ದುರಂತಕ್ಕೀಡಾದ ವಯನಾಡ್ನಲ್ಲಿ 100 ಮನೆಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ
Wayanad landslide : ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಶಿರಾಡ್ ಘಾಟ್ : ಪ್ರವಾಹ ಪೀಡಿತ ವಯನಾಡ್‌ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು.
ಇದನ್ನೂ ಓದಿ:ವರುಣಾರ್ಭಟಕ್ಕೆ ಹಾವೇರಿ ಜಿಲ್ಲೆಯ ಜನ ಜೀವನ ಅಸ್ತವ್ಯಸ್ತ
ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ. ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು.
ಇನ್ನು ಶಿರಾಡಿ ಘಾಟ್ ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿ ಬಳಿಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗೆ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಿದರು. ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದೇ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಒಟ್ಟು 45 ಕಿಮೀ ನಲ್ಲಿ 35 ಕಿಮೀ ಹೆದ್ದಾರಿ ಕಾಮಗಾರಿ ಮುಗಿದಿದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ.
ಇದನ್ನೂ ಓದಿ: ಭಾರೀ ಮಳೆಗೆ ಅಪಾಯದ ಮಟ್ಟ ತಲುಪಿದ ತುಂಗಾ ನದಿ
ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಪಡಿಸಿಕೊಂಡು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಲಾಗಿದೆ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ? ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತು.
ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ವಹಿಸಬೇಕಿತ್ತು. ಇಲ್ಲಿನ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಸರ್ಕಾರದಿಂದ ಪತ್ರ ಬರೆಯುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.