'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗುವುದು ʼದೇಶಹದ್ರೋಹʼಕ್ಕೆ ಸಮಾನ : ಸಿಎಂ

ಕ್ರಿಕೆಟ್ ಪಂದ್ಯದ ವೇಳೆ 'ಪಾಕಿಸ್ತಾನ ಜಿಂದಾಬಾದ್' ಎಂದು ಕೂಗಿದ ಆರೋಪದ ಮೇಲೆ ಮಂಗಳೂರಿನಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರನ್ನು ಗುಂಪು ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.. ಇದೀಗ ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗುವುದು "ದೇಶದ್ರೋಹ" ಎಂದು ಹೇಳಿದರು.. 

Written by - Krishna N K | Last Updated : Apr 30, 2025, 04:19 PM IST
    • ಪಾಕಿಸ್ತಾನದ ಪರವಾಗಿ ಘೋಷಣೆ ಕೂಗುವುದು "ದೇಶದ್ರೋಹ"
    • ಯಾರಾದರೂ ಸರಿಯೇ ಘೋಷಣೆ ಕೂಗುವುದು ದೇಶದ್ರೋಹಕ್ಕೆ ಸಮಾನ
    • ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದರೆ ಅದು ತಪ್ಪು, ಅದು ಯಾರೇ ಆಗಿರಲಿ
'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗುವುದು ʼದೇಶಹದ್ರೋಹʼಕ್ಕೆ ಸಮಾನ : ಸಿಎಂ

ಬೆಂಗಳೂರು : ಮಂಗಳೂರಿನಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯದ ವೇಳೆ ಯುವಕನೊಬ್ಬ 'ಪಾಕಿಸ್ತಾನ ಜಿಂದಾಬಾದ್' ಎಂದು ಕೂಗಿದ್ದಕ್ಕಾಗಿ ಅವನನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದು, ಪಾಕಿಸ್ತಾನದ ಪರವಾಗಿ ಯಾರಾದರೂ ಸರಿಯೇ ಘೋಷಣೆ ಕೂಗುವುದು ದೇಶದ್ರೋಹಕ್ಕೆ ಸಮಾನ ಎಂದರು. 

Add Zee News as a Preferred Source

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದರೆ ಅದು ತಪ್ಪು, ಅದು ಯಾರೇ ಆಗಿರಲಿ.. ಸದ್ಯ ಘಟನೆಗೆ ಸಂಬಂಧಿಸಿ ವಿಚಾರಣೆ ನಡೆಯುತ್ತಿದೆ, ಪ್ರಕರಣ ದಾಖಲಾಗಿದೆ. ವರದಿ ಬರಲಿ, ಯಾರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎಂಬುದು ಸ್ಪಷ್ಟವಾಗುತ್ತದೆ ಎಂದು ಸಿಎಂ ತಿಳಿಸಿದರು.  

ಇದನ್ನೂ ಓದಿ:ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಪ್ರಚೋದನಕಾರಿ ಹೇಳಿಕೆ

ಘಟನೆ ವಿವರ : ಏಪ್ರಿಲ್ 27 ರಂದು ಮಂಗಳೂರಿನ ಹೊರವಲಯದ ಕುಡುಪು ಗ್ರಾಮದ ಭಟ್ರ ಕಲ್ಲುರ್ಟಿ ದೇವಸ್ಥಾನದ ಬಳಿ 23 ವರ್ಷದ ಅಶ್ರಫ್ ಎಂಬ ಯುವಕನ ಮೇಲೆ ಕೋಲುಗಳಿಂದ ಹಲ್ಲೆ ನಡೆಸಲಾಗಿತ್ತು. ಕೇರಳದ ಮೂಲಕ ಈ ವ್ಯಕ್ತಿ, ಕ್ರಿಕೆಟ್ ಪಂದ್ಯಾವಳಿ ಸಮಯದಲ್ಲಿ ಪಾಕ್‌ ಪರ ಘೋಷಣೆಗಳನ್ನು ಕೂಗಿದ್ದಾರೆಂದು ಆರೋಪಿಸಿ ಗುಂಪೊಂದು ಆತನನ್ನು ಹೊಡೆದು ಕೊಂದಿದೆ ಎಂದು ವರದಿಯಾಗಿದೆ. 

ಇನ್ನು ಘಟನೆಗೆ ಸಂಬಂಧಿಸಿ ಸುಮಾರು 20 ಜನರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಸದ್ಯ ಪೊಲೀಸರು ಮೃತ ವ್ಯಕ್ತಿ ಮತ್ತು ಅವರ ಹಿನ್ನೆಲೆಯ ಬಗ್ಗೆಯೂ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ. ತನಿಖೆಯನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ ಮಾಹಿತಿ ನೀಡಿದ್ದಾರೆ.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News