ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ವಿದ್ಯಾರ್ಥಿನಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ( ಮೊಟ್ಟೆ ) ನೀಡುವುದೂ ಸೇರಿದಂತೆ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ಧಾರವಾಡ ಜಿಲ್ಲೆ ಕುಂದಗೋಳದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಇಂದು ಭೇಟಿಮಾಡಿದೆ. ಕೃಷಿ ಮೇಳ ಉದ್ಘಾಟನೆಗೆ ಧಾರವಾಡಕ್ಕೆ ತೆರಳಿದ್ದ ವೇಳೆಯಲ್ಲಿ ವಿದ್ಯಾರ್ಥಿನಿಯನ್ನು ಭೇಟಿಯಾಗಿ ಮಾತನಾಡಿದ್ದು ನನಗೆ ಖುಷಿ ಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ( ಮೊಟ್ಟೆ ) ನೀಡುವುದೂ ಸೇರಿದಂತೆ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ಧಾರವಾಡ ಜಿಲ್ಲೆ ಕುಂದಗೋಳದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಇಂದು ಭೇಟಿಮಾಡಿದೆ. ಕೃಷಿ ಮೇಳ ಉದ್ಘಾಟನೆಗೆ ಧಾರವಾಡಕ್ಕೆ ತೆರಳಿದ್ದ ವೇಳೆಯಲ್ಲಿ ವಿದ್ಯಾರ್ಥಿನಿಯನ್ನು ಭೇಟಿಯಾಗಿ ಮಾತನಾಡಿದ್ದು ನನಗೆ ಖುಷಿ ಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಲಂಡನ್ ಕಾಲೇಜಿನಲ್ಲಿ ಪದವಿ ಪಡೆದ ಪುತ್ರಿ: ಖುಷಿ, ಹೆಮ್ಮೆಯಿಂದ ಕುಣಿದಾಡಿದ ಟೀಂ ಇಂಡಿಯಾ ಮಾಜಿ ನಾಯಕ!
ಇನ್ನೂ ಮುಂದುವರೆದು ಮಾತನಾಡಿದ ಅವರು "ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳು, ವಿದ್ಯಾರ್ಥಿಸ್ನೇಹಿ ಕಾರ್ಯಕ್ರಮಗಳ ಮೂಲಕ ನಾಡಿನ ಜನತೆಗೆ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸ್ವಾವಲಂಬಿ ಬದುಕಿನ ಕನಸಿಗೆ ಬೆಂಬಲವಾಗಿ ನಿಂತಿದೆ. ನಮ್ಮ ಈ ಯೋಜನೆಗಳ ಫಲಾನುಭವಿಯಾದ ಪುಟ್ಟ ಹುಡುಗಿಯೊಬ್ಬಳು ನನ್ನೊಂದಿಗೆ ಪತ್ರದ ಮೂಲಕ ತನ್ನ ಸಂತಸ ಹಂಚಿಕೊಂಡು,ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಳು.ಪತ್ರ ಓದಿದಾಗಿಂದ ಆ ಮಗುವನ್ನು ಒಮ್ಮೆ ಭೇಟಿಯಾಗಬೇಕೆಂದು ಬಯಸಿದ್ದೆ, ಅದು ಇಂದು ಸಾಧ್ಯವಾಯಿತು ಎಂದು ಹೇಳಿದರು.
ಇದನ್ನೂ ಓದಿ: ಈಕೆ ಭಾರತದ ಅತ್ಯಂತ ಶ್ರೀಮಂತ ಬಾಲನಟಿ: 17ರ ಹರೆಯದಲ್ಲೇ 10 ಕೋಟಿ ಸಂಭಾವನೆ ಪಡೆಯುತ್ತಾಳೆ ಈ ಬಾಲೆ
ಇಂತಹ ಮುಗ್ಧ ಮಕ್ಕಳ ಭವಿಷ್ಯದ ಕನಸುಗಳು ನಮ್ಮ ಸರ್ಕಾರದ ಕೈಗಳಲ್ಲಿ ಸುರಕ್ಷಿತವಾಗಿದೆ. ಈ ಮಕ್ಕಳ ಕನಸನ್ನು ನನಸು ಮಾಡುವುದು ನಮ್ಮ ಕರ್ತವ್ಯವೆಂದು ಭಾವಿಸಿ, ಆ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆ ಎಂದು ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.