ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ವಿಚಾರವಾಗಿ ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಚ್ಚರಿಕೆಯ ಹೆಜ್ಜೆಯನ್ನು ಇಡಲು ಮುಂದಾಗಿದೆ.ಈಗಾಗಲೇ ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳು ಬಿಜೆಪಿ ಅವಧಿಯಲ್ಲಿ ನಡೆದ ಪರಿಷ್ಕರಣೆ ಪಾಠಗಳನ್ನು ಕೈಬಿಡಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಮಹಾಭಾರತದ ಶಕುನಿ ಮಾಮಾ ಎಂದೇ ಖ್ಯಾತರಾದ ಗುಫಿ ಪೈಂಟಲ್ ನಿಧನ


ಈ ಕುರಿತಾಗಿ ಸಲಹೆ ನೀಡಿರುವ ಅವರು ;ಈ ಬಾರಿ ಹೊಸದಾಗಿ ಪಾಠಗಳನ್ನು ಸೇರಿಸೋದು ಬೇಡ ಈಗ ದಿಢೀರ್‌ ಪಠ್ಯ ಪರಿಷ್ಕರಣೆ ಮಾಡಿದ್ರೆ ವಿವಾದ ಆಗುತ್ತೆ, ಮೇಲಾಗಿ ಕಾಂಗ್ರೆಸ್‌ ಪಕ್ಷವು ದ್ವೇಷದ ರಾಜಕೀಯ ಮಾಡ್ತಿದೆ ಎನ್ನುವ ಆರೋಪ ಬರುತ್ತದೆ. ಆದ್ದರಿಂದ ಪಠ್ಯ ಪರಿಷ್ಕರಣೆ ಮಾಡಿ ಬದಲಾಯಿಸಲು ಕನಿಷ್ಠ 4 ರಿಂದ 5 ತಿಂಗಳು ಕಾಲಾವಕಾಶ ಬೇಕಾಗುತ್ತದೆ.ಈ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ಣ ಪಠ್ಯ ಬದಲಾಯಿಸಲು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: ಅಭಿಷೇಕ್ ಅಂಬರೀಷ್​ ಅವಿವಾ ಅದ್ದೂರಿ ವಿವಾಹ: ಸಿನಿ ತಾರೆಯರ ಸಮಾಗಮ


ಈಗ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪಠ್ಯ ಪರಿಷ್ಕರಣೆ ಗೊಂದಲ ಬಗೆಹರಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಅವರು ಪಠ್ಯ ಪರಿಷ್ಕರಣೆ ಕುರಿತು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.