ಬೆಂಗಳೂರು : ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗೆ ಪೂರ್ಣ ಪ್ರಮಾಣದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಚಿವರಿಗೂ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ನಾಡಿನ ಜನತೆ ಅಭೂತಪೂರ್ವ ಬಹುಮತದಿಂದ ಗೆಲ್ಲಿಸಿ ನಮಗೆ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಜನಪರ ಆಡಳಿತ ನೀಡಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜನರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ. ಸಣ್ಣ ಪುಟ್ಟ ಕೆಲಸಗಳಿಗೂ ಕ್ಷೇತ್ರದ ಜನ ಸರ್ಕಾರಿ ಕಚೇರಿಗಳಿಗೆ ಪದೆ ಪದೆ ಅಲೆಯುವುದನ್ನು ತಪ್ಪಿಸಿ. ಜನರು ತಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಬಸ್ಸು, ರೈಲು ಹತ್ತಿಕೊಂಡು ವಿಧಾನಸೌಧಕ್ಕೆ ಬರುವ ಹೊರೆಯನ್ನು ತಪ್ಪಿಸಿ ಎಂದು ಸೂಚಿಸಿದ್ದಾರೆ.


ಇದನ್ನೂ ಓದಿ: ಮಗಳ ಹುಟ್ಟು ಹಬ್ಬಕ್ಕೆ ಸರ್ಕಾರದ ಲೆಟರ್‌ ಹೆಡ್‌ನಲ್ಲೇ ಆಹ್ವಾನ ಹೊರಡಿಸಿದ ಕುಲಪತಿ..!


ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಬರಲಿದೆ. ನಾವು ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತು ವರಿಷ್ಠರಾದ ಸೋನಿಯಾಗಾಂಧಿ,  ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರಿಗೆ ಉಡುಗೊರೆ ನೀಡಬೇಕು. ಈ ಗುರಿ ಇಟ್ಟುಕೊಂಡು ಶ್ರದ್ದೆ, ಪ್ರಾಮಾಣಿಕತೆ ಹಾಗೂ ಚುರುಕಾಗಿ ಜವಾಬ್ದಾರಿ ನಿರ್ವಹಿಸಿ ಎಂದು ಎಲ್ಲಾ ಸಚಿವರಿಗೂ ಮನವರಿಕೆ ಮಾಡಿಸಿದ್ದಾರೆ. 


ನಾವು ನೀಡಿರುವ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ಬಾರಿಯ ತಪ್ಪುಗಳು ಈ ಬಾರಿ ಮರುಕಳಿಸಬಾರದು. ಖಾತೆ ಹಂಚಿಕೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ನೀವೆಲ್ಲಾ ಸಕ್ರಿಯರಾಗಿ. ವಿರೋಧಪಕ್ಷದಲ್ಲಿದ್ದಾಗ ನಾವು ನಡೆಸಿದ ಹೋರಾಟದ ಫಲವಾಗಿ ಜನತೆ ಬಿಜೆಪಿಯ ದುರಾಡಳಿತವನ್ನು ತಿರಸ್ಕರಿಸಿ ನಮ್ಮ ಕೈ ಹಿಡಿದಿದ್ದಾರೆ. ಈಗ ನಾವು ಸರ್ಕಾರವನ್ನು, ಸರ್ಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಮ್ಮ ಜನಪರ ನಿಷ್ಠೆ ಮತ್ತು ಕೆಲಸಗಳ ಮೂಲಕ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ದಾಖಲಿಸಬೇಕಿದೆ ಎಂದು ಸಚಿವರಿಗೆ ಸೂಚಿಸಿದ್ದಾರೆ.


ಇದನ್ನೂ ಓದಿ:ವಿದ್ಯಾರ್ಥಿಗಳನ್ನು ಖಾಸಗಿ ಕಾಲೇಜಿಗೆ ತಳ್ಳುತ್ತಿರುವ ಸರ್ಕಾರಿ ಶಿಕ್ಷಕರು: ಕಣ್ಣುಮುಚ್ಚಿ ಕುಳಿತಿರುವ ಅಧಿಕಾರಿಗಳು !?


ಕೇಂದ್ರದ ದುರಾಡಳಿತವನ್ನು ಕರ್ನಾಟಕದ ಮೂಲಕ ಕೊನೆಗೊಳಿಸಲು ಪರಿಸ್ಥಿತಿ ಹದವಾಗಿದೆ. ಇದನ್ನು ನಾವು ಮರೆಯಬಾರದು. ಹೀಗಾಗಿ ಸಚಿವರು ತಮಗೆ ಉಸ್ತುವಾರಿ ವಹಿಸಲಾಗುವ ಜಿಲ್ಲೆಗಳಿಗೆ ಹೆಚ್ಚೆಚ್ಚು ಪ್ರವಾಸ ಮಾಡಬೇಕು. ಜಿಲ್ಲೆ, ತಾಲ್ಲೂಕು ಮಟ್ಟದಲ್ಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಅಧಿಕಾರಿಗಳ ಮೇಲೆ ಕಟ್ಟು ನಿಟ್ಟಿನ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು ಎಂದು ಮುಖ್ಯಮಂತ್ರಿಗಳು ಎಲ್ಲಾ ಸಚಿವರಿಗೂ ಟಾರ್ಗೆಟ್ ನೀಡಿ ಶುಭ ಹಾರೈಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ