ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಸ್ಥಾಪಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ 

ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಸ್ಥಾಪಿಸಬೇಕೆನ್ನುವ ಬೇಡಿಕೆ ತೀವ್ರಗೊಂಡಿರುವ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಆರೋಗ್ಯ ಸಚಿವ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕೆಂದು ಆಗ್ರಹಿಸಿದ್ದಾರೆ.

Written by - Manjunath N | Last Updated : Jun 17, 2023, 06:52 PM IST
  • ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ
  • ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ
  • ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ
ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಸ್ಥಾಪಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ  title=
Photo: Twitter

ಬೆಂಗಳೂರು: ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಸ್ಥಾಪಿಸಬೇಕೆನ್ನುವ ಬೇಡಿಕೆ ತೀವ್ರಗೊಂಡಿರುವ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಆರೋಗ್ಯ ಸಚಿವ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕೆಂದು ಆಗ್ರಹಿಸಿದ್ದಾರೆ.

ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಷ್ಟು ಜನರನ್ನು ನೋಡಿ ಅವಿವಾ ಹೇಳಿದ್ದೇನು ಗೊತ್ತಾ..?

ಇನ್ನೂ ಮುಂದುವರೆದು ಏಮ್ಸ್‌ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ.ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಕೋರುತ್ತೇನೆ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ನಾಳೆಯಿಂದ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಚಾಲನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News