Karnataka Shakti scheme: ರಾಜ್ಯದ ಕೋಟ್ಯಂತರ ಮಹಿಳೆಯರಿಗೆ ಬಿಗ್‌ ಶಾಕ್‌ ಎದುರಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್‌ ಪ್ರಯಾಣದ ʼಶಕ್ತಿʼ ಯೋಜನೆ ಪರಿಷ್ಕರಣೆ ಆಗುವ ಬಗ್ಗೆ ದೊಡ್ಡ ಸುದ್ದಿ ಹೊರಬಿದ್ದಿದೆ. 


COMMERCIAL BREAK
SCROLL TO CONTINUE READING

ಹೌದು, ರಾಜ್ಯದ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡುವ ʼಶಕ್ತಿʼ ಯೋಜನೆ ಪರಿಷ್ಕರಣೆ ಆಗುವ ಬಗ್ಗೆ ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸುಳಿವು ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬಳಿ ಬುಧವಾರ(ಅ.೩೦) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ 20 ನೂತನ ವೋಲ್ವೋ ಐರಾವತ ಕ್ಲಬ್‌ ಕ್ಲಾಸ್‌ 2.0 ಬಸ್ ಉದ್ಘಾಟಿಸಿ ಅವರು ಮಾತನಾಡಿದರು. 


ಇದನ್ನೂ ಓದಿ: ಯಾದಗಿರಿ ಜಿಲ್ಲೆಯಲ್ಲಿ ಲಿಥಿಯಂ ನಿಕ್ಷೇಪ ಪತ್ತೆ


ʼಅನೇಕ ಜನರು ನನಗೆ ಇ-ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ಧವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡವೆಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್‌ಗೆ ದುಡ್ಡು ಕೊಡುತ್ತೇವೆ ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲವೆಂದು ಹೇಳುತ್ತಿದ್ದಾರೆ. ಅನೇಕರು ನಾವು ಟಿಕೆಟ್ ಹಣ ಕೊಡುವುದಕ್ಕೆ ಸಿದ್ಧವೆಂದು ಪ್ರಾಮಾಣಿಕವಾಗಿ ಅಭಿಪ್ರಾಯ ಹೇಳುತ್ತಿದ್ದಾರೆ. ಹೀಗಾಗಿ ನಾವು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದಲ್ಲಿ ಎಲ್ಲಾ ಕೂತು ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆʼ ಎಂದು ತಿಳಿಸಿದರು. ಪಂಚ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊಡೆತ ಅನುಭವಿಸುತ್ತಿರುವ ಕಾಂಗ್ರೆಸ್ ಸರ್ಕಾರ, ಇದೀಗ ಡಿಕೆಶಿ ಹೇಳಿಕೆಯಿಂದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸುಳಿವು ಕೊಟ್ಟಿದೆ.


ವೋಲ್ವೋ ಐರಾವತ ಕ್ಲಬ್‌ ಕ್ಲಾಸ್‌ 2.0 ಉದ್ಘಾಟನೆ


ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ 20 ನೂತನ ವೋಲ್ವೋ ಐರಾವತ ಕ್ಲಬ್‌ ಕ್ಲಾಸ್‌ 2.0 ವಾಹನಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.


ಸಿಎಂ ಆಗಿದ್ದಾಗಲೇ ಚನ್ನಪಟ್ಟಣಕ್ಕೆ ಏನೂ ಮಾಡದ ಕುಮಾರಣ್ಣ ಈಗೇನು ಮಾಡುತ್ತಾರೆ: ಡಿಸಿಎಂ ಪ್ರಶ್ನೆ


ಈ ಬಗ್ಗೆ ಟ್ವೀಟ್‌ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ʼರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಿದೆವು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ್‌ಗಳು ಸ್ವೀಕರಿಸುತ್ತಿಲ್ಲವೆಂದು ಹೇಳುತ್ತಿದ್ದಾರೆʼ ಎಂದು ಹೇಳಿದ್ದಾರೆ.


ʼಸದ್ಯದಲ್ಲೇ ಈ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇವೆ. ವೋಲ್ವೋ ಬಸ್‌ಗಳು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಸೇವೆಯನ್ನು ಒದಗಿಸುತ್ತಾ ಬಂದಿದ್ದು, ಅವಕಾಶ ಸಿಕ್ಕಾಗ ನಮ್ಮ ಸಂಪುಟದ ಸಹೋದ್ಯೋಗಿಗಳೆಲ್ಲಾ ಬಸ್‌ನಲ್ಲಿ ಒಟ್ಟಿಗೆ ಪ್ರಯಾಣ ಮಾಡುತ್ತೇವೆʼ ಎಂದು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ