CM Siddaramaiah: ತಾನು ಎಂಪಿಯಾದರೇ ಸಿಎಂ ಕುರ್ಚಿ ಅಲುಗಾಡಲಿದೆ ಎಂಬ  ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಟಾಂಗ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎರಡು ಸಾರಿ ಎಂಪಿ ಆಗಿದ್ದಾರಲ್ಲ ನನ್ನ ಕುರ್ಚಿ ಅಲುಗಾಡಲೇ ಇಲ್ಲಾ, ಕ್ಯಾಂಡಿಡೇಟ್ ಯಾರದಾರೂ ಆಗಲಿ ನಾವು ಈ ಬಾರಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದಿದ್ದಾರೆ. 


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಪ್ರತಾಪ್ ಸಿಂಹ ಹೇಳಿಕೆ ಟಾಂಗ್ ನೀಡಿದರು. 


ಲೋಕಸಭಾ ಚುನಾವಣೆ: ಪ್ರತಾಪ್ ಸಿಂಹ ಬದಲಿಗೆ ಬೇರೆಯವರಿಗೆ ಬಿಜೆಪಿ ಟಿಕೆಟ್: 
ಇನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆಂದು ಬಿಜೆಪಿಯವರು ಅಭ್ಯರ್ಥಿ ಬದಲಾವಣೆ ಮಾಡುತ್ತಿರಬಹುದು ನನಗೆ ಗೊತ್ತಿಲ್ಲ. ಯದುವೀರ್ ಕ್ಯಾಂಡಿಡೇಟ್ ಆಗುವುದು ಇನ್ನು ಗೊತ್ತಿಲ್ಲ. ಮಾಧ್ಯಮವರು ಸೃಷ್ಟಿ ಮಾಡಿಕೊಂಡು ಹೊಂದಾಣಿಕೆ ರಾಜಕೀಯ ಎಂದರೆ ಹೇಗೆ ಎಂದು ಕಿಡಿಕಾರಿದರು.


ಇದನ್ನೂ ಓದಿ- Lok Sabha Election 2024: ಚುನಾವಣೆಗೂ ಮುನ್ನ ಆನ್‌ಲೈನ್‌ನಲ್ಲಿ ವೋಟರ್ ಐಡಿ ವಿಳಾಸವನ್ನು ಸುಲಭವಾಗಿ ಅಪ್ಡೇಟ್ ಮಾಡಿ


ಸಂವಿಧಾನ ಬದಲಿಸುವುದು ಬಿಜೆಪಿ ಹಿಡನ್ ಅಜೆಂಡಾ!
ಇದೇ ಸಂದರ್ಭದಲ್ಲಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಸಂವಿಧಾನ ಬದಲಿಸುವುದು ಬಿಜೆಪಿ ಹಿಡನ್ ಅಜೆಂಡಾ. ಅದನ್ನು ಸಂಸದ ಅನಂತ ಕುಮಾರ್ ಹೆಗ್ಡೆ ಮೂಲಕ ಹೇಳಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.


ಅನಂತಕುಮಾರ್  ಹೆಗ್ಡೆ ಆರ್ಡಿನರಿ ವ್ಯಕ್ತಿ ಅಲ್ಲಾ, ಐದು ಬಾರಿ ಸಂಸದರಾಗಿದ್ದವರು, ಕೇಂದ್ರ ಸಚಿವರಾಗಿದ್ದವರು, ಸಂವಿಧಾನ ಬದಲಿನ ವಿಚಾರ ಹೇಳಬೇಕಾದರೆ ಪಕ್ಷದ ತೀರ್ಮಾನ ಆಗಿರದೇ ಹೇಳಲು ಸಾಧ್ಯವೇ? ಅವರ ವಿರುದ್ಧ ಏನಾದರೂ ಕ್ರಮ ತೆಗೆದುಕೊಂಡ್ರಾ ಎಂದು ಪ್ರಶ್ನೆ ಮಾಡಿದರು.


ಮನುಸ್ಮೃತಿ ಮೇಲೆ ನಂಬಿಕೆ ಇಟ್ಟಿರುವ ಪಕ್ಷ ಅದಾಗಿದ್ದು, ಮನುವಾದದಲ್ಲಿ ನಂಬಿಕೆ ಇಟ್ಟವರು, ಸಂವಿಧಾನ ಜಾರಿಯಾದ ದಿನದಿಂದಲೂ ಅವರು ಸಂವಿಧಾನ ವಿರೋಧ ಮಾಡಿಕೊಂಡೇ ಬಂದಿದ್ದಾರೆ, ಈಗ ಅನಂತ ಕುಮಾರ್ ಹೆಗ್ಡೆ ಮೂಲಕ ಹೇಳಿಸುತ್ತಿದ್ದಾರೆ ಎಂದರು.


ಇದನ್ನೂ ಓದಿ- ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಳ : ನಿಯೋಗದೊಂದಿಗೆ ಮುಖ್ಯಮಂತ್ರಿಗೆ ಮನವಿ


ಸಿಎಎ ಚುನಾವಣಾ ಸಂದರ್ಭದಲ್ಲಿ ಏಕೆ ಜಾರಿ ಮಾಡಬೇಕಿತ್ತು..? ಧರ್ಮದ ಆಧಾರದ ಮೇಲೆ ಪೌರತ್ವ ಕೊಡಲು ನಮ್ಮ ವಿರೋಧವಿದೆ, ಎಂದು ಸಿಎಎ ಜಾರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.