ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ಕ್ರಿಕೆಟ್ ವೀಕ್ಷಿಸಲು ತೆರಳಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಕೆಟ್ ಕ್ರೀಡೆಯನ್ನು ಬೆಂಬಲಿಸಲು ತೆರಳಲಾಗಿತ್ತು. ಅವರು ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

Written by - Krishna N K | Last Updated : Oct 23, 2023, 01:28 PM IST
  • ಸರ್ಕಾರವನ್ನು ಕೆಡವಲು ಸಿದ್ದರಾಮಯ್ಯರವರೂ ಕಾರಣ
  • ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ
  • ಕುಣಿಯಲಾರದವರು ನೆಲಡೊಂಕು ಅಂತಾರೆ ಎಂದ ಸಿದ್ದರಾಮಯ್ಯ
ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಮುಖ್ಯಮಂತ್ರಿ ಸಿದ್ದರಾಮಯ್ಯ title=

ಬೆಂಗಳೂರು : ತಮ್ಮ ಹಿಂದಿನ ಸರ್ಕಾರವನ್ನು ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ, ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ತಿಳಿಸಿದರು.

ಅವರು ಇಂದು ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರಿಗೆ ಮಾತನಾಡಿದರು. ನಾಳೆ ನಡೆಯಲಿರುವ ಚಾಮುಂಡೇಶ್ವರಿ ದೇವಿ ಮೆರವಣಿಗೆ, ನಂದಿಕಂಬದ ಪೂಜೆ, ಪಂಜಿನ ಮೆರವಣಿಗೆ ಸೇರಿದಂತೆ ದಸರಾ ಮಹೋತ್ಸವದಲ್ಲಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಭಾಗವಹಿಸಲಿದ್ದೇನೆ ಎಂದರು.

ಇದನ್ನೂ ಓದಿ: ಈ ಜಿಲ್ಲೆಗಳಲ್ಲಿ ವರುಣಾರ್ಭಟದ ಮುನ್ಸೂಚನೆ ! ಚಂಡಮಾರುತ ಹಿನ್ನೆಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯ ಭೀತಿ

ಮುಖ್ಯಮಂತ್ರಿಯವರು ವಿಶ್ವಕಪ್ ಕ್ರಿಕೆಟ್ ವೀಕ್ಷಿಸಲು ತೆರಳಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಕೆಟ್ ಕ್ರೀಡೆಯನ್ನು ಬೆಂಬಲಿಸಲು ತೆರಳಲಾಗಿತ್ತು. ಅವರು ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ವಸತಿಗೃಹವನ್ನು ಹಿಂದಿರುಗಿಸಿಲ್ಲ ಎಂಬ ಅವರ ಟೀಕೆಗೆ ಉತ್ತರಿಸುತ್ತಾ, ಯಡಿಯೂರಪ್ಪನವರೂ ಕಾವೇರಿಯಲ್ಲಿ ಕಡೆಯತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ವಸತಿಗೃಹದಲ್ಲಿ  ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News