CM Siddaramaiah: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ಕೊಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಹಲವು ಹೊಸ ಘೋಷಣೆಗಳನ್ನು ಮಾಡಿದರು. 


COMMERCIAL BREAK
SCROLL TO CONTINUE READING

ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಸಿಎಂ ಬಂಪರ್ ಘೋಷಣೆಗಳು ಈ ಕೆಳಕಂಡಂತಿವೆ: 
* ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿಯನ್ನು ರಚಿಸಲಾಗುವುದು. 
ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು. ನಂಜುಂಡಪ್ಪನವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61330 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ. ಸುಮಾರು 42000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ನಂಜುAಡಪ್ಪನವರ ವರದಿಯನ್ನಾಧರಿಸಿ ನೀಡಲಾಗುವ ವಿಶೆಷ ಅಭಿವೃದ್ಧಿ ಯೋಜನೆಯಡಿಯೇ 32433.43 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇದರ ಜೊತೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನಗಳನ್ನು ಒದಗಿಸಲಾಗಿದೆ. ಇಷ್ಟೆಲ್ಲ ಮಾಡಿದರೂ ಮಾನವ ಅಭಿವೃದ್ಧಿ ಸೂಚ್ಯಂಕವು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸುತ್ತಿಲ್ಲ. ಶಿಕ್ಷಣ, ಆರೋಗ್ಯ, ಆದಾಯಗಳಿಕೆ ಮುಂತಾದವುಗಳಲ್ಲಿ ಹಿನ್ನಡೆಯನ್ನು ಈ ಜಿಲ್ಲೆಗಳು ಅನುಭವಿಸುತ್ತಿವೆ. ಹಾಗಾಗಿ ವಿಶೇಷವಾಗಿ ನಂಜುAಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತçಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿಯನ್ನು ರಚಿಸಲಾಗುವುದು.


ಇದನ್ನೂ ಓದಿ- "ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ"


* ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ  ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಮ್ಯಾನಿಫೆಸ್ಟೊದಲ್ಲಿ ಹೇಳಿಲ್ಲ. ಬಿಜೆಪಿಯವರು 2018 ರ ತಮ್ಮ ಮ್ಯಾನಿಫೆಸ್ಟೊದಲ್ಲಿ "ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು" ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ. ಯಡಿಯೂರಪ್ಪನವರು 2019 ರ ಆಗಸ್ಟ್ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಏನು ಹೇಳಿದರು ಗೊತ್ತಾ? “ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ” ಎಂದು ಹೇಳಿದ್ದರು [ 14-8-2019 - ಶಿವಮೊಗ್ಗ] ಯಡಿಯೂರಪ್ಪನವರು ಈ ರೀತಿ ಹೇಳಿದ್ದು ಇದೇ ಮೊದಲಲ್ಲ. 2009 ರಲ್ಲಿ ವಿಧಾನಪರಿಷತ್ತಿನಲ್ಲಿ ನಮ್ಮ ವಿರೋಧ ಪಕ್ಷದ ನಾಯಕರಾಗಿದ್ದ ವಿ ಎಸ್ ಉಗ್ರಪ್ಪ ಮುಂತಾದ ನಮ್ಮ ಪಕ್ಷದವರು ಸಾಲ ಮನ್ನಾ ಮಾಡಿ ಎಂದು ಆಗ್ರಹಿಸಿದ್ದಾಗಲೂ ಯಡಿಯೂರಪ್ಪನವರು ಇದೇ ಮಾತುಗಳನ್ನಾಡಿದ್ದರು. ಯಡಿಯೂರಪ್ಪನವರು ಹೇಳಿದ್ದ ಮಾತುಗಳಿವು, “ ಮತಕ್ಕಾಗಿ ಇತರ ಪಕ್ಷಗಳವರು ಹೇಳಿದಂತೆ ನಾನು ಕೂಡ ರೈತರ ಕೃಷಿ ಮನ್ನಾ ಮಾಡುತ್ತೇನೆಂದು ಚುನಾವಣೆಯ ಸಂದರ್ಭದಲ್ಲಿ ಆಶ್ವಾಸನೆ ನಿಡಿದ್ದೆ. ಆದರೆ ಇದು ಸಾಧ್ಯವಿಲ್ಲ ಎಂಬುದು ಈಗ ಅರ್ಥವಾಗುತ್ತಿದೆ, ಸಾಲ ಮನ್ನಾ ಮಾಡಲು ಹಣ ಎಲ್ಲಿದೆ? ಎಂದು ವಿರೋಧ ಪಕ್ಷದ ಸದಸ್ಯರನ್ನೆ ಪ್ರಶ್ನಿಸಿದ್ದರು. “ ರೈತರ ಸಾಲ ಮನ್ನಾ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ಬೊಕ್ಕಸದಲ್ಲಿ ಹಣದ ಕೊರತೆ ಇದೆ. ಆದುದರಿಂದ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ” ಎಂದಿದ್ದರು ಜೊತೆಗೆ “ ವಿಧಾನಸೌಧದಲ್ಲಿ ಕೂತು ನಾನು ನೋಟ್ ಪ್ರಿಂಟ್ ಮಾಡುತ್ತಿಲ್ಲ” . ಎಂದು ಉತ್ತರ ಹೇಳಿದ್ದರು. 


* ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು.


ಇದನ್ನೂ ಓದಿ- ಕರ್ನಾಟಕದ ಅಭಿವೃದ್ಧಿಯಲ್ಲಿ ಎಸ್.ನಿಜಲಿಂಗಪ್ಪನವರ ಕೊಡುಗೆ ಅಪಾರ: ಮುಖ್ಯಮಂತ್ರಿ ಸಿದ್ದರಾಮಯ್ಯ


* ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು ರೂ.1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲಾಗುತ್ತದೆ.


* ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು.


* ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು.


* ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ. ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತರರಾಷ್ಟಿçÃಯವಾಗಿಯೂ ಮಹತ್ವ ಪಡೆದಿವೆ. ಆದರೆ ಇದಕ್ಕೆ ಸಾಕಷ್ಟು ಮಹತ್ವ ನೀಡದೆ ಹಿನ್ನಡೆಯನ್ನು ಅನುಭವಿಸುತ್ತಿದೆ. ನಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸುತ್ತೇವೆ.


* ಧಾರವಾಡದಲ್ಲಿರುವ ವಾಲ್ಮಿ [ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ] ಯನ್ನು ಉನ್ನತೀಕರಿಸಲಾಗುವುದು. ಇದನ್ನು "centre of excellence for water management " ಆಗಿ ಬದಲಾಯಿಸುವ ಮೂಲಕ ಜಲ ಶಿಕ್ಷಣ ನೀಡುವುದಷ್ಟೆ ಅಲ್ಲ, ಉತ್ತರ ಕರ್ನಾಟಕದ ಮಣ್ಣಿನ ಸವುಳು- ಜವುಳು ಸಮಸ್ಯೆಯನ್ನು ನಿರ್ವಹಿಸಲಾಗುವುದು. ಹಾಗೂ ರೈತರ ಆದಾಯ ಹೆಚ್ಚಳದ ಕಡೆಗೆ ಒತ್ತು ನೀಡಲಾಗುವುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.