ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲುತ್ತೇವೆ: ಸಿಎಂ ಸಿದ್ದರಾಮಯ್ಯ
Siddaramaiah On Loksabha Election: ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯ : ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿಯವರು 28 ಕ್ಕೆ 28 ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ತಿಳಿದಿದೆ. ಅದಕ್ಕೆ ಸುಳ್ಳು ಹೇಳುತ್ತಿದ್ದಾರೆ ಎಂದರು.
ಸ್ಥಳೀಯವಾಗಿ ಶಾಸಕರು, ಜಿಲ್ಲಾ ಬ್ಲಾಕ್ ಸಮಿತಿ ಅಧ್ಯಕ್ಷರು, ಮುಖಂಡರು ಯಾರನ್ನು ಸೂಚಿಸುತ್ತಾರೋ ಅವರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಹೇಳಿದರು.
ಇದನ್ನೂ ಓದಿ: Good News : 504 KAS ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್!
ಚಿತ್ರ ನಟ ಡಾಲಿ ಧನಂಜಯ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮ ಪಕ್ಷದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಇದರ ಬಗ್ಗೆ ನನಗೆ ಗೊತ್ತೂ ಇಲ್ಲ ಎಂದರು.
ಕಳೆದ ಬಾರಿ ಮೈತ್ರಿಯಿಂದ ಬಿಜೆಪಿ ಯನ್ನು ಎದುರಿಸಿದ್ದು ಈ ಬಾರಿ ಏಕಾಂಗಿಯಾಗಿ ಬಿಜೆಪಿಯನ್ನು ಎದುರಿಸುತ್ತಿರುವ ಬಗ್ಗೆ ಮಾತನಾಡಿ ಈಗ ಒಂದೇ ವಿರೋಧ ಪಕ್ಷವಿದೆ. ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಿದೆ. ಜೆಡಿಎಸ್ ಒಂದು ಪ್ರತ್ಯೇಕ ಪಕ್ಷ ವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿ ಯವರೊಂದಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ಬಜೆಟ್ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆ ಬಜೆಟ್ ಅರ್ಥವಾಗಿಲ್ಲ. ಬಡವರ ವಿರೋಧಿ ಬಿಜೆಪಿಗೆ ಬಜೆಟ್ ಅರ್ಥವಾಗೋಲ್ಲ. ಬಡವರ ಪರವಾಗಿ ನಾವು ಕಾರ್ಯಕ್ರಮಗಳನ್ನು ನೀಡಿರುವುದು ಎಂದರು.
ಇದನ್ನೂ ಓದಿ: ಲೋಕಸಭೆಗೆ ಹಾವೇರಿ ಟಿಕೆಟ್ ಆಕಾಂಕ್ಷಿಯಲ್ಲ : ಬಸವರಾಜ ಬೊಮ್ಮಾಯಿ
ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳು ಮಾತ್ರವಲ್ಲದೆ ಮೂಲಸೌಕರ್ಯ ಅಭಿವೃದ್ಧಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೂ ಒತ್ತು ನೀಡುವ ಕೆಲಸ ಮಾಡಿದ್ದೇವೆ. ಕೇಂದ್ರದಿಂದ 1.87 ಲಕ್ಷ ಕೋಟಿ ರೂ.ಗಳು ನಮಗೆ ನಷ್ಟವಾಗಿದೆ. ಆ ಅನುದಾನ ಬಂದರೆ ಇನ್ನೂ ಹೆಚ್ಚು ಕಾರ್ಯಕ್ರಮಗಳನ್ನು ರಾಜ್ಯಕ್ಕೆ ಕೊಡಬಹುದು ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಖ್ಯಮಂತ್ರಿಯಾದ ನಂತರ ಮಳವಳ್ಳಿಗೆ ಮೊದಲ ಬಾರಿ ಆಗಮಿಸುತ್ತಿದ್ದು, ಇಲ್ಲಿ ಸಮರ್ಥವಾದ ಮುಖಂಡರು ಮತ್ತು ಶಾಸಕರಿರುವುದರಿಂದ ಪದೇ ಪದೇ ಬರಬೇಕಾದ ಅಗತ್ಯವಿಲ್ಲ. ಜಿಲ್ಲಾ ಮಂತ್ರಿಗಳೂ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.