ರಾಜ್ಯದ ಜನರ ಜೇಬಿಗೆ ನಮ್ಮ ಸರ್ಕಾರ 2 ವರ್ಷದಲ್ಲಿ 1 ಲಕ್ಷ ಕೋಟಿ ರೂ. ಹಾಕಿದೆ: ಸಿಎಂ ಸಿದ್ದರಾಮಯ್ಯ

ʼನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ‌ ಕ್ಷೇತ್ರಕ್ಕೆ ₹1,750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆʼ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Nov 10, 2025, 06:54 PM IST
  • ರಾಜ್ಯದ ಜನರ ಜೇಬಿಗೆ ನಮ್ಮ ಸರ್ಕಾರ 2 ವರ್ಷದಲ್ಲಿ 1 ಲಕ್ಷ ಕೋಟಿ ರೂ. ಹಾಕಿದೆ
  • ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನ ಹಂಚುತ್ತಿದ್ದಾರೆ
  • ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ ಎಂದ ಸಿದ್ದರಾಮಯ್ಯ
ರಾಜ್ಯದ ಜನರ ಜೇಬಿಗೆ ನಮ್ಮ ಸರ್ಕಾರ 2 ವರ್ಷದಲ್ಲಿ 1 ಲಕ್ಷ ಕೋಟಿ ರೂ. ಹಾಕಿದೆ: ಸಿಎಂ ಸಿದ್ದರಾಮಯ್ಯ

CM Siddaramaiah: ಎರಡು ವರ್ಷದಲ್ಲಿ ನಮ್ಮ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನ ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನ ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ʼನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರʼ ಎಂದು ಹೇಳಿದ್ದಾರೆ. 

Add Zee News as a Preferred Source

1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನ ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು. ಬರಡು ನೆಲ ಕೂಡ್ಲಿಗಿಯನ್ನ ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಇದನ್ನೂ ಓದಿ: ಲಬುರ್ಗಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಲುಗೈ

ʼನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ‌ ಕ್ಷೇತ್ರಕ್ಕೆ ₹1,750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ ತಿಂಗಳು ಸರ್ಕಾರದ ಗ್ಯಾರಂಟಿಗಳು ತಲುಪುತ್ತಿವೆ‌. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆʼ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನ ಹಂಚುತ್ತಿದ್ದಾರೆ. ಸುಳ್ಳಿನ ಸರದಾರ ಬಿಜೆಪಿಯವರು ಈಗ ಸಾರ್ವಜನಿಕವಾಗಿ ಹರಾಜಾಗಿದ್ದಾರೆ. ಇವರು ಲಜ್ಜೆಗೆಟ್ಟು ಮತಗಳ್ಳತನಕ್ಕೆ ಇಳಿದು ಸಿಕ್ಕಿ ಬಿದ್ದಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್‌

FRP ಮತ್ತು MSP ಎರಡನ್ನೂ ನಿಗದಿ ಮಾಡೋದು ಕೇಂದ್ರದ ಬಿಜೆಪಿ ಸರ್ಕಾರ. ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ. ಆದರೆ ಬಿ.ವೈ.ವಿಜಯೇಂದ್ರ ತಮ್ಮದೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನ ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ಡ್ರಾಮಾ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರ್ಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನ ಕಾಪಾಡೊ ಕೆಲಸ ಮಾಡಿದೆ ಎಂದು ಹೇಳಿದರು. 

ಶಾಸಕ ಶ್ರೀನಿವಾಸ್, ಸಂಸದ ತುಕಾರಾಂ ಇಬ್ಬರೂ ಜನರ ಅಭಿವೃದ್ಧಿ ಹೊರತಾಗಿ ಬೇರೇನನ್ನೂ ಕೇಳುವವರಲ್ಲ. ಇವರಿಬ್ಬರನ್ನು ಗೆಲ್ಲಿಸಿದ ಜನತೆಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಶಾಸಕರು ಮತ್ತು ಸಂಸದರು ನಿಮ್ಮ ಆಸ್ತಿ ಇದ್ದ ಹಾಗೆ. ಇವರನ್ನು ಕಾಪಾಡಿಕೊಳ್ಳಿ ಎಂದು ವೇಳೆ ಸಿಎಂ ಸಿದ್ದರಾಮಯ್ಯ ಕ್ಷೇತ್ರದ ಜನತೆಗೆ ಸಲಹೆ ನೀಡಿದರು.  

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News