ಬೆಂಗಳೂರು : ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


COMMERCIAL BREAK
SCROLL TO CONTINUE READING

ಅವರು ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದರು. ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದು, ಮ್ಯಾಂಡೇಟ್ ಇಲ್ಲದೆ ಆಡಳಿತ ನಡೆಸಿದ್ದಾರೆ ಎಂದರು.


ಇದನ್ನೂ ಓದಿ: ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಸದ್ಯದಲ್ಲೇ ಹಸ್ತಾಂತರ,ಕಾನೂನು ತೊಡಕು ನಿವಾರಣೆ: ಸಚಿವ ಎಂ ಬಿ ಪಾಟೀಲ


ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ : ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಿ ರೋಡ್ ಶೋ ಮಾಡಿಸುವುದು ಮತ್ತು ನಡ್ಡಾರವರು ನರೇಂದ್ರ ಮೋದಿಯವರನ್ನು ನೋಡಿ ಮತ ನೀಡಿ ಎಂದರೂ ಜನ ಮತ ನೀಡಲಿಲ್ಲ ಎಂದರು. ಇನ್ನು ಮುಂದೆ ಪ್ರಧಾನಿ ಮೋದಿಯವರ ಮೇಲೆ ಅವಲಂಬಿತರಾಗಬೇಡಿ. ಅವರು ಬಂದ ಕಡೆಯಲೆಲ್ಲಾ ಬಿಜೆಪಿ ಸೋತಿದೆ. 1980 ರಲ್ಲಿ ಜನತಾ ಲೋಕದಳದಿಂದ ಲೋಕಸಭಾ ಸ್ಪರ್ಧಿಯಾಗಿದ್ದೆ. 


ಆ ಸಂದರ್ಭದಲ್ಲಿ ಮಂಜುನಾಥ್ ಎಂದು ಕಾಂಗ್ರೆಸ್ ಅವರ ಅಭ್ಯರ್ಥಿಯಾಗಿದ್ದಾಗ, ಇಂದಿರಾ ಗಂಧಿ ಹೆಸರು ಹೇಳಿ, ಚುನಾವಣೆ ಗೆಲ್ಲುತ್ತೀರಿ ಎಂದು ಅವರಿಗೆ ಹೇಳಿದರು. ಆ ಕಾಲದಲ್ಲಿಯೂ ಕಾಂಗ್ರೆಸ್ ನವರಿಗೆ ಅಲ್ಲ, ಇಂದಿರಾಗಾಂಧಿ ಹಸರು ಹೇಳಿದರೆ ಚುನಾವಣೆ ಗೆಲ್ಲುತ್ತಿದ್ದರು. ಅಂತೆಯೇ, ಮೋದಿಯವರಿಗೂ ಹೆಸರು ಇತ್ತು. ಆದರೆ ಈಗ ಅದು ಮಂಕಾಗುತ್ತಿದೆ. ಪ್ರಧಾನಿ ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಈಗ ಮಂಕಾಗುತ್ತಿದೆ. ಮೇಲಿದ್ದವರು ಕೆಳಗೆ, ಕೆಳಗಿದ್ದವರು ಮೇಲೆ ಬರಬೇಕು. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ ಎಂದರು.


ಧರ್ಮಗಳ ನಡುವೆ ಬೆಂಕಿಯಿಡುವುದು ನಮ್ಮ ಪರಂಪರೆಯಲ್ಲ : ಕರ್ನಾಟಕದ ಒಂದು ಸಾವಿರ ವರ್ಷಗಳ ಪರಂಪರೆಯನ್ನು ಭಾಷಣದಲ್ಲಿ ಮಾಡಿಕೊಟ್ಟಿದ್ದಾರೆ. ಕವಿರಾಜಮಾರ್ಗ ಶ್ರೀ ವಿಜಯ ದಲ್ಲಿ ಪರಧರ್ಮವನ್ನು , ಜೀವನ ಮಾರ್ಗಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದೇ ಆಸ್ತಿ ಮತ್ತುಒಡವೆ ಎಂದು ಅದರಲ್ಲಿ ತಿಳಿಸಿದ್ದಾರೆ. ಅದೇ ಸಮಾಜದ ಆಸ್ತಿ ಎಂದು ಅಲ್ಲಿ ತಿಳಿಸಲಾಗಿದೆ. 


ಇದನ್ನೂ ಓದಿ: ಮರುಭೂಮಿಯಲ್ಲಿ ನೀರು ಕಂಡು ಖುಷಿಯಿಂದ ಕುಣಿದಾಡುವ ಒಂಟೆ


ನಮ್ಮ ದೇಶದಲ್ಲಿ ಧರ್ಮಗಳು ಬೇರೆ ಇರಬಹುದು. ಆದರೆ ಎಲ್ಲ ಧರ್ಮಗಳ ಸಾರ ಒಂದೇ. ಮನುಷ್ಯರ ನಡುವೆ ಗೋಡೆ ಕಟ್ಟುವುದು, ಧರ್ಮಗಳ ನಡುವೆ ಬೆಂಕಿ ಇಡುವುದು ಅಮಾನವೀಯವಾದುದು. ಅದು ನಮ್ಮ ಪರಂಪರೆ ಅಲ್ಲ.  ಎಲ್ಲರದರಲ್ಲೂ  ವೈರುಧ್ಯಗಳಿದ್ದರೂ , ಏಕತೆಯನ್ನು ಕಾಣಬೇಕು. ಅದರಲ್ಲಿ ನಂಬಿಕೆ ಇಟ್ಟವರು ನಾವು. ಯಾವುದು ಒಂದು ಧರ್ಮ, ಜಾತಿಗೆ ಅಂಟಿಕೊಂಡವರಲ್ಲ ಎಂದರು.


ಜಾತ್ಯಾತೀತೆಯ ಸಿದ್ಧಾಂತಕ್ಕೆ ಕಾಂಗ್ರೆಸ್ ಬದ್ಧ : ಎಲ್ಲ ಧರ್ಮ, ಜಾತಿ, ಆಚಾರಗಳನ್ನು ಗೌರವಿಸುತ್ತೇವೆ. ಮನುಷ್ಯ ಜಾತಿ ತಾನೊಂದೆ ವಲಂ ಎಂದು  ಆದಿಕವಿ ಪಂಪ ಹೇಳಿದರು.  ನಾವೆಲ್ಲರೂ ಮಾನವತಾವಾದಿಗಳು. ಇದೇ ನಮ್ಮ ಸಂವಿಧಾನದಲ್ಲಿರುವದರಿಂದ , ಸಂವಿಧಾನದ ಹೊರತಾಗಿ ಬೇರೆ ಯಾವುದಕ್ಕೂ ತಲೆಬಾಗುವುದಿಲ್ಲ. ಈ ಸಿದ್ದಾಂತಕ್ಕೆ ಕಾಂಗ್ರೆಸ್ ಪಕ್ಷ ಬದ್ಧತೆಯಾಗಿದೆ. ಇದನ್ನೇ ಜಾತ್ಯಾತೀತೆ ಎಂದು ಸಂವಿಧಾನ ತಿಳಿಸಿದೆ. ಭಾರತ ದೇಶದಲ್ಲಿ 142 ಕೋಟಿ ಜನತೆ ಇದೆ.  ಅಷ್ಟು ಜನರೆಲ್ಲರೂ ಒಂದೇ , ನಾವೆಲ್ಲಾ ಭಾರತೀಯರೇ . ಯಾರದೋ ಸ್ವಾರ್ಥಕ್ಕಾಗಿ ಜಾತಿ ಮಾಡಲ್ಪಟ್ಟಿತ್ತು. 850 ವರ್ಷಗಳ ಹಿಂದೆಯೆ ಬಸವಣ್ಣನವರು ಹೇಳಿದಂತೆ , ಕಾಯಕ ಮತ್ತು ದಾಸೋಹ.  ವೃತ್ತಿಯಲ್ಲಿ ಯಾರು ಮೇಲೂ ಅಲ್ಲ  ಕೀಳೂ ಅಲ್ಲ.  ಅನುಭವ ಮಂಟಪ  ಅಲ್ಲಿಂದಲೇ ಬಂದಿದ್ದು .  ವಿಧಾನಮಂಡಲದ ಪರಿಕಲ್ಪನೆ ಅಲ್ಲಿಂದಲೇ ಬಂದಿದೆ.  ಜಾತಿ ಪದ್ದತಿಯಲ್ಲಿ ಮೇಲೊಬ್ಬ , ಕೆಳಗೊಬ್ಬ ಎಂಬ ಬೇಧಭಾವ ಇದೆ.  Vertical society ಯನ್ನು   horizontal society  ಯಾಗಿ ಮಾಡಬೇಕು.  ಮನುಷ್ಯರನ್ನು ಮೇಲೆ ಕೆಳಗೆ ಮಾಡಬಾರದು , ಎಲ್ಲರೂ ಸಮಾನಾಗಿರಬೇಕು  ಎಂದರು.


ಮನುಷ್ಯ – ಮನುಷ್ಯರ ನಡುವೆ ಗೋಡೆ ಕಟ್ಟಬಾರದು : ಬಿಜೆಪಿಯವರಿಗೆ ಜಾತಿಯತೆ ಮಾಡಬೇಡಿ ಎಂದು ಬಹಳ ಬಾರಿ ಹೇಳಿದ್ದೇನೆ. ನಾವೇ , ನಮ್ಮ ಧರ್ಮವೇ ಶ್ರೇಷ್ಠ ಎನ್ನಬಾರದು. ಇದನ್ನು ಜನ ಒಪ್ಪಲ್ಲ. 5 ಚುನಾವಣೆಯಲ್ಲಿಯೂ ಜನ ನಿಮ್ಮನ್ನು ನಂಬಲ್ಲ. ಹಿಟ್ಲರ್ ಬಗ್ಗೆ ಮಾತನಾಡಿದರೆ ಬಿಜೆಪಿಯವರಿಗೆ ಯಾಕೆ  ಬೇಸರ?   ಹಿಟ್ಲರ್ ಒಬ್ಬ  ಮತಾಂಧ , ಬಿಜೆಪಿಯವರು ಅವನ ಪರವೇ ?    ಮನುಷ್ಯ – ಮನುಷ್ಯರ ನಡುವೆ ಗೋಡೆ ಕಟ್ಟಬಾರದು. ಜಾತಿ ನಡುವೆ ಬೆಂಕಿ ಹಚ್ಚಿದರೆ ಅದು ನಮ್ಮನೇ ಸುಡುತ್ತದೆ.  ನಮ್ಮ ಸಮಾಜ ಒಳಿತಿಗೆ ಏನು ಮಾಡಬೇಕು. ರಾಜಕೀಯವಾಗಿ, ಸಾಮಾಜಿಕವಾಗಿ ಅಸಮಾನತೆ ಇದ್ದು , ಅದನ್ನು ಹೋಗಲಾಡಿಸಬೇಕು.  1949 , ನವೆಂಬರ್ 29 ನಲ್ಲಿ ಅಂಬೇಡ್ಕರ್ ಅವರು ಐತಿಹಾಸಿಕ ಭಾಷಣ ಮಾಡಿದರು.  ನಾವು ಎಲ್ಲರಿಗೂ ಸಮಾನತೆ ನೀಡಿದ್ದೇವೆ. ಒಂದು ಮತ , ಒಂದು ಮೌಲ್ಯ ಎಂದಿದ್ದಾರೆ. ಆದರೆ  ಸಾಮಾಜಿಕವಾಗಿ , ಆರ್ಥಿಕವಾಗಿ ಅಸಮಾನತೆ ಇದೆ . ಪ್ರಜಾಪ್ರಭುತ್ವದ ಸೌಧ ಧ್ವಂಸವಾಗುತ್ತದೆ ಎಂದು ಆಗಲೇ ಎಚ್ಚರಿಕೆ ನೀಡಿದ್ದರು ಎಂದರು.  


ಇದನ್ನೂ ಓದಿ: SC/ST ಗುತ್ತಿಗೆದಾರರ ಟೆಂಡರನಲ್ಲಿ ವಿನಾಯಿತಿ 1 ಕೋಟಿಗೆ ಹೆಚ್ಚಳ : ಮಾಜಿ ಸಿಎಂ ಬೊಮ್ಮಾಯಿ ಸ್ವಾಗತ


ನಾವು ಜನರ ಜೇಬಿಗೆ ದುಡ್ಡು ಹಾಕುತ್ತಿದ್ದೇವೆ : ರಾಜ್ಯದಲ್ಲಿ ಸಮಾನತೆ, ಸಾಮರಸ್ಯ ಇರಬೇಕು.  ಉತ್ತರ ಯೂರೋಪ್ ದೇಶಗಳಲ್ಲಿ  Universal basic income ನ್ನು ಪಾಲಿಸುತ್ತಿದ್ದಾರೆ. ಅದಕ್ಕೆ ನಾವು ಜನರ ಜೇಬಿಗೆ ದುಡ್ಡು ಹಾಕುತ್ತಿದ್ದೇವೆ.  ಪಂಚ ಗ್ಯಾರೆಂಟಿಗಳ ಮೂಲಕ ಎಲ್ಲರಿಗೂ 5000 ರೂ. ಸಿಗುತ್ತದೆ.ಬಿಜೆಪಿಯವರು, ಅಕ್ಕಿ ಗೋಧಿ ಮೇಲೆ, ಹಾಲು ಮೊಸರು, ಪೆನ್ನು ಪೆನ್ಸಿಲ್ ಮೇಲೆ ಜಿಎಸ್ ಟಿ ಹಾಕುವ ಮೂಲಕ ಜೇಬಿನಿಂದ ಹಣ ಕಿತ್ತರು. ನಾವು ನೀಡುವ ಗೃಹ ಲಕ್ಷ್ಮಿ, ಗೃಹ ಜ್ಯೋತಿ , ಅನ್ನಭಾಗ್ಯ, ಶಕ್ತಿ, ಯುವನಿಧಿ ಗಳ ಮೂಲಕ ವರ್ಷಕ್ಕೆ ಸುಮಾರು 52,000 ಕೋಟಿಗೂ ಹೆಚ್ಚು ಖರ್ಚಾಗುತ್ತದೆ. ಜನರಿಗೆ ಮಾಹೆಯಾನ ಸುಮಾರು 5 ಸಾವಿರ ನೀಡಲಾಗುತ್ತವೆ. ಜನರ ಕೈಯಲ್ಲಿ ದುಡ್ಡು ಇದ್ದರೆ , ವ್ಯಾಪಾರ , ವಹಿವಾಟು ನಡೆಯುತ್ತದೆ. ಕರೋನಾ ಸಂದರ್ಭದಲ್ಲಿ ಜನರ ಕೈಯಲ್ಲಿ ದುಡ್ಡು ಇರದೇ ತೊಂದರೆ ಅನುಭವಿಸಿದರು.  ಗ್ಯಾರೆಂಟಿಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿಗಳೇ ಹೇಳಿದ್ದಾರೆ. ಆದರೆ ನಾವು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಹಾಗೂ ರಾಜ್ಯ ದಿವಾಳಿಯಾಗುವುದಕ್ಕೂ ಬಿಡುವುದಿಲ್ಲ ಎಂದರು.


ವಿರೋಧ ಪಕ್ಷದವರದು ಅವಿವೇಕದ ತರ್ಕ : 20 ಮೇ ರಂದು ಅಧಿಕಾರಕ್ಕೆ ಬಂದ ತಕ್ಷಣ , ಸರ್ಕಾರ 5 ಗ್ಯಾರೆಂಟಿಗಳಿಗೆ ತಾತ್ವಿಕ  ಅನುಮೋದನೆ ನೀಡಿತು.  ಜೂನ್ 8 ರಂದು ಯಾವ ಯೋಜನೆಗಳು ಯಾವಾಗ ಜಾರಿಯಾಗಬೇಕೆಂದೂ ನಿರ್ಧರಿಸಲಾಯಿತು. ಆಯವ್ಯಯದಲ್ಲಿ 5 ಗ್ಯಾರೆಂಟಿಗಳಿಗೂ ಹಣ ನಿಗದಿಪಡಿಸಲಾಗಿದೆ.  ಇಷ್ಟು ಹಣ ಎಲ್ಲಿಂದ ಬರುತ್ತದೆ , ರಾಜ್ಯ ಹೇಗೆ ನಡೆಸುತ್ತಾರೆ ಎಂದು ಟೀಕಿಸಿದರು.  ಗ್ಯಾರೆಂಟಿಗಳಿಗೆ ಷರತ್ತುಗಳನ್ನು ಹಾಕಿದ್ದಿರಿ ಎಂದು ಈಗ ಟೀಕಿಸುತ್ತಿದ್ದಾರೆ. ಷರತ್ತುಗಳಿಲ್ಲದೇ ಯೋಜನೆ ಜಾರಿ ಮಾಡಿ ಎಂದು ಹೋರಾಟ ಮಾಡಿದರು. ಗೃಹ ಜ್ಯೋತಿಯಡಿ ಎಲ್ಲರಿಗೂ 200 ಯೂನಿಟ್ ಕೊಡಿ ಎನ್ನುವುದು ಅವಿವೇಕದ ತರ್ಕ .  ಬಿಜೆಪಿಯವರು  7 ಜಿಲ್ಲೆಗಳಲ್ಲಿ ಮತಗಳನ್ನೇ ಪಡೆದಿಲ್ಲ.  ಬಿಜೆಪಿ ಮುಕ್ತ ಭಾರತವನ್ನು ಮಾಡುತ್ತೇವೆ ಎಂದು ನಾವು ಹೇಳುವುದಿಲ್ಲ. ಬಿಜೆಪಿಯವರು ಎಂದಿಗೂ ಅಧಿಕಾರಕ್ಕೆ ಬರಬಾರದು . ರಾಜ್ಯ ಅಭಿವೃದ್ಧಿ ಆಗಲ್ಲ. ಜನಪರ ಕೆಲಸಗಳು ಆಗಲ್ಲ. ದಲಿತರಿಗೆ , ಬಡವರಿಗೆ , ರೈತರಿಗೆ ನ್ಯಾಯ ಸಿಗುವುದಿಲ್ಲ. ಬಿಜೆಪಿಯವರು ವಿರೋಧಪಕ್ಷದಲ್ಲಿ ಸಕ್ರಿಯವಾಗಿದ್ದಾರೆ. ರಾಜ್ಯದ ಜನತೆಯ ನಿರೀಕ್ಷೆಗೆ ತಕ್ಕಂತೆ ಮಾತನಾಡುತ್ತೇನೆ. ನಮ್ಮ ಸರ್ಕಾರದಿಂದ ರಾಜ್ಯದ ಜನತೆ ಸಂತುಷ್ಟರಾಗಿದ್ದಾರೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.