ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ: ಸಿಎಂ ವ್ಯಂಗ್ಯ

 CM Siddaramaiah: ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.   

Written by - Prashobh Devanahalli | Edited by - Savita M B | Last Updated : Dec 30, 2023, 05:38 PM IST
  • ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ಕನ್ನಡ ರಥದ ಮೆರವಣಿಗೆಗೆ ಚಾಲನೆ
  • ಹದಿಹರೆಯದ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ವಿತರಣೆ
  • ಸಿಂಧನೂರು ನಗರ ಸಂಚಾರ ಪೊಲೀಸ್ ಠಾಣೆ ಕಟ್ಟಡದ ಉದ್ಘಾಟನೆ
ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ: ಸಿಎಂ ವ್ಯಂಗ್ಯ title=

ಸಿಂಧನೂರು ಡಿ 30: ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ತಿಮ್ಮಾಪೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ, ಜಲ ಜೀವನ್ ಮಿಷನ್ (DBOT) ಯೋಜನೆಯ ಶಂಕುಸ್ಥಾಪನೆ ನೆರವೇರಿಸುವ ಜತೆಗೆ ಸಿಂಧನೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು. 

ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ. ಮೋದಿ ಅವರು ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಭಾಷಣ ಮಾಡಿದ್ದರು.  ಆದರೆ ಅವರ ಮಾತು ಮತ್ತೊಮ್ಮೆ ಸುಳ್ಳಾಗಿದೆ ಎಂದು ಟೀಕಿಸಿದರು.

ಇದನ್ನೂ ಓದಿ-ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನಿರಾಕರಿಸಿದವರಿಗೆ ವಿಶೇಷ ಹುದ್ದೆ

120 ಕೋಟಿ ಮಹಿಳೆಯರು ಉಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡಿದ್ದಾರೆ. 1.16 ಕೋಟಿ ಮಹಿಳೆಯರ ಖಾತೆಗೆ ತಿಂಗಳಿಗೆ 2 ಸಾವಿರ ಕೊಡಲಾಗುತ್ತಿದೆ. ಹೀಗೆ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5-6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. 

ನಾವು ಕನ್ನಡಿಗರು ಪ್ರತೀ ವರ್ಷ ಕೇಂದ್ರಕ್ಕೆ 4 ಲಕ್ಷ ಕೋಟಿ ತೆರಿಗೆ  ರೂಪದಲ್ಲಿ ಹಣ ಕೊಡ್ತೀವಿ. ಆದರೆ ಕೇಂದ್ರ ನಮಗೆ ವಾಪಾಸ್ ಕೊಡುವುದು 52 ಸಾವಿರ ಕೋಟಿ ಮಾತ್ರ. ಬರಗಾಲ ಬಂದಿದ್ದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ. ಇದನ್ನು ರಾಜ್ಯದ ಜನತೆ ಬಿಜೆಪಿ ಸಂಸದರಿಗೆ ಪ್ರಶ್ನಿಸಬೇಕು ಎಂದು ಕರೆ ನೀಡಿದರು. 

ಕೇಂದ್ರ ಸರ್ಕಾರ ರಾಜ್ಯಜನರ ಮೆರವಿಗೆ ಬರದಿದ್ದರೂ ನಾವು ರಾಜ್ಯದ ಜನರ ಕೈ ಬಿಡುವುದಿಲ್ಲ. ಹಿಂದಿನ ಬಿಜೆಪಿ ಸರ್ಕಾರ ನೀರಾವರಿ ಹೆಸರಲ್ಲಿ ಹಣ ತಿಂದು ತೇಗಿ ಹೋಗಿದೆ. ಆದರೂ ನಾವು ರಾಜ್ಯದ ಜನರಿಗೆ ಅಗತ್ಯ ನೀರಾವರಿ ಸವಲತ್ತು ಒದಗಿಸುತ್ತೇವೆ ಎಂದು ಭರವಸೆ ನೀಡಿದರು. 

ಸಿಂಧನೂರಿಗೆ ಇದುವರೆಗೂ ಶೇ80 ರಷ್ಟು ನೀರಾವರಿ ಸವಲತ್ತು ಸಿಕ್ಕಿದೆ. ಶಾಸಕರು ನೂರಕ್ಕೆ ನೂರರಷ್ಟು ನೀರಾವರಿ ಮಾಡಲು ಬದ್ದರಾಗಿದ್ದಾರೆ. ನಮ್ಮ ಸರ್ಕಾರ ಇದಕ್ಕೆ ಸಂಪೂರ್ಣ ಸಹಕಾರ ನೀಡಿ ರೈತರ ಬದುಕನ್ನು ಉನ್ನತೀಕರಿಸಲು ನಾವು ಬದ್ದರಾಗಿದ್ದೇವೆ. ನವಿಲೆ ಬ್ಯಾಲೆಂಸಿಂಗ್ ಅಣೆಕಟ್ಟು ನಿರ್ಮಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದರು. 

ಇದನ್ನೂ ಓದಿ-ಸಲಹೆಗಾರರನ್ನು ನೇಮಕ ಮಾಡಿಕೊಂಡ ಮುಖ್ಯಮಂತ್ರಿಗೆ ಹ್ಯಾಟ್ಸಾಫ್‌ ಎಂದ ಹೆಚ್.ಡಿ.ಕುಮಾರಸ್ವಾಮಿ

ಹಂಪನಗೌಡ ಬಾದರ್ಲಿ ಸಜ್ಜನ ಮತ್ತು ಅಭಿವೃದ್ಧಿ ಬಗ್ಗೆ ಹೆಚ್ಚು ಶ್ರಮಿಸುವ ಶಾಸಕರು. ಇವರಂತೆಯೇ ಎಲ್ಲಾ ಶಾಸಕರು ಶ್ರಮಿಸಿದರೆ ಇಡಿ ರಾಜ್ಯ ಮತ್ತು ಹೈದರಾಬಾದ್ ಕರ್ನಾಟಕ ಹೆಚ್ಚು ಅಭಿವೃದ್ಧಿಯಾಗುತ್ತದೆ ಎಂದು ಶಾಸಕರ ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 

ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಜಿಲ್ಲೆಯ ಶಾಸಕರುಗಳಾದ ಹಂಪಯ್ಯ ನಾಯಕ್, ಮಾನಪ್ಪ ಡಿ.ವಜ್ಜಲ್, ಬಸವನಗೌಡ ದದ್ದಲ್, ಡಾ.ಎಸ್.ಶಿವರಾಜ್ ಪಾಟೀಲ್, ಆರ್. ಬಸವನಗೌಡ ತುರ್ವಿಹಾಳ, ಶರಣಗೌಡ ಪಾಟೀಲ್ ಬಯ್ಯಾಪುರ ಸೇರಿ ಹಲವು ಮುಖಂಡರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News