ಇನ್ಮುಂದೆ ಹಾರ ತುರಾಯಿ ಬೇಡ, ಬದಲಾಗಿ ಪುಸ್ತಕ ನೀಡಿ ಎಂದ ಸಿಎಂ ಸಿದ್ದರಾಮಯ್ಯ

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುದಿನ ಸಿಎಂ ಸಿದ್ದರಾಮಯ್ಯ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.ಇದರ ಭಾಗವಾಗಿ ಇಂದು ಸಿಎಂಗೆ ಇರುವ ಜೀರೋ ಟಾಫ್ರಿಕ್ ಹಿಂತೆಗೆದುಕೊಳ್ಳುವಂತೆ ಮಾಡುವುದರ ಜೊತೆಗೆ ಇನ್ಮುಂದೆ ಹಾರ ತುರಾಯಿಗಳ ಬದಲಾಗಿ ಪುಸ್ತಕ ನೀಡುವಂತೆ ಅವರು ಮನವಿ ಮಾಡಿದ್ದಾರೆ.

Written by - Zee Kannada News Desk | Last Updated : May 21, 2023, 09:52 PM IST
  • ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.
  • ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.
  • ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.
ಇನ್ಮುಂದೆ ಹಾರ ತುರಾಯಿ ಬೇಡ, ಬದಲಾಗಿ ಪುಸ್ತಕ ನೀಡಿ ಎಂದ ಸಿಎಂ ಸಿದ್ದರಾಮಯ್ಯ  title=

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುದಿನ ಸಿಎಂ ಸಿದ್ದರಾಮಯ್ಯ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.ಇದರ ಭಾಗವಾಗಿ ಇಂದು ಸಿಎಂಗೆ ಇರುವ ಜೀರೋ ಟಾಫ್ರಿಕ್ ಹಿಂತೆಗೆದುಕೊಳ್ಳುವಂತೆ ಮಾಡುವುದರ ಜೊತೆಗೆ ಇನ್ಮುಂದೆ ಹಾರ ತುರಾಯಿಗಳ ಬದಲಾಗಿ ಪುಸ್ತಕ ನೀಡುವಂತೆ ಅವರು ಮನವಿ ಮಾಡಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ "ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ" ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಕಿತ್ತಾಟಕ್ಕೆ ಅಧಿಕೃತ ಚಾಲನೆ ದೊರಕಿದೆ: ಬಿಜೆಪಿ ವ್ಯಂಗ್ಯ

ಇದಕ್ಕೂ ಮೊದಲು ಅವರು ಜೀರೋ ಟ್ರಾಫಿಕ್ ಕುರಿತಾಗಿ ಟ್ವೀಟ್ ಮಾಡಿ "ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ" ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: Karnataka CM: ʼಜೋಡೆತ್ತುʼ ಸರ್ಕಾರಕ್ಕೆ ಶುಭ ಕೋರಿದ ಸಲಗ..! ಛಲ ಬಿಡದ ತ್ರಿವಿಕ್ರಮನಂತೆ ಕೆಲಸ ನಿರ್ವಹಿಸಿ ಎಂದ ವಿಜಿ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News