Haryana Election Results 2024: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ʼಕೈʼ ಪಕ್ಷವು ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಇದು ಪಕ್ಷದ ನಾಯಕರಲ್ಲಿ ಉತ್ಸಾಹ ತಂದಿತ್ತು, ಆದರೆ ಇಂದಿನ ಫಲಿತಾಂಶದ ದಿನವೇ ಎಕ್ಸಿಟ್ ಪೋಲ್ ಫಲಿತಾಂಶಗಳು ತಲೆಕೆಳಗಾಗಿವೆ. ಬಿಜೆಪಿ ಸತತವಾಗಿ ಮೂರನೇ ಬಾರಿ ಸರ್ಕಾರ ರಚಿಸಲು ಸಜ್ಜಾಗಿದೆ. ಈ ಬೆನ್ನಲ್ಲೇ ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ಹೌದು, ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಅವರೇ ಈ ರೀತಿಯ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ʼಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಸಿಎಂ ಸಿದ್ದರಾಮಯ್ಯನವರೇ ಕಾರಣʼ ಅಂತಾ ಹೇಳಿದ್ದಾರೆ. ಮುಡಾ ನಿವೇಶನ ಹಂಚಿಕೆ ಹಗರಣ ಪ್ರಕರಣದಲ್ಲಿ ಸಿದ್ದರಾಮಯ್ಯರ ಹೆಸರು ಕೇಳಿಬಂದ ಬೆನ್ನಲ್ಲೇ ರಾಜೀನಾಮೆ ನೀಡಬೇಕು ಅಂತಾ ಕೆ.ಬಿ.ಕೋಳಿವಾರ ಆಗ್ರಹಿಸಿದ್ದಾರೆ. ಇದೀಗ ಅವರು ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದು, ಹರಿಯಾಣದಲ್ಲಿ ಕಾಂಗ್ರೆಸ್ ಹಿನ್ನಡೆಗೆ ಮುಡಾ ಪ್ರಕರಣವೇ ಪ್ರಮುಖ ಕಾರಣವೆಂದು ಹೇಳಿದ್ದಾರೆ. 


ಇದನ್ನೂ ಓದಿ: ಹರಿಯಾಣದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ ಅಂಶ ಯಾವುದು


ಚುನಾವಣಾ ಫಲಿತಾಂಶದ ಬೆನ್ನಲ್ಲೇ ದಿಢೀರ್ ಸುದ್ದಿಗೋಷ್ಠಿ ನಡೆಸಿದ ಅವರು, ʼನಾನು ಈ ಬಗ್ಗೆ ಮೊದಲೇ ಎಚ್ಚರಿಕೆ ಕೊಟ್ಟಿದ್ದೆ, ಮುಡಾ ಹಗರಣವನ್ನು ಪ್ರಧಾನಿ ಮೋದಿಯವರು ಹರಿಯಾಣ ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳುತ್ತಾರೆ, ಇದು ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂದು ಹೇಳಿದ್ದೆ. ಈಗ ನೋಡಿ ನಾನು ಹೇಳಿದಂತೆ ಆಗಿದೆʼ ಎಂದಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ನಾನು ಹೇಳಿದ್ದೆ. ಪ್ರಧಾನಿ ಮೋದಿ ಹರಿಯಾಣದ ತುಂಬೆಲ್ಲಾ ಮುಡಾ ಹಗರಣದ ಬಗ್ಗೆ ಪ್ರಚಾರ ಮಾಡಿದರು. ಇದು ಪಕ್ಷಕ್ಕೆ ಮುಜುಗರ ಉಂಟು ಮಾಡಿತು. ಕಾಂಗ್ರೆಸ್ ಸೋಲಿಗೆ ಇದೊಂದೇ ಕಾರಣವೆಂದು ಹೇಳುತ್ತಿಲ್ಲ, ಆದರೆ ಫಲಿತಾಂಶದ ಮೇಲೆ ಇದು ಪರಿಣಾಮ ಬೀರಿರುವುದು ನಿಜವೆಂದು ಅವರು ಹೇಳಿದರು. 


ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ! 


ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯ, ನನ್ನ ಅನಿಸಿಕೆಯನ್ನು ನಾನು ಹೇಳಿದ್ದೇನೆ. ನನಗೆ ಯಾರೂ ನೋಟಿಸ್ ಕೊಟ್ಟಿಲ್ಲ, ನೋಟಿಸ್ ಕೊಡುವಂತೆ ನಾನು ಏನೂ ಮಾಡಿಲ್ಲ, ಪಕ್ಷಕ್ಕೆ ಮುಜುಗರ ಆಗುವುದನ್ನು ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಹೇಳಿದ್ದೇನೆ ಅಷ್ಟೇ ಎಂದು ತಿಳಿಸಿದರು.


ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆ ಬಗ್ಗೆ ಮಾತನಾಡಿದ ಡಿಕೆಶಿ


ಕೋಳಿವಾಡ ಮಾತಿಗೆ ʼಕೈʼ ನಾಯಕರು ಗರಂ! 


ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎನ್ನುವ ಕೆಬಿ ಕೋಳಿವಾಡ ಹೇಳಿಕೆಗೆ ಅನೇಕ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ʼಕೋಳಿವಾಡ ಅವರಿಗೆ ತಲೆ ಕೆಟ್ಟಿದೆ ಎಂದು ಕಿಡಿಕಾರಿದ್ದರು. ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ, ಕಾನೂನು ಪ್ರಕಾರ ತನಿಖೆ ಎದುರಿಸಲಿದ್ದಾರೆ, ಅವರು ರಾಜೀನಾಮೆ ಕೊಡುವುದಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆʼ ಅಂತಾ ಹೇಳಿದ್ದರು. ಇನ್ನೂ ಕೆಲವು ನಾಯಕರು ಸಿದ್ದರಾಮಯ್ಯನವರು ರಾಜೀನಾಮೆ ನೀಡುವುದಿಲ್ಲ, ತನಿಖೆ ಎದುರಿಸುತ್ತೇನೆ ಎಂದು ಹೇಳಿದ್ದಾರೆ. ಕೋಳಿವಾಡ ಹೇಳಿಕೆ ವೈಯಕ್ತಿಕ ಅಂತಾ ಹೇಳಿದ್ದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.