ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡಿದ್ದಾರೆ. KPCC ವತಿಯಿಂದ ಇಂದಿರಾಗಾಂಧಿ ಭವನದ ‘ಭಾರತ್ ಜೋಡೋ’ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ರೂ. ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದು ದೇಶದಲ್ಲೇ ಮೊದಲು. ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ, ತಲೆ ಎತ್ತಿ ಹೇಳಿ. ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಉಡುಪಿ ನಗರ ಸಭೆಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು
ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿತ್ತು. ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9,000 ಕೋಟಿ, ಸಣ್ಣ ನೀರಾವರಿ ಇಲಾಖೆಯಲ್ಲಿ 2,000 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6,000 ಕೋಟಿ ರೂ. ಮತ್ತು ಬೆಂಗಳೂರು ನಗರ 5,000 ಕೋಟಿ ರೂ. ಬಿಲ್ ಬಾಕಿ ಉಳಿಸಿದ್ದಾರೆ. ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿ ಹೋಗಿದ್ದಾರೆ. ಇಷ್ಟಾದರೂ ನಾವು 59 ಸಾವಿರ ಕೋಟಿ ರೂ. ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ರೂ. ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ದುರಾಡಳಿತ ನಡೆಸಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದೆ.
4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ… pic.twitter.com/E09cLYuRJk
— Siddaramaiah (@siddaramaiah) January 10, 2024
ಇದನ್ನೂ ಓದಿ: ಕರವೇ ಅಧ್ಯಕ್ಷ ನಾರಾಯಣಗೌಡ ಅವರಿಗೆ ಬಿಡುಗಡೆ ಭಾಗ್ಯ ಇಲ್ಲ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.