ಪ್ರಧಾನಿ ಮೋದಿ ೧೦ ವರ್ಷಗಳಲ್ಲಿ 20 ಕೋಟಿ ಉದ್ಯೋಗ ಕೊಡಬೇಕಾಗಿತ್ತು: ಸಿಎಂ ಸಿದ್ದರಾಮಯ್ಯ
Unemployment Rate In India: ಕೇಂದ್ರ ಸರ್ಕಾರವೇ ಪ್ರತಿ ೩ ತಿಂಗಳಿಗೊಮ್ಮೆ ನಡೆಸುವ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (PLFS) ಪ್ರಕಾರ, 2019ರಿಂದ 2022ರವರೆಗಿನ ಅವಧಿಯಲ್ಲಿ ದೇಶದ ನಿರುದ್ಯೋಗ ಪ್ರಮಾಣ 22.9%ಕ್ಕೆ ಏರಿಕೆಯಾಗಿದೆ. ಹೆಚ್ಚಾಗಿರುವುದು ಉದ್ಯೋಗಗಳ ಸಂಖ್ಯೆಯೇ? ಇಲ್ಲವೇ ನೀವು ಹೇಳುತ್ತಿರುವ ಸುಳ್ಳುಗಳ ಸಂಖ್ಯೆಯೇ ಪ್ರಧಾನಿಗಳೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಂಗಳೂರು: ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳನ್ನು ನೀಡುತ್ತೇವೆಂದು ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಭರವಸೆ ಪ್ರಕಾರ ಹತ್ತು ವರ್ಷಗಳ ಅವಧಿಯಲ್ಲಿ 20 ಕೋಟಿ ಉದ್ಯೋಗ ಕೊಡಬೇಕಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಅವರು, ʼಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಹೇಳುವ ಪ್ರಕಾರ ಕೇಂದ್ರ ಸರ್ಕಾರದಿಂದ 7 ಕೋಟಿ ಉದ್ಯೋಗ ಸೃಷ್ಟಿಯಾಗಿದೆಯಂತೆ. ಯಡಿಯೂರಪ್ಪನವರ ಪ್ರಕಾರ ಮೋದಿಯವರು ಹೇಳಿರುವುದು ಸುಳ್ಳು. ಸತ್ಯ ಸಂಗತಿ ಏನೆಂದರೆ ಇಬ್ಬರು ನಾಯಕರು ಹೇಳುತ್ತಿರುವುದು ಸುಳ್ಳು. ಒಂದು ದೊಡ್ಡ ಸುಳ್ಳು, ಇನ್ನೊಂದು ಸಣ್ಣ ಸುಳ್ಳು. ಒಟ್ಟಾರೆ ಎರಡೂ ಸುಳ್ಳು. ಇದು ದೇಶದ ದುರ್ಗತಿʼ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಉದ್ಯೋಗದ ಸ್ಥಿತಿ ಬಗ್ಗೆ ವಿಶ್ವಾಸಾರ್ಹ ಸಂಸ್ಥೆಗಳು ನೀಡಿರುವ ಅಧಿಕೃತ ಮಾಹಿತಿಯನ್ನು ಆಧರಿಸಿ ದೇಶದ ಪ್ರಧಾನಿ ಮೋದಿ ಮತ್ತು ಮಾಜಿ ಸಿಎಂ ಯಡಿಯೂರಪ್ಪರನ್ನು ಕೆಲವು ಪ್ರಶ್ನೆಗಳನ್ನು ಕೇಳುತ್ತೇನೆ. ಪ್ರಧಾನಿ ಮೋದಿಯವರ ಸಚಿವ ಸಂಪುಟದ ಜಿತೇಂದರ್ ಸಿಂಗ್ ಅವರು 2022ರ ಜುಲೈನಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “2014-15 ಮತ್ತು 2021-22ರ ಅವಧಿಯ ನಡುವೆ ಕೇವಲ 7 ಲಕ್ಷ ಹೊಸ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿತ್ತು ಎಂದು ಹೇಳಿದ್ದರು. ಕೇಂದ್ರ ಬಿಜೆಪಿ ಸರ್ಕಾರದ ಅಧೀನ ಸಂಸ್ಥೆಯಾದ NSSO 2017-18ರಲ್ಲಿ ನೀಡಿದ್ದ ವರದಿಯ ಪ್ರಕಾರ ಕಳೆದ 45 ವರ್ಷಗಳಲ್ಲೇ ದೇಶದ ನಿರುದ್ಯೋಗ ಪ್ರಮಾಣ ಅತಿ ಗರಿಷ್ಠ ಮಟ್ಟಕ್ಕೆ, ಅಂದರೆ 6.1ಗೆ ತಲುಪಿದೆ. 2011-12ರಲ್ಲಿ ಈ ಪ್ರಮಾಣ ಶೇ.2.2ರಷ್ಟು ಆಗಿತ್ತು ಎಂದಿದ್ದರು. ಈ ಸಚಿವರು ಹೇಳಿರುವುದು ನಿಮ್ಮದೇ ಸರ್ಕಾರ ನೀಡಿರುವ ಮಾಹಿತಿಯಲ್ಲವೇ ಪ್ರಧಾನಿಗಳೇ? ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕನಾಮಿ ವರದಿ ಪ್ರಕಾರ ದೇಶದ ನಿರುದ್ಯೋಗ ಪ್ರಮಾಣ 2014ರಲ್ಲಿ 5.44% ಇದ್ದದ್ದು, 2023ರ ಅಕ್ಟೋಬರ್‌ನಲ್ಲಿ 10.05% ತಲುಪಿದೆ. ಇನ್ನು ವಯಸ್ಸಿನ ಆಧಾರದಲ್ಲಿ ನೋಡುವುದಾದರೆ 20 ರಿಂದ 24ರ ವಯೋಮಾನದವರು 43.65% ನಿರುದ್ಯೋಗಿಗಳಿದ್ದರೆ, 25 ರಿಂದ 29 ವಯೋಮಾನದವರಲ್ಲಿ 14.33%, 30 ರಿಂದ 34 ವಯೋಮಾನದವರಲ್ಲಿ 2.49% ನಿರುದ್ಯೋಗಿಗಳಿದ್ದಾರೆʼ ಎಂದು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ನಾಮಪತ್ರ ಸಲ್ಲಿಕೆ
ರಾಜ್ಯದಲ್ಲಿ ಕಾಂಗ್ರೆಸ್ 3ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲಲ್ಲ : ಪ್ರಹ್ಲಾದ ಜೋಶಿ ಸವಾಲು
ಇದು ಹೊಸ ಉದ್ಯೋಗಗಳ ಸೃಷ್ಟಿಯ ಕಥೆಯಾದರೆ, ಇರುವ ಸರ್ಕಾರಿ ಉದ್ಯೋಗಗಳ ಭರ್ತಿಯಲ್ಲೂ ತೀರಾ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ವಿವಿಧ ಇಲಾಖೆಯ 30 ಲಕ್ಷ ಹುದ್ದೆಗಳು ಖಾಲಿ ಇವೆ. ಸಣ್ಣಪುಟ್ಟ ಹುದ್ದೆಗಳಿಗೂ ಸ್ನಾತಕೋತ್ತರ ಪದವೀಧರ, ಬಿಇ, ಎಂಬಿಬಿಎಸ್ ಪದವಿ ಪಡೆದವರು ಅರ್ಜಿ ಸಲ್ಲಿಸುವ ವಿದ್ಯಮಾನ ಇತ್ತೀಚೆಗೆ ಸಾಮಾನ್ಯವಾಗುತ್ತಿದೆ. ದೇಶದ ಯುವಜನರು ನಿರುದ್ಯೋಗದ ದಳ್ಳುರಿಯಲ್ಲಿ ಬೇಯುತ್ತಾ ಇದ್ದಾರೆ. ಕಳೆದ ವರ್ಷಾಂತ್ಯದಲ್ಲಿ ಸಂಸತ್ತಿನ ಭದ್ರತೆಯನ್ನು ಬೇಧಿಸಿ, ಒಳನುಸುಳಿ ಹೊಗೆಬಾಂಬ್ ಸಿಡಿಸುವ ಮಟ್ಟಿಗೆ ಹತಾಶರಾಗಿದ್ದ ಯುವಕರು ಕೂಡಾ ನಿರುದ್ಯೋಗಕ್ಕೆ ಬಲಿಯಾದವರಲ್ಲವೇ ಪ್ರಧಾನಿಗಳೇ?ʼ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.