ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ- ಸಿಎಂ
ಶಾಲೆಗಳಲ್ಲಿ ಬೆದರಿಕೆ ಕರೆ: ಬಾಂಬ್ ಬೆದರಿಕೆ ಕರೆ ಬಂದಿರುವ ಶಾಲೆಗಳ ಪರಿಶೀಲನೆಗೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಲು ಸೂಚಿಸಲಾಗಿದೆ. ಪೋಷಕರು ಈ ಬಗ್ಗೆ ಆತಂಕ ಪಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಾಲೆಗಳಿಗೆ ಬಾಂಬ್ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಶಾಲೆಗಳಿಗೆ ಬೆದರಿಕೆ ಈ-ಮೇಲ್ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಕುರಿತಂತೆ ನಾನು ಈಗಾಗಲೇ ಪೊಲೀಸರ ಜೊತೆ ಮಾತನಾಡಿದ್ದೇನೆ. ಬೆದರಿಕೆ ಸಂದೇಶ ಬಂದಿರುವ ಎಲ್ಲಾ ಶಾಲೆಗಳನ್ನು ಪರಿಶೀಲನೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ- ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ: ‘ಜೀ ನ್ಯೂಸ್ ಕನ್ನಡ’ ತನಿಖೆಯಿಂದ ಇ-ಮೇಲ್ ಮೂಲ ಪತ್ತೆ!
ಪೋಷಕರು ಆತಂಕ ಪಡಬಾರದು:
ಈ ರೀತಿ ಬೆದರಿಕೆ ಹಾಕಿದವರನ್ನು ಪತ್ತೆ ಹಚ್ಚಲು ಸೂಚಿಸಿರುವುದಾಗಿ ತಿಳಿಸಿದ ಅವರು ಈ ಹಿಂದೆಯೂ ಇಂತಹ ಬೆದರಿಕೆಗಳು ಬಂದಿದ್ದವು. ಆದರೆ, ಈ ಬಗ್ಗೆ ಎಚ್ಚರದಿಂದಿರಲು ಸೂಚಿಸಲಾಗಿದೆ. ಪೋಷಕರು ಆತಂಕ ಪಡಬಾರದು. ಈ ಬಗ್ಗೆ ವರದಿ ಪಡೆಯಲಾಗಿದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದರು.
ಇದನ್ನೂ ಓದಿ- Shocking: ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ!
ವಾಸ್ತವವಾಗಿ, ಇಂದು ಬೆಳಿಗ್ಗೆಯಿಂದ ಬೆಂಗಳೂರಿನ ಕೆಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನಲೆಯಲ್ಲಿ ಸಹಜವಾಗಿಯೇ ಪೋಷಕರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಕುರಿತಂತೆ ತಕ್ಷಣವೇ ಸರ್ಕಾರ ಕಾರ್ಯೋನ್ಮುಖವಾಗಿ ಎಲ್ಲೆಡೆ ಭದ್ರತೆ ಒದಗಿಸಲಾಗಿದ್ದು, ಈ ರೀತಿ ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ.
ಯಾವ ವಯಲದಲ್ಲಿ ಎಷ್ಟು ಶಾಲೆಗಳಿಗೆ ಬೆದರಿಕೆ?
ಬೆಂಗಳೂರಿನ ಉತ್ತರ ವಲಯ -1ರಲ್ಲಿ 4 ಶಾಲೆಗಳಿಗೆ ಬೆದರಿಕೆ ಇಮೇಲ್ ಬಂದಿದೆ
ಬೆಂಗಳೂರಿನ ಉತ್ತರ ವಲಯ – 2ರಲ್ಲಿ 2 ಶಾಲೆಗಳಿಗೆ
ಬೆಂಗಳೂರಿನ ಉತ್ತರ ವಲಯ -4: 01 ಶಾಲೆ
ಬೆಂಗಳೂರಿನ ದಕ್ಷಿಣ ವಲಯ – 1: 15 ಶಾಲೆಗಳಿಗೆ ಬೆದರಿಕೆ ಇಮೇಲ್
ಬೆಂಗಳೂರಿನ ದಕ್ಷಿಣ ವಲಯ – 2: 03 ಶಾಲೆಗಳು
ಬೆಂಗಳೂರಿನ ದಕ್ಷಿಣ ವಲಯ – 3: 10 ಶಾಲೆಗಳು
ಬೆಂಗಳೂರಿನ ದಕ್ಷಿಣ ವಲಯ 4: 04 ಶಾಲೆಗಳು ಅನೇಕಲ್ನ 05 ಶಾಲೆಗಳಿಗೆ ಸೇರಿದಂತೆ ಒಟ್ಟು 44 ಖಾಸಗಿ ಶಾಲೆಗಳ ಇಮೇಲ್ಗೆ ಬಾಂಬ್ ಬೆದರಿಕೆ ಬಂದಿದೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.