ಬೆಂಗಳೂರು: ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ "ಯುವನಿಧಿ" ಯೋಜನೆಗೆ ಚಾಲನೆ ನೀಡಿದರು. ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿದ್ದೇವೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದ್ದರು.


COMMERCIAL BREAK
SCROLL TO CONTINUE READING

ದೇಶದಲ್ಲಿ ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿದ್ದು, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ ಅಂತಾ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: Crime News: ಪ್ರಿಯಕರನೊಂದಿಗೆ‌ ಬೆಡ್‌ ರೂಮ್‌ನಲ್ಲಿದ್ದಾಗ ಬಂದ ಪತಿಯ ಕೊಂದ ಪತ್ನಿ.. ಹೃದಯಾಘಾತ ಎಂದು ಹೈಡ್ರಾಮಾ!


ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು. ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ  ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ. ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.


ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಟ್ರಾಫಿಕ್ ಕಂಟ್ರೋಲ್‌ಗೆ ಸಹಕಾರಿ ಈ ರಿಂಗ್‌ರೈಲ್ ಯೋಜನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.