ಬೆಂಗಳೂರು: ಈ ವರ್ಷ ಕರ್ನಾಟಕ ತಂಡವು ರಣಜಿ ಟ್ರೋಪಿಯನ್ನು ಗೆದ್ದು ಐವತ್ತು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈಗ ಸಿಎಂ ಸಿದ್ದರಾಮಯ್ಯ ಕೆಎಸ್ಸಿಎಗೆ ರಣಜಿ ಟ್ರೋಫಿ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಮೂವರು ಕ್ರಿಕೆಟ್ ಆಟಗಾರರ ಹೆಸರನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟ್ಯಾಂಡ್‌ಗಳಿಗೆ ನಾಮಕಾರಣ ಮಾಡಬೇಕೆಂದು ಮನವಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು "1974ರಲ್ಲಿ ಕರ್ನಾಟಕದ ರಣಜಿ ತಂಡವು ಮೊಟ್ಟಮೊದಲ ಬಾರಿಗೆ ರಣಜಿ ಟ್ರೋಫಿ ಜಯಿಸಿ ಇತಿಹಾಸ ನಿರ್ಮಿಸಿತ್ತು. ಕನ್ನಡಿಗರ ಈ ಸಾಧನೆಗೆ 50 ವರ್ಷಗಳು ತುಂಬುತ್ತಿರುವ ಸ್ಮರಣಾರ್ಥ ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟ್ಯಾಂಡ್‌ಗಳಿಗೆ ಪ್ರಶಸ್ತಿ ವಿಜೇತ ರಣಜಿ ತಂಡದ ಪ್ರಮುಖ ಆಟಗಾರರಾದ ಜಿ.ಆರ್. ವಿಶ್ವನಾಥ್, ಇ.ಎ.ಎಸ್. ಪ್ರಸನ್ನ ಹಾಗೂ ಬಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಕೋರಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ರಘುರಾಮ್ ಭಟ್ ಅವರಿಗೆ ಪತ್ರ ಬರೆದಿದ್ದೇನೆ" ಎಂದು ತಿಳಿಸಿದ್ದಾರೆ.



ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - 
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.