ಮೈಸೂರು: ನಾವು ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ನಾವು ಯಶಸ್ವಿಯಾಗಿ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ. ಇದಲ್ಲದೆ ಪ್ರಣಾಳಿಕೆಯಲ್ಲಿ ಹೇಳಿರುವ 76 ಕಾರ್ಯಕ್ರಮಗಳನ್ನು ಜಾರಿ ಮಾಡುತ್ತೇವೆ’ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: Bangude Fish: ಬಲೆಗೆ ಬಿದ್ದ ಕರಾವಳಿಯಲ್ಲೇ ಅತಿದೊಡ್ಡ ಬಂಗುಡೆ ಮೀನು!
ಮೇ 9 ರಂದು ಚುನಾವಣೆಯ ಹಿಂದಿನ ದಿನ ನಾನು ಮತ್ತು ಡಿ.ಕೆ.ಶಿವಕುಮಾರ್ ಅವರು ಗ್ಯಾರಂಟಿ ಕಾರ್ಡುಗಳನ್ನು ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಪೂಜೆ ಮಾಡಿ ವಿತರಿಸಿದ್ದೆವು. ನಾಳೆ 5 ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯುತ್ತಿದೆ. ರಾಜ್ಯಸಭಾ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಚಾಲನೆ ನೀಡಲಾಗುತ್ತಿದೆ. ನಾಳೆ ನಡೆಯುತ್ತಿರುವುದು ಸರ್ಕಾರಿ ಕಾರ್ಯಕ್ರಮ. ಆ ಮೂಲಕ 1.10 ಲಕ್ಷ ಕುಟುಂಬಗಳ ಯಜಮಾನಿಯರಿಗೆ 2000 ರೂ. ಪ್ರತಿ ತಿಂಗಳು ನೀಡಲಾಗುತ್ತದೆ’ ಎಂದು ಹೇಳಿದರು.
ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಬೆಲೆ ಏರಿಕೆ ಮತ್ತು ಹಣದುಬ್ಬರ ತಡೆಯಲು ವಿಫಲವಾಗಿದೆ. ಸಾಮಾನ್ಯ ಜನರು, ಮಧ್ಯಮ ವರ್ಗದವರು ಮತ್ತು ಬಡ ಕುಟುಂಬದವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಒಂದು ಕುಟುಂಬಕ್ಕೆ ತಿಂಗಳಿಗೆ ಕನಿಷ್ಠ 4-6 ಸಾವಿರ ರೂ. ದೊರೆಯಲಿವೆ. ಬಡವರ ಬಳಿ ಹಣವಿದ್ದರೆ ಮಾತ್ರ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಯೋಜನೆ ಈಗಾಗಲೇ ಚಾಲನೆಗೆ ಬಂದಿದೆ. ನಾಳೆ ಗೃಹಜ್ಯೋತಿ ಪ್ರಾರಂಭವಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ: ಭೀಮನ ಆರೋಗ್ಯ ಸ್ಥಿತಿ ಗಂಭೀರ!..ಸ್ಥಳಾಂತರಿಸಿ ಚಿಕಿತ್ಸೆ ನೀಡುವಂತೆ ಸ್ಥಳೀಯರ ಒತ್ತಾಯ..!
ದೇಶದಲ್ಲಿಯೇ ಇಂತಹ ಯೋಜನೆ ಇಲ್ಲ!
ಗೃಹಲಕ್ಷ್ಮಿ ಯೋಜನೆಯ ರೀತಿ ದೇಶದಲ್ಲಿಯೇ ಒಂದೇ ಯೋಜನೆಗೆ ಇಷ್ಟೊಂದು ಹಣ ಖರ್ಚು ಮಾಡುತ್ತಿರುವ ಬೇರೆ ಯಾವ ಯೋಜನೆಯೂ ಇಲ್ಲ. 1.10 ಕೋಟಿ ಕಾರ್ಡುಗಳನ್ನು ಹಂಚಿ, ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾಯಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.