ಮಹತ್ವಾಕಾಂಕ್ಷೆಯ ಕಾವೇರಿ 5 ನೇ ಹಂತದ ಯೋಜನೆಗೆ ಸಿಎಂ ಚಾಲನೆ
ಈ ಮಹತ್ವಾಕಾಂಕ್ಷಿ ಯೋಜನೆ ಬೃಹತ್ ಬೆಂಗಳೂರು ನಗರದ ನೀರಿನ ಬೇಡಿಕೆಯನ್ನ ಗಣನೀಯವಾಗಿ ನಿಭಾಯಿಸುವ ಸಾಮರ್ಥ್ಯ ಪಡೆದುಕೊಳ್ಳಲಿದೆ. ಅಲ್ಲದೇ, ಬೆಂಗಳೂರಿನ ಪ್ರತಿ ಮೂಲೆ ಮೂಲೆಗೂ, ಮನೆ ಮನೆಯ ಬಾಗಿಲಿಗೂ ಜೀವ ಜಲ ಕಾವೇರಿಯನ್ನು ತಲುಪಿಸಲಿದೆ.
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷೆಯ ಕಾವೇರಿ ಐದನೇ ಹಂತದ ಯೋಜನೆಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಇಂದು ಲೋಕಾರ್ಪಣೆಗೊಳಿಸುತ್ತಿರುವ ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯ ಪಕ್ಷಿ ನೋಟ:
• ಬೆಂಗಳೂರಿನ ನಿರಂತರ ಬೆಳವಣಿಗೆ ಮತ್ತು ಜನಸಂಖ್ಯೆಯ ಹೆಚ್ಚಳದಿಂದಾಗಿ ಹೊಸ ಸಂಪನ್ಮೂಲಗಳ ಹುಡುಕಾಟದ ಅವಶ್ಯಕತೆ ಕಂಡು ಬಂದಿತ್ತು. ಆಗ ಹೊಳೆದದ್ದೆ ಕಾವೇರಿ ನದಿಯ ಜಲ ಮೂಲ.
• ಕಾವೇರಿ ನದಿಯ ನೀರನ್ನು ಬೆಂಗಳೂರಿನ ಬೇಡಿಕೆಗೆ ಬಳಸಿ ಕೊಳ್ಳಲು ಕರ್ನಾಟಕ ಸರ್ಕಾರ ಅನುಮತಿ ನೀಡಿತು. 1974 ರಿಂದೀಚೆಗೆ ನೀರು ಪೂರೈಕೆಗಾಗಿ ಕಾವೇರಿ ಜಲಮೂಲವನ್ನು ಹಂತಹಂತವಾಗಿ ಬಳಸಿಕೊಳ್ಳವುದು ಪ್ರಾರಂಭವಾಯಿತು.
• ಕಾವೇರಿ ನೀರು ಸರಬರಾಜು ಯೋಜನೆಯ 4 ನೇ ಘಟ್ಟ 2 ನೇ ಹಂತವನ್ನು ಪೂರ್ಣಗೊಳಿಸಿದ ನಂತರವೂ ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರಿಸಲ್ಪಟ್ಟ 110 ಹಳ್ಳಿಗಳಿಗೆ ನೀರು ಪೂರೈಸಲು ಮಂಡಳಿಗೆ ಕಷ್ಟವಾಗುತ್ತಿತ್ತು.
• ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಿಗೆ ಸಮರ್ಪಕ ನೀರು ಪೂರೈಕೆ ಮಾಡಲು 2,200 ಎಂ.ಎಲ್.ಡಿ ನೀರಿನ ಅವಶ್ಯಕತೆಯಿದೆ. ಆದರೆ, ಪ್ರಸ್ತುತ ಇರುವ ನಾಲ್ಕೂ ಹಂತಗಳ ಮೂಲಕ ನಮಗೆ ಲಭ್ಯವಾಗುತ್ತಿರುವುದು ಕೇವಲ 1450 ಎಂ.ಎಲ್.ಡಿಗಳಷ್ಟು ಮಾತ್ರ.
ಇದನ್ನೂ ಓದಿ: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಸೂಚನೆ
• ಇದನ್ನ ಅರಿತ ಕರ್ನಾಟಕ ಸರಕಾರ ನಗರಾಭಿವೃದ್ಧಿ ಇಲಾಖೆಯ ಆದೇಶದ ಅನ್ವಯ ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 10 ಟಿಎಂಸಿ (ಪ್ರತಿದಿನ 775 ಮಿಲಿಯನ್ ಲೀಟರ್) ನೀರನ್ನು ಮಂಜೂರು ಮಾಡಿತ್ತು.
• ನಗರದ ನೀರಿನ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾವೇರಿ 5ನೇ ಘಟ್ಟವನ್ನು 2 ಹಂತಗಳಲ್ಲಿ ಜಪಾನ್ ಇಂಟರ್‌ನ್ಯಾಷನಲ್ ಕೋ-ಆಪರೇಷನ್ ಏಜೆನ್ಸಿ – ಜೈಕಾ ಆರ್ಥಿಕ ನೆರವಿನಿಂದ 2014 ರಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು.
• ಈ ಮಹತ್ವಾಕಾಂಕ್ಷಿ, ಬೃಹತ್ ಹಾಗೂ ದೇಶದಲ್ಲೆ ಅತಿದೊಡ್ಡ ಯೋಜನೆಯನ್ನು ಅನುಷ್ಠಾನಗೊಳಿಸಲು 4,333 ಕೋಟಿ ರೂಪಾಯಿಗಳ ಯೋಜನಾ ವೆಚ್ಚವನ್ನು ನಿಗದಿಪಡಿಸಲಾಯಿತು. ಇದಕ್ಕೆ ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ನಿಂದ ಹಣಕಾಸು ಬೆಂಬಲ ದೊರೆಯಿತು.
• ಜೈಕಾ ಶೇಕಡಾ 84 ರಷ್ಟು ಹಣವನ್ನು ಒದಗಿಸಿದರೆ, ಉಳಿದ ಶೇಕಡಾ 16ರಷ್ಟು ಮೊತ್ತವನ್ನು ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಜಲಮಂಡಳಿಯ ವತಿಯಿಂದ ಭರಿಸಲು ನಿರ್ಧರಿಸಲಾಯಿತು. ಇದಕ್ಕೆ ಪೂರಕವಾಗಿ 2018 ರಲ್ಲಿ JICA ಜತೆ ಔಪಚಾರಿಕ ಸಾಲ ಒಪ್ಪಂದಕ್ಕೆ ಸಹಿ ಮಾಡಲಾಯಿತು.
• ದೇಶದ ಅತಿದೊಡ್ಡ ನೀರು ಸರಬರಾಜು ಯೋಜನೆಯ ಹಿಂದೆ ಒಂದು ಭಗೀರಥ ಪ್ರಯತ್ನವಿದೆ.
• ಈ ಮಹತ್ವಾಕಾಂಕ್ಷಿ ಯೋಜನೆ ಬೃಹತ್ ಬೆಂಗಳೂರು ನಗರದ ನೀರಿನ ಬೇಡಿಕೆಯನ್ನ ಗಣನೀಯವಾಗಿ ನಿಭಾಯಿಸುವ ಸಾಮರ್ಥ್ಯ ಪಡೆದುಕೊಳ್ಳಲಿದೆ. ಅಲ್ಲದೇ, ಬೆಂಗಳೂರಿನ ಪ್ರತಿ ಮೂಲೆ ಮೂಲೆಗೂ, ಮನೆ ಮನೆಯ ಬಾಗಿಲಿಗೂ ಜೀವ ಜಲ ಕಾವೇರಿಯನ್ನು ತಲುಪಿಸಲಿದೆ.
• ಕಾವೇರಿ 5ನೇ ಹಂತದ ಯೋಜನೆಯಿಂದ ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಟಿ.ದಾಸರಹಳ್ಳಿ, ಮಹದೇವಪುರ, ಯಲಹಂಕ, ರಾಜರಾಜೇಶ್ವರಿನಗರ ಹಾಗೂ ಬೊಮ್ಮನಹಳ್ಳಿ ವಲಯದ ವಿವಿಧ ಹಳ್ಳಿಗಳ ಮನೆ ಮನೆಗೂ ಸೇರಿದಂತೆ ಬೆಂಗಳೂರಿನ ಮೂಲೆ ಮೂಲೆಗೂ ಕಾವೇರಿ ನೀರು ಸರಬರಾಜು ಆಗಲಿದೆ.
• ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನದಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್‌ಡಿ ನೀರು ದೊರೆಯಲಿದೆ. ಇದು ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡಲಿದೆ.
• ಜಲ ಮಂಡಳಿಯಿಂದ ಬೆಂಗಳೂರು ನಗರದಲ್ಲಿ 10.64 ಲಕ್ಷ ಕಾವೇರಿ ನೀರಿನ ಸಂಪರ್ಕ ನೀಡಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಜಾರಿ ಬಳಿಕ 4 ಲಕ್ಷ ಹೊಸ ಸಂಪರ್ಕ ನೀಡಲಾಗುತ್ತಿದೆ. ಇದರಿಂದ ಜಲಮಂಡಳಿಯ ಆದಾಯ ಹೆಚ್ಚಲಿದೆ.
• ಇದುವರೆಗೆ ಪ್ರತಿ ತಿಂಗಳು ಬೆಂಗಳೂರಿನಲ್ಲಿ 1.58 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು. ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನ ಬಳಿಕ ಮಾಸಿಕವಾಗಿ 2.4 ಟಿಎಂಸಿ ನೀರು ಸರಬರಾಜು ಆಗಲಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.