ಬಿಜೆಪಿ ತಮ್ಮ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿಗರ ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ. ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಲ್ಲಿ 47 ಕೋಟಿ  ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

Written by - Prashobh Devanahalli | Edited by - Krishna N K | Last Updated : Jul 20, 2024, 06:51 PM IST
    • ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದ್ದಾರೆ
    • ಈ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ
    • ಬಿಜೆಪಿಗರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ತಮ್ಮ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ title=
CM Siddaramaiah

ಚಿತ್ರದುರ್ಗ : ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದ್ದಾರೆ, ಈ ಹಗರಣಗಳ ಬಗ್ಗೆ  ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. 

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಾಗಾದರೆ   ಅವುಗಳು ಹಗರಣಗಳಲ್ಲವೇ? ಹಗರಣಗಳು ಎಂದು ಅವರು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು.

ಇದನ್ನೂ ಓದಿ:ಉತ್ತರ ಕನ್ನಡದ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್‌ಡಿಕೆ

ಅಲ್ಲದೆ, ಇವುಗಳ ಬಗ್ಗೆ ತನಿಖೆ ನಡೆಯುತ್ತಿವೆ. ಅವುಗಳನ್ನು ಉಲ್ಲೇಖ ಮಾಡಿದ್ದು ಏಕೆಂದರೆ ಅವರ ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ. ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಲ್ಲಿ 47 ಕೋಟಿ  ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು ? ಇದನ್ನೆಲ್ಲಾ ಹೇಳಬಾರದೆ? ಎಂದು ಪ್ರಶ್ನಿಸಿದ ಸಿಎಂ, ಈ ಹಗರಣಗಳ ಬಗ್ಗೆ  ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ ಎಂದು ತಿರುಗೇಟು ನೀಡಿದರು.

ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು ಮುಂದಿಟ್ಟಿದ್ದೇನೆ : ಮುಖ್ಯಮಂತ್ರಿಗಳು ಬೆದರಿಸುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಉತ್ತರಿಸಿದ ಸಿಎಂ  ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು  ಮುಂದಿಟ್ಟಿದ್ದೇನೆ ಎಂದರು. ಹಾಗೂ ದೇವರಾಜ ಟ್ರಕ್ ಟರ್ಮಿನಲ್ ಅಧ್ಯಕ್ಷರಾಗಿದ್ದ ಡಿ.ಎಸ್.ವೀರಯ್ಯ ಹಾಗೂ ಎಂ.ಡಿ ಶಂಕರಪ್ಪ ಜೈಲಿಗೆ ಹೋಗಿದ್ದಾರೆ. ಅದನ್ನು ಯಾಕೆ ಪ್ರಸ್ತಾಪಿಸಿಲ್ಲ ? ಅದು ಕೂಡ ತೆರಿಗೆ ಹಣವಲ್ಲವೇ?  ವಿರೋಧ ಪಕ್ಷವಾಗಿ ಅದನ್ನು ಯಾಕೆ ಪ್ರಶ್ನಿಸಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News