಲಾಗಿತ್ತು. ಯುಪಿಎ ಕಾಲದಲ್ಲಿ ವರ್ಷಕ್ಕೆ ಕೇವಲ 600 ಕೋಟಿ ಕೊಟ್ಟಿದ್ದರು. ಈಗ ಅದರ 10 ಪಟ್ಟು ಹೆಚ್ಚು ಕೊಟ್ಟರೂ ಕೇಂದ್ರದಿಂದ ಏನೂ ಸಿಗುತ್ತಿಲ್ಲ ಎಂದು ಆರೋಪಿಸುತ್ತಾರೆ. ರಾಜ್ಯ ಸರ್ಕಾರ ತನ್ನ ಪಾಲಿನ ಮ್ಯಾಚಿಂಗ್ ದುಡ್ಡು ಕೊಟ್ಟಿಲ್ಲ. ಭೂ ಸ್ವಾಧೀನ ಮಾಡಿಲ್ಲ. ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ಅಸಹಕಾರ ಮಾಡುತ್ತಿದೆ. ರಾಜ್ಯದ ಬೆಳೆವಣಿಗೆ, ಅಭಿವೃದ್ಧಿ, ಹಿತ ಕಾಪಾಡಲು ರಾಜ್ಯ ಸರ್ಕಾರ ತಯಾರಿಲ್ಲ ಎಂದರು.
ಸಾಗರಮಾಲಾ ಯೋಜನೆಯಲ್ಲಿ 700 ಕೋಟಿ ರೂ. ಬರುತ್ತದೆ. ಬಂಡವಾಳ ಹೂಡಿಕೆಗೆ 6,280 ಕೋಟಿ ರೂಪಾಯಿ ಬಜೆಟ್ ನಲ್ಲಿ ಕೊಟ್ಟಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಗಳಿಗೆ ಶೂನ್ಯ ಬಡ್ಡಿಯಲ್ಲಿ 50 ವರ್ಷದ ನಂತರ ತೀರಿಸಲು ಸಾಲ ನೀಡುತ್ತದೆ. ಅದು ಕೂಡ ಬಹುತೇಕ ಅನುದಾನ ಇದ್ದಹಾಗೆ, ವಿಪತ್ತು ನಿರ್ವಹಣೆಗೆ 6,396 ಕೋಟಿ ರೂಪಾಯಿ ಕೊಟ್ಟಿದೆ. ಇದಲ್ಲದೇ ರಸ್ತೆಗೆ, ಪಿಎಂ ಆವಾಸ್, ಗ್ರಾಮ್ ಸಡಕ್ ಯೋಜನೆ ಸೇರಿದಂತೆ ಕೇಂದ್ರದ ಹಲವಾರು ಯೋಜನೆಯಲ್ಲಿ ರಾಜ್ಯಕ್ಕೆ ಹಣ ಬರುತ್ತಿದೆ. ಬಂದ ಹಣವನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕಿದೆ. ರಾಜ್ಯ ಸರ್ಕಾರಕ್ಕೆ ಮ್ಯಾಚಿಂಗ್ ಗ್ರ್ಯಾಂಟ್ ಕೊಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ. ಹೀಗಾಗಿ ಅಪ ಪ್ರಚಾರ ಮಾಡುತ್ತಿದೆ. ಇದು ಅತ್ಯಂತ ಖಂಡನೀಯ. ರಾಜ್ಯದ ಜನರಿಗೆ ಇದು ಗೊತ್ತಿದ್ದೆ ಎಂಪಿ ಚುನಾವಣೆಯಲ್ಲಿ ಸೋಲಿಸಿದ್ದಾರೆ. ನಾವು ಅಧಿಕಾರದಲ್ಲಿದ್ದಾಗ ಉಳಿತಾಯ ಬಜೆಟ್ ಮಂಡನೆ ಮಾಡಿದ್ದೇವು. ಈಗ ಕೊರತೆ ಬಜೆಟ್ ಮಾಡಿದ್ದಾರೆ.1,631 ಕೋಟಿ ರೂಪಾಯಿ ಕೊರತೆ ಬಜೆಟ್ ಮಂಡಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಮುಂಬರುವ ಟಿ20 ವಿಶ್ವಕಪ್ʼಗಾಗಿ ನಿವೃತ್ತಿ ಹಿಂಪಡೆದ ಸ್ಟಾರ್ ಕ್ರಿಕೆಟರ್!
ಮಾಫಿಯಾಗೆ ಕಡಿವಾಣ ಹಾಕಬೇಕು
ಇನ್ನು ರೈಲುಗಳ ಮೂಲಕ ಬೆಂಗಳೂರಿಗೆ ಬರುವ ಮಾಂಸದ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗೃಹ ಸಚಿವರಿಗೆ ವೆಟರ್ನರಿ ಜ್ಞಾನ ಇದೆ ಅಂತಾ ನನಗೆ ಗೊತ್ತಿರಲಿಲ್ಲ.. ಬಾಕ್ಸ್ ನಲ್ಲಿ ಸಿಕ್ಕಿರುವ ಮಾಂಸ ಯಾವುದು ಅಂತಾ ತಜ್ಞರೇ ಹೇಳಬೇಕು. ಇದು ಜನಸಾಮಾನ್ಯರ ಆರೋಗ್ಯದ ಪ್ರಶ್ನೆ. ಈ ಬಗ್ಗೆ ತಜ್ಞರೇ ಪರಿಶೀಲಿಸಿ ಹೇಳಬೇಕು. ಅಲ್ಲಿವರೆಗೂ ಯಾರೇ ಏನೇ ಮಾತನಾಡಿದರೂ ಅದಕ್ಕೆ ಅರ್ಥ ಇಲ್ಲ. ಈಗಾಗಲೇ ಕಡಿಮೆ ದರಕ್ಕೆ ಸಿಗುತ್ತದೆ ಅಂತಾ ಏನು ಬೇಕಾದರೂ ತಿನ್ನಿಸುವ ಹುನ್ನಾರ ನಡೆಯುತ್ತಿದೆ. ಮೊದಲಿನಿಂದಲೂ ಇದೊಂದು ಮಾಫಿಯಾ ರೀತಿ ನಡೆಯುತ್ತಿದೆ. ಅದನ್ನು ಸರ್ಕಾರ ಕಡಿವಾಣ ಹಾಕಬೇಕು ಎಂದ ಆಗ್ರಹಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
: