ಸಿಎಂ ಯಾವುದೇ ತಪ್ಪು ಮಾಡಿಲ್ಲ, ಯಾವುದೇ ತನಿಖೆ ನಡೆದರೂ ದೋಷಮುಕ್ತರಾಗುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು : ನಮ್ಮ ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ, ಅವರು ಯಾವುದೇ ಹಗರಣದಲ್ಲೂ ಭಾಗಿಯಾಗಿಲ್ಲ.ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಯಾವುದೇ ತನಿಖೆ ನಡೆದರೂ ಅವರು ದೋಷಮುಕ್ತರಾಗುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ನನ್ನ ಮೇಲೆ ಹೇಗೆ ಷಡ್ಯಂತ್ರ ರೂಪಿಸಿ ಕೇಸ್ ದಾಖಲಿಸಿ, ಜೈಲಿಗೆ ಹಾಕಿದರೋ ಅದೇ ರೀತಿ ನಮ್ಮ ಮುಖ್ಯಮಂತ್ರಿಗಳ ವಿರುದ್ಧವೂ ಷಡ್ಯಂತ್ರ ರೂಪಿಸುತ್ತಿದ್ದಾರೆ.ಭಗವಂತನ ಕೃಪೆಯಿಂದ ನಾನು ಜೈಲಿಗೆ ಹೋದ ಪ್ರಕರಣ ಕೂಡಾ ವಜಾಗೊಂಡಿದೆ ಎಂದು ತಿಳಿಸಿದರು.
ಇದನ್ನೂ ಓದಿ : MUDA Scam: ಹೈಕೋರ್ಟ್ ಆದೇಶದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ.ನಾವೆಲ್ಲರೂ ಮುಖ್ಯಮಂತ್ರಿಗಳ ಜತೆಗೆ ನಿಲ್ಲುತ್ತೇವೆ. ಹೋರಾಟ ಮುಂದುವರಿಸುತ್ತೇವೆ. ಅವರು ಮಾಡಿರುವ ಕೆಲಸ, ರಾಜ್ಯದ ಜನರಿಗೆ ನೀಡಿರುವ ಯೋಜನೆಯನ್ನು ಬಿಜೆಪಿಯವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ.ನಮಗೆ ಈ ನೆಲದ ಕಾನೂನಿನ ಮೇಲೆ ಗೌರವವಿದೆ.ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ" ಎಂದು ತಿಳಿಸಿದರು.
ಈ ತೀರ್ಪಿನ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ. ನ್ಯಾಯಲಯದ ತೀರ್ಪು ಏನಿದೆ ಎಂದು ನಾನು ನೋಡಿಲ್ಲ.ಮಾಧ್ಯಮಗಳಿಂದ ವಿಚಾರ ತಿಳಿಯುತ್ತಿದೆ. ಸಂಪೂರ್ಣ ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡುತ್ತೇನೆ.” ಎಂದು ತಿಳಿಸಿದರು.
ಇದನ್ನೂ ಓದಿ : Muda Scam: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ; ಮುಡಾ ಪ್ರಕರಣದಲ್ಲಿ ʼಸಿದ್ದುʼಗೆ ಬಿಗ್ ಶಾಕ್!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.