ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. 

Written by - Prashobh Devanahalli | Last Updated : Dec 2, 2024, 12:49 PM IST
  • ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ
  • ಬ್ಯಾಟಿಂಗ್ ಆಡುವ ಮೂಲಕ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
  • ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ
ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ  title=

ತುಮಕೂರು : ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು. 

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ  ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದರು. ಆದಷ್ಟು ಶೀರ್ಘದಲ್ಲಿ  ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಿ ಎಂದು ತಿಳಿಸಿದರು. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದರು. 

ಇದನ್ನೂ ಓದಿ: Rain Alert: ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ!!

ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರು, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ರಘುರಾಮ್ ಭಟ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಾಸಕ ಸುರೇಶ್ ಗೌಡಗೆ ಸಿಎಂ ಟಾಂಗ್: 

ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ತೋರಿಸಿ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿರುವ ಗ್ರಾಮಾಂತರ ಶಾಸಕ ಸುರೇಶ್ ಗೌಡ ಅವರಿಗೆ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಟಾಂಗ್ ಕೊಟ್ಟರು. 

ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯಲ್ಲೆ ಉತ್ತರಿಸಿದರು.

ಇದನ್ನೂ ಓದಿ: ಫೆಂಗಲ್ ಅಬ್ಬರಕ್ಕೆ ಮಾದಪ್ಪನ ಬೆಟ್ಟದ ರಸ್ತೆಯಲ್ಲಿ 4 ತಾಸು ಟ್ರಾಫಿಕ್ ಜಾಮ್, ಗಡಿಜಿಲ್ಲೆಯಲ್ಲಿ ಅತ್ಯಧಿಕ ಮಳೆ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News