ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತಾ? ಸಿಎಂ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಹೀಗಿದೆ…

CM Siddaramaih on Guarantee Yojana: ಚಲನ ರಹಿತವಾದ ಜಾತಿ ವ್ಯವಸ್ಥೆ ಬಲವಾಗಿ ಬೇರು ಬಿಟ್ಟಿರುವುದರಿಂದ ಬದಲಾವಣೆ ತರಲು ಇಂದಿಗೂ ಸಾಧ್ಯವಾಗಿಲ್ಲ.  ದಾರ್ಶನಿಕರ ಪ್ರಯತ್ನದಿಂದಾಗಿ  ಸ್ವಲ್ಪ ಸರಿಹೋಗುವ ಜಾತಿ ವ್ಯವಸ್ಥೆ ಮತ್ತೆ ಯಥಾಸ್ಥಿತಿಗೆ ಮರಳುತ್ತದೆ. ಬಸವಾದಿ ಶರಣರು,  ಇವನಾರವ ಎನ್ನದೇ ಇವ ನಮ್ಮವ ಎಂದು ಭಾವಿಸುವಂತೆ ಹೇಳಿದ್ದರು ಎಂದರು.

Written by - Prashobh Devanahalli | Edited by - Bhavishya Shetty | Last Updated : Feb 9, 2024, 05:38 PM IST
    • ಆರ್ಥಿಕ, ಸಾಮಾಜಿಕ ಅಸಮಾನತೆ ನಮ್ಮ ದೇಶದ ಜಾತಿ ವ್ಯವಸ್ಥೆ ಕಾರಣ
    • ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದ ನಾರಾಯಣಗುರು
    • ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತಾ? ಸಿಎಂ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಹೀಗಿದೆ… title=
CM Siddaramaiah on Guarantee Schemes

CM Siddaramaih on Guarantee Yojana: ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ. ಪುರುಷೋತ್ತಮಾನಂದಪುರಿ  ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ರಾಷ್ಟ್ರೀಯ ಭಗೀರಥ ಮಹೋತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಚಲನ ರಹಿತವಾದ ಜಾತಿ ವ್ಯವಸ್ಥೆ ಬಲವಾಗಿ ಬೇರು ಬಿಟ್ಟಿರುವುದರಿಂದ ಬದಲಾವಣೆ ತರಲು ಇಂದಿಗೂ ಸಾಧ್ಯವಾಗಿಲ್ಲ.  ದಾರ್ಶನಿಕರ ಪ್ರಯತ್ನದಿಂದಾಗಿ  ಸ್ವಲ್ಪ ಸರಿಹೋಗುವ ಜಾತಿ ವ್ಯವಸ್ಥೆ ಮತ್ತೆ ಯಥಾಸ್ಥಿತಿಗೆ ಮರಳುತ್ತದೆ. ಬಸವಾದಿ ಶರಣರು,  ಇವನಾರವ ಎನ್ನದೇ ಇವ ನಮ್ಮವ ಎಂದು ಭಾವಿಸುವಂತೆ ಹೇಳಿದ್ದರು ಎಂದರು.

ಇದನ್ನೂ ಓದಿ: 200 ವರ್ಷಗಳ ಬಳಿಕ ಈ ಜನ್ಮರಾಶಿಯಲ್ಲಿ ರಾಜಯೋಗ: ಬಾಳು ಪ್ರವೇಶಿಸಲಿದೆ ಕೀರ್ತಿ-ಪ್ರತಿಷ್ಠೆ, ಇನ್ನೇನಿದ್ದರೂ ಗೆಲುವಿನದ್ದೇ ರಾಜ್ಯಭಾರ!

ಆರ್ಥಿಕ, ಸಾಮಾಜಿಕ ಅಸಮಾನತೆ ನಮ್ಮ ದೇಶದ ಜಾತಿ ವ್ಯವಸ್ಥೆ ಕಾರಣ:

ಉಪ್ಪಾರರು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಸಮಾಜ. ಉಪ್ಪು ತಯಾರಿಸಿ ಮಾರಾಟ ಮಾಡುವ ವೃತ್ತಿಯಾಗಿದ್ದು, ಕೈಗಾರೀಕರಣವಾದ ನಂತರ  ಅವರ ವೃತ್ತಿ ಬಿಡಬೇಕಾದ ಪರಿಸ್ಥಿತಿ ಉಂಟಾಗಿದೆ. ಇವರ ಕಸುಬಿಗೆ ಧಕ್ಕೆಯುಂಟಾದ ಮೇಲೆ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಶಿಕ್ಷಣ, ಆರ್ಥಿಕ ಶಕ್ತಿಯಿಂದ ವಂಚಿತರಾಗಿ  ಉದ್ಯೋಗವಿಲ್ಲದೇ ಕೂಲಿ ಮಾಡುವ ಸ್ಥಿತಿ ಉಂಟಾಯಿತು. ಆದರೆ ಮಹಾತ್ಮಾ ಗಾಂಧಿಜಿಯವರು ಬ್ರಿಟಿಷರ ವಿರುದ್ಧ ಹೋರಾಡುವಾಗ ಉಪ್ಪಿನ ಸತ್ಯಾಗ್ರಹ ಮಾಡಿದ್ದರು. ಅದರಲ್ಲಿ ಉಪ್ಪಾರರ ಕೊಡುಗೆಯೂ ಅಪಾರವಾಗಿತ್ತು ಎಂದರು.

ಜಾತಿ ವ್ಯವಸ್ಥೆಯ ಕಾರಣದಿಂದ ಅಕ್ಷರ ಸಂಸ್ಕೃತಿಯಿಂದ ಎಲ್ಲಾ ಶೂದ್ರರೂ ವಂಚಿತರಾಗಿದ್ದಾರೆ. ಆರ್ಥಿಕ, ಸಾಮಾಜಿಕ ಅಸಮಾನತೆ ಇದ್ದರೆ ಅದಕ್ಕೆ ನಮ್ಮ ದೇಶದ ಜಾತಿ ವ್ಯವಸ್ಥೆ ಕಾರಣ. ಸಂವಿಧಾನದಲ್ಲಿ ಸಮ ಸಮಾಜ ನಿರ್ಮಾಣವಾಗಬೇಕೆಂದು ಹೇಳಿದೆ. ಶೋಷಣೆಗೊಳಗಾದ ಜನರಿಗೆ ಆರ್ಥಿಕ, ಸಮಾಜಿಕ ಶಕ್ತಿ ತುಂಬಿದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದರು.

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದ ನಾರಾಯಣಗುರು:

ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ವಿರೋಧಿಸಿದರು. ನನಗೆ ಕಾನೂನು ಶಿಕ್ಷಣ ಪಡೆದು, ವಕೀಲನಾಗಿ, ಈಗ ಮುಖ್ಯಮಂತ್ರಿಯಾಗುವ ಅವಕಾಶವನ್ನು ಅಂಬೇಡ್ಕರ್’ರವರ ಸಂವಿಧಾನ ನೀಡಿತು. ಶ್ರೀಮಠವು ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಇಂಬು ನೀಡುತ್ತಿರುವುದು ಶ್ಲಾಘನೀಯ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ನಾರಾಯಣಗುರುಗಳು ಬೋಧಿಸಿದರು. ಮನುಷ್ಯ ಮನುಷ್ಯರನ್ನು ಪ್ರೀತಿಸಬೇಕು ಎಂದು ಬಸವಣ್ಣನವರು ಪ್ರತಿಪಾದಿಸಿದರು ಎಂದರು.

ಸಮುದಾಯಗಳು ಸೂಕ್ತ ರೀತಿಯಲ್ಲಿ ಅಭಿವೃದ್ದಿ ಹೊಂದಬಾರದೆಂಬ ಉದ್ದೇಶದಿಂದ ದಾರಿ ತಪ್ಪುಸುವವರು ಬಹಳಷ್ಟಿದ್ದಾರೆ. ಚರಿತ್ರೆ ತಿಳಿದಿರುವವರು ಮಾತ್ರ ಭವಿಷ್ಯ ನಿರ್ಮಿಸಲು ಸಾಧ್ಯ. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಶಕ್ತಿ ತುಂಬಿದಾಗ ಮಾತ್ರ ದೇಶಕ್ಕೆ ಬಂದ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಶ್ರೇಷ್ಠತೆ ಎಂಬುದು ಜಾತಿಯಿಂದ ಬರುವುದಲ್ಲ. ಅದು ನಮ್ಮ ಶಿಕ್ಷಣ, ಪರಿಶ್ರಮದಿಂದ ಬರುತ್ತದೆ ಎಂದರು.

“ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ಸ್ಥಗಿತವಾಗುವುದಿಲ್ಲ”

ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, “ತಳಮಟ್ಟದ ಜನರಿಗೆ ಉಪಯೋಗವಾಗುವ ಗ್ಯಾರಂಟಿ ಯೋಜನೆಗಳನ್ನು ಕೆಲವರು ಟೀಕಿಸಿದರು. ಆದರೆ ರಾಜ್ಯದ 150  ಕೋಟಿ ಮಹಿಳೆಯರು ಜೂನ್ 11 ರಿಂದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇಂತಹ ಜನಪರ ಯೋಜನೆಗಳ ಬಗ್ಗೆ ಇಚ್ಛಾಶಕ್ತಿ ತೋರದ ಪಕ್ಷಗಳು, ಮೊದಲಿಗೆ ಯೋಜನೆಗಳನ್ನು ಜಾರಿ ಮಾಡಿ ನಂತರ ಸ್ಥಗಿತಗೊಳಿಸುತ್ತಾರೆ ಎಂದು ಟೀಕಿಸುತ್ತಾರೆ. ಆದರೆ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ರಾಜ್ಯದ  4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ” ಎಂದರು.

ಇದನ್ನೂ ಓದಿ: ಒಂದೇ ಇನ್ನಿಂಗ್ಸ್’ನಲ್ಲಿ 159 ರನ್… 24ರ ಹರೆಯದ ಭಾರತದ ಕ್ರಿಕೆಟಿಗನಿಂದ ಅಮೋಘ ಶತಕದಾಟ!

ಭರವಸೆ

ಉಪ್ಪಾರ ಸಮಾಜಕ್ಕೆ ಜಗದ್ಗುರು ಶ್ರೀ ಡಾ. ಪುರುಷೋತ್ತಮಾನಂದಪುರಿ  ಮಹಾಸ್ವಾಮಿಗಳು  ಬಹಳಷ್ಟು ಕೆಲಸಗಳನ್ನು ಮಾಡಿದ್ದು, ಸರ್ಕಾರದ ವತಿಯಿಂದ ಭಗೀರಥ ಜಯಂತಿ ಆಚರಣೆ ಹಾಗೂ ಭಗೀರಥ ಮಂಡಳಿ ಸ್ಥಾಪನೆಯಾಗಿದ್ದರೆ ಅದಕ್ಕೆ  ಸ್ವಾಮೀಜಿಯವರು ಕಾರಣ ಎಂದರು. ಸಂಸ್ಥೆಗೆ  ಸ್ವಾಮೀಜಿಗಳ ಜಮೀನು ಕೊಡಬೇಕೆಂಬ ಮನವಿಗೆ ಸ್ಪಂದಿಸಿ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಭರವಸೆ ನೀಡಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News