ಹಜ್ ಯಾತ್ರಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಅವರು ಇಂದು ಬೆಂಗಳೂರಿನ ಹೆಗಡೆ ನಗರದಲ್ಲಿರುವ ಹಜ್ ಭವನ್’ದಲ್ಲಿ ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

Written by - Prashobh Devanahalli | Last Updated : May 21, 2024, 08:12 PM IST
    • ಹಜ್ ಭವನ್’ದಲ್ಲಿ ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ
    • 10168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭಕೋರಿದ್ದೇನೆ
    • ರಾಜಕೀಯ ಶಕ್ತಿ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಹಜ್ ಯಾತ್ರಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ title=
CM Siddaramaiah

ಬೆಂಗಳೂರು: ಎಲ್ಲಾ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಲು ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಹೆಗಡೆ ನಗರದಲ್ಲಿರುವ ಹಜ್ ಭವನ್’ದಲ್ಲಿ ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ವಿರಾಟ್ ಕೊಹ್ಲಿಗಿದೆ ಈ ಗಂಭೀರ ಆರೋಗ್ಯ ಸಮಸ್ಯೆ! ಇದೇ ಕಾರಣಕ್ಕೆ ಇಷ್ಟಪಟ್ಟು ತಿನ್ನುತ್ತಿದ್ದ ನಾನ್ ವೆಜ್ ತ್ಯಜಿಸಿದ್ದು..!

10168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ. ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದಂತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಸಿಖ್ ಧರ್ಮದವರೆಲ್ಲಾ ಒಂದು ತಾಯಿಯ ಮಕ್ಕಳಂತೆ ಇರಬೇಕು. ಅಂಥ ವಾತಾವರಣ ನಿರ್ಮಾಣವಾಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಬಂದು ಎಲ್ಲರೂ ಸಬಲರಾಗಬೇಕು. ಅದಕ್ಕೆ ಹಜ್ ಯಾತ್ರಿಗಳು ಪ್ರಾರ್ಥಿಸಲಿ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆ ಬರಲಿ, ನಾಡು ಸಮೃದ್ಧವಾಗಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ಯಾತ್ರಾರ್ಥಿಗಳಲ್ಲಿ ಮನವಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: RCBಗೆ ಕಪ್ ಗೆಲ್ಲಿಸಿಕೊಡಲೆಂದು ತನ್ನ ಮದ್ವೆಯನ್ನೇ ಮುಂದೂಡಿದ ಸ್ಟಾರ್ ಬ್ಯಾಟ್ಸ್’ಮನ್! ಯಾರು ಗೊತ್ತಾ ಆ ಛಲಗಾರ?

ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ

ಮಂಗಳೂರು ಮತ್ತು ಕಲಬುರ್ಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಲಾಗಿದೆ. ಕಲಬುರ್ಗಿಯಲ್ಲಿ ಸ್ಥಳ ಸಿಗದೇ ವಿಳಂಬವಾಗಿದೆ. ಮಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ. ನೀತಿ ಸಂಹಿತೆ ಮುಗಿದ ಮೇಲೆ ಗುದ್ದಲಿ ಪೂಜೆ  ನೆರವೇರಿಸಲಾಗುವುದು ಎಂದರು.

ಪ್ರತಿದಿನ ಹಜ್ ಗೆ ತೆರಳುವವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸಚಿವ ಜಮೀರ್ ಅಹಮ್ಮದ್ ಅವರನ್ನು ಶ್ಲಾಘಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News