ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಹಾಲಿ ಸಿಎಂ ಸಿದ್ದರಾಮಯ್ಯ ಸಲಹೆ

Last Updated : Sep 28, 2017, 05:36 PM IST
ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ title=

ಬೆಂಗಳೂರು: ಕಳೆದವಾರ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಮತ್ತು ಜಿಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಮಾಡಿ ಆರೋಗ್ಯ ವಿಚಾರಿಸಿದರು.

ತುಮಕೂರು ಜಿಲ್ಲೆಯ ಪಾವಗಡದಿಂದ ನೇರವಾಗಿ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೃದಯ ಶಸ್ತ್ರ ಚಿಕಿತ್ಸೆ ನಂತರ ವಾರ್ಡ್ ಗೆ ಶಿಫ್ಟ್ ಆಗಿದ್ದ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಆರೋಗ್ಯದ ಕಡೆ  ಹೆಚ್ಚಿನ ಗಮನ ಹರಿಸುವಂತೆ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಲಹೆ ನೀಡಿದರು.

ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿಗಳು ಹಾರೈಸಿದ ಸಿದ್ದರಾಮಯ್ಯ ಶ್ರೀಮತಿ ಅನಿತಾಕುಮಾರಸ್ವಾಮಿ ಅವರೊಂದಿಗೂ ಮಾತುಕತೆ ನಡೆಸಿದರು. ನಂತರ ಕುಮಾರಸ್ವಾಮಿಯವರ ಆರೋಗ್ಯ ಕುರಿತು ಆಸ್ಪತ್ರೆ ವೈದ್ಯರಿಂದ ಮಾಹಿತಿ ಪಡೆದರು. 

ಇಂಧನ ಸಚಿವ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಆಂಜನೇಯ, ಸಂಸದ ಚಂದ್ರಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

Trending News