ಚಾರಣಿಗರ ರಕ್ಷಣೆ ಮತ್ತು ಮೃತದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು.

Written by - Prashobh Devanahalli | Last Updated : Jun 5, 2024, 09:17 PM IST
    • ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
    • ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ಮಾತನಾಡಿದರು
    • ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಭರವಸೆ
ಚಾರಣಿಗರ ರಕ್ಷಣೆ ಮತ್ತು ಮೃತದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ title=
File Photo

ಬೆಂಗಳೂರು:  ಉತ್ತರಾಖಂಡದ ಶಾಸ್ತ್ರತಾಳ್’ಗೆ ಚಾರಣಕ್ಕೆಂದು ತೆರಳಿ  ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು  ಕುಟುಂಬದವರಿಗೆ ತಲುಪಿಸುವ ಮತ್ತು  ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು.

ಇದನ್ನೂ ಓದಿ: ತಮ್ಮವರಿಂದಲೇ 25 ಡಾಲರ್ ಪಡೆದು ಅಭಿಮಾನಿಗಳಿಗೆ ಔತಣಕೂಟ ಆಯೋಜನೆ: PCB ಕೃತ್ಯಕ್ಕೆ ಮಾಜಿ ನಾಯಕ ಕಿಡಿ

ಮೃತರ ಸಂಖ್ಯೆ 9 ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ  ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎನ್ನುವ ಸೂಚನೆಗಳನ್ನು ಸಚಿವ ಕೃಷ್ಣಬೈರೇಗೌಡರಿಗೆ ನೀಡಿದ್ದಾರೆ.

ರಕ್ಷಿಸಲ್ಪಟ್ಟು ಸುರಕ್ಷಿತ ನೆಲೆಗೆ ಕರೆತರಲಾಗಿರುವ ಚಾರಣಿಗರ ಜೊತೆಗೂ ಮಾತನಾಡಿದ ಸಿಎಂ, ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಗ್ರೀನ್ ಟೀಗೆ ಇದನ್ನು ಬೆರೆಸಿ ಕುಡಿದರೆ ಅಂದುಕೊಂಡಿದಕ್ಕಿಂದ ವೇಗವಾಗಿ ತೂಕ ಇಳಿಸಬಹುದು!

ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲ್ಪಟ್ಟವರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News