Karnataka Shakti scheme: ರಾಜ್ಯದ ಕೋಟ್ಯಂತರ ಮಹಿಳೆಯರಿಗೆ ಬಿಗ್ ಶಾಕ್ ಎದುರಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣದ ʼಶಕ್ತಿʼ ಯೋಜನೆ ಪರಿಷ್ಕರಣೆ ಆಗುವ ಬಗ್ಗೆ ದೊಡ್ಡ ಸುದ್ದಿ ಹೊರಬಿದ್ದಿದೆ.
ಹೌದು, ರಾಜ್ಯದ ಮಹಿಳೆಯರು ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡುವ ʼಶಕ್ತಿʼ ಯೋಜನೆ ಪರಿಷ್ಕರಣೆ ಆಗುವ ಬಗ್ಗೆ ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸುಳಿವು ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬಳಿ ಬುಧವಾರ(ಅ.೩೦) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ: ಯಾದಗಿರಿ ಜಿಲ್ಲೆಯಲ್ಲಿ ಲಿಥಿಯಂ ನಿಕ್ಷೇಪ ಪತ್ತೆ
ʼಅನೇಕ ಜನರು ನನಗೆ ಇ-ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್ಗೆ ಹಣ ಕೊಡುವುದಕ್ಕೆ ಸಿದ್ಧವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡವೆಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್ಗೆ ದುಡ್ಡು ಕೊಡುತ್ತೇವೆ ಆದರೆ ಬಸ್ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲವೆಂದು ಹೇಳುತ್ತಿದ್ದಾರೆ. ಅನೇಕರು ನಾವು ಟಿಕೆಟ್ ಹಣ ಕೊಡುವುದಕ್ಕೆ ಸಿದ್ಧವೆಂದು ಪ್ರಾಮಾಣಿಕವಾಗಿ ಅಭಿಪ್ರಾಯ ಹೇಳುತ್ತಿದ್ದಾರೆ. ಹೀಗಾಗಿ ನಾವು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದಲ್ಲಿ ಎಲ್ಲಾ ಕೂತು ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆʼ ಎಂದು ತಿಳಿಸಿದರು. ಪಂಚ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊಡೆತ ಅನುಭವಿಸುತ್ತಿರುವ ಕಾಂಗ್ರೆಸ್ ಸರ್ಕಾರ, ಇದೀಗ ಡಿಕೆಶಿ ಹೇಳಿಕೆಯಿಂದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸುಳಿವು ಕೊಟ್ಟಿದೆ.
ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ಉದ್ಘಾಟನೆ
ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ ಮಾನ್ಯ ಮುಖ್ಯಮಂತ್ರಿಗಳು, ನಾನು ಹಾಗೂ ಸಾರಿಗೆ ಸಚಿವರಾದ ಶ್ರೀ @RLR_BTM ಅವರು ಚಾಲನೆ ನೀಡಿದೆವು. ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ… pic.twitter.com/q2jVJW2FIC
— DK Shivakumar (@DKShivakumar) October 30, 2024
ಇದನ್ನೂ ಓದಿ: ಸಿಎಂ ಆಗಿದ್ದಾಗಲೇ ಚನ್ನಪಟ್ಟಣಕ್ಕೆ ಏನೂ ಮಾಡದ ಕುಮಾರಣ್ಣ ಈಗೇನು ಮಾಡುತ್ತಾರೆ: ಡಿಸಿಎಂ ಪ್ರಶ್ನೆ
ಈ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ʼರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಿದೆವು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ್ಗಳು ಸ್ವೀಕರಿಸುತ್ತಿಲ್ಲವೆಂದು ಹೇಳುತ್ತಿದ್ದಾರೆʼ ಎಂದು ಹೇಳಿದ್ದಾರೆ.
ʼಸದ್ಯದಲ್ಲೇ ಈ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇವೆ. ವೋಲ್ವೋ ಬಸ್ಗಳು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಸೇವೆಯನ್ನು ಒದಗಿಸುತ್ತಾ ಬಂದಿದ್ದು, ಅವಕಾಶ ಸಿಕ್ಕಾಗ ನಮ್ಮ ಸಂಪುಟದ ಸಹೋದ್ಯೋಗಿಗಳೆಲ್ಲಾ ಬಸ್ನಲ್ಲಿ ಒಟ್ಟಿಗೆ ಪ್ರಯಾಣ ಮಾಡುತ್ತೇವೆʼ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ