ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.ಈ ವೇಳೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದ್ದಾರೆ. 


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು, ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.


ಇದನ್ನೂ ನೋಡಿ : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಜಲಾಶಯಗಳ ಇಂದಿನ ನೀರಿನ ಮಟ್ಟ


ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ  ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು:


•ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ ಮಾಡಲಾಯಿತು.
ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.
•ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.
•ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ
•ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ
•ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ
•ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.
•ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ
•NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ.
•ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.
•ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.
•ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.


ಇದನ್ನೂ ನೋಡಿ :ನೆಲ-ಜಲ ಕಾಪಾಡಲು ಬಿ‌ಜೆ‌ಪಿ ಬದ್ಧ- ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ  ಅವರು ಸೇರಿ ಮೊದಲಾದವರು ಉಪಸ್ಥಿತರಿದ್ದರು.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.