ಶೀಘ್ರದಲ್ಲೇ ರಾಜ್ಯದಲ್ಲಿ ಪೊಲೀಸ್ ಕ್ಯಾಂಟೀನ್ ಗಳಿಗೆ ಚಾಲನೆ ಸಿಎಂ ಸಿದ್ದರಾಮಯ್ಯ ಭರವಸೆ
ಶೀಘ್ರದಲ್ಲೇ ರಾಜ್ಯದಲ್ಲಿ ಪೋಲಿಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರು: ಶೀಘ್ರದಲ್ಲೇ ರಾಜ್ಯದಲ್ಲಿ ಪೋಲಿಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಅವರು ಇಂದು ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು:
ಪೊಲೀಸ್ ವ್ಯವಸ್ಥೆ ರಾಜ್ಯದ, ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು.
ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು.ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು.
ಇದನ್ನೂ ಓದಿ: 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ : ಲಾಡ್ ಭವಿಷ್ಯ
ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ.
ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು.
ಇದನ್ನೂ ಓದಿ: ನೆಕ್ಸ್ಟ್ ಎಪಿಸೋಡ್ ಸತೀಶ್ ಅವರನ್ನೇ ಕೇಳಿ: ಸತೀಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು
2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ. ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.