ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. 


COMMERCIAL BREAK
SCROLL TO CONTINUE READING

ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 


2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. 


ಇದನ್ನೂ ಓದಿ- ಆಟವಾಡುವ ವಯಸ್ಸಿನಲ್ಲಿ ಬಾಲಕಿ ಅಪ್ರತಿಮ ಸಾಧನೆ...!


ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು. 
 
ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಇದನ್ನೂ ಓದಿ- SSLC Supplementary Result: ಪೂರಕ ಫಲಿತಾಂಶ ಇಂದು ಪ್ರಕಟ: ಡೈರೆಕ್ಟ್ ಲಿಂಕ್ ಇಲ್ಲಿದೆ


ಸ್ವಾಮಿ ವೇಷದಲ್ಲಿ ಆರೋಪಿ, ಭಕ್ತರ ವೇಷದಲ್ಲಿ ಪೊಲೀಸರು:
ಆಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ಥೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.