ಬೆಂಗಳೂರು: ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಸೂಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಗ್ಯಾರೆಂಟಿಗಳು ಉಚಿತ, ಖಚಿತ, ಖಂಡಿತ, ಸದ್ಯಕ್ಕೆ ಮೂರು ಮಾತ್ರ ನಿಶ್ಚಿತ


ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭ ವಾಗದಿರುವ ಕಾಮಗಾರಿಗಳನ್ನು ಮರುಪರಿಶೀಲನೆಗಾಗಿ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು. ಅದರಲ್ಲಿ 9.90 ಕೋಟಿ ರೂ. ವೆಚ್ಚದ ಸಿದ್ದಗಂಗಾ ಮಠದ ವಸತಿ ನಿಲಯದ ಕಾಮಗಾರಿಯೂ ಸೇರಿತ್ತು. ಈ ಕಾಮಗಾರಿಯ ತಾಂತ್ರಿಕ ಬಿಡ್ ತೆರೆಯಲಾಗಿತ್ತು.
  
ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಾಮಗಾರಿ ಟೆಂಡರ್ ಪ್ರಕ್ರಿಯೆಯನ್ನು ಮುಂದುವರೆಸುವ ಬಗ್ಗೆ ಇಲಾಖೆಯು ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಂದುವರೆಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದ್ದಾರೆ.


ಇದನ್ನೂ ಓದಿ: ಎಲ್ಲಾ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಮುಖ್ಯಮಂತ್ರಿ ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.