BJP Fails Karnataka: ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬೆಲೆ ಏರಿಕೆ ವಿಪರೀತವಾಗಿದೆ ಎಂದು ಆರೋಪಿಸಿ ಬಿಜೆಪಿ ಆಯೋಜಿಸಿರುವ 16 ದಿನಗಳ ʼಜನಾಕ್ರೋಶ ಯಾತ್ರೆʼ ಮೈಸೂರಿನಿಂದ ಸೋಮವಾರ ಆರಂಭವಾಗಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, 'ಬಿ.ವೈ.ವಿಜಯೇಂದ್ರ ತಮ್ಮ ಕುರ್ಚಿ (ಅಧ್ಯಕ್ಷ ಸ್ಥಾನ) ಉಳಿಸಿಕೊಳ್ಳಲು ಈ ʼಜನಾಕ್ರೋಶ ಯಾತ್ರೆʼಯನ್ನ ಹಮ್ಮಿಕೊಂಡಿದ್ದಾರೆಯೇ ಹೊರತು ಬೇರೆ ಯಾವುದೇ ಸಾರ್ವಜನಿಕ ಹಿತಾಸಕ್ತಿಯ ಸದುದ್ದೇಶ ಖಂಡಿತ ಈ ಯಾತ್ರೆಗೆ ಇಲ್ಲ'ವೆಂದು ಟೀಕಿಸಿದ್ದಾರೆ.
ʼಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಶಾಸಕ ಮಿತ್ರರು ಕಳೆದೆ ಎರಡು ವರ್ಷಗಳಿಂದ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ದಮ್ಮು ತಾಕತ್ ತೋರಿಸಲಿʼ ಎಂದು ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಇದನ್ನೂ ಓದಿ: ವಕ್ಫ್ (ತಿದ್ದುಪಡಿ) ಮಸೂದೆ 2025 ಗೆ ರಾಷ್ಟ್ರಪತಿ ಮುರ್ಮು ಅಂಕಿತ
ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ @BJP4Karnataka ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ…
— Siddaramaiah (@siddaramaiah) April 7, 2025
ʼವಿಜಯೇಂದ್ರ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು ಅವರ ಪಕ್ಷದ ಹೈಕಮಾಂಡಿಗೂ ಮನವರಿಕೆಯಾದಂತಿದೆ. ಪಕ್ಷದೊಳಗಿದ್ದು ಮಾಡುವ ಆರೋಪಗಳಿಂದ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದೆ. ಅಂತಿಮವಾಗಿ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶವಾಗಿದೆ. ಇದಕ್ಕಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆಯೇ ಹೊರತು ಬೇರೆ ಯಾವ ಸಾರ್ವಜನಿಕ ಹಿತಾಸಕ್ತಿಯ ಸದುದ್ದೇಶ ಖಂಡಿತ ಈ ಯಾತ್ರೆಗೆ ಇಲ್ಲ. ವಿಜಯೇಂದ್ರ ಅವರು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರದ್ದು ಮಾತ್ರವಲ್ಲ ರಾಜ್ಯದ ಜನತೆಯ ವಿಶ್ವಾಸವನ್ನೂ ಕಳೆದುಕೊಂಡಿದ್ದಾರೆʼ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ರಾಜ್ಯದ @BJP4Karnataka ನಾಯಕರು ಕೇಂದ್ರ ಸರ್ಕಾರದ ಜೊತೆ ಷಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ. ರಾಜ್ಯದ ಜನ ತಮ್ಮ ಬೆವರಿನ ಗಳಿಕೆಯಿಂದ ನೀಡುತ್ತಿರುವ ಐದು ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ…
— Siddaramaiah (@siddaramaiah) April 7, 2025
ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಜೆಟ್‌ನ 51,000 ಕೋಟಿ ರೂಪಾಯಿ ಹಣ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದ್ದು, ಅವರೆಲ್ಲರೂ ಸಂತುಷ್ಠರಾಗಿದ್ದಾರೆ. ಈಗ ಅವರು ಬೀದಿಗೆ ಬಂದು ನಮ್ಮ ಪರ ಘೋಷಣೆ ಹಾಕದೆ ಇರಬಹುದು, ಆದರೆ ಅವರೆಲ್ಲರ ಆಶೀರ್ವಾದ ನಮ್ಮ ಸರ್ಕಾರದ ಪರವಾಗಿದೆ. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಭಾರತೀಯ ಜನತಾ ಪಕ್ಷದ ಬಡವರು ಮತ್ತು ಮಹಿಳಾ ವಿರೋಧಿ ಧೋರಣೆಯನ್ನು ಅರ್ಥಮಾಡಿಕೊಳ್ಳುವಷ್ಟು ಜನ ಪ್ರಜ್ಞಾವಂತರಾಗಿದ್ದಾರೆ. ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ರಾಜ್ಯದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಷಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ. ರಾಜ್ಯದ ಜನ ತಮ್ಮ ಬೆವರಿನ ಗಳಿಕೆಯಿಂದ ನೀಡುತ್ತಿರುವ ಐದು ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಹಣದಲ್ಲಿ ಕೇವಲ 60,000 ಕೋಟಿ ರೂಪಾಯಿ ಮಾತ್ರ ವಾಪಸು ನೀಡುತ್ತಿರುವ ಅನ್ಯಾಯದ ಬಗ್ಗೆ ಆಕ್ರೋಶಗೊಂಡಿದ್ದಾರೆ. ಬಿಜೆಪಿ ಪಕ್ಷದ ಯಾತ್ರೆಯ ಸಮಯದಲ್ಲಿ ಈ ಆಕ್ರೋಶದ ಬಿಸಿ ಕೂಡಾ ಬಿಜೆಪಿ ನಾಯಕರಿಗೆ ತಟ್ಟಲಿದೆʼ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ:: ಬಿಜೆಪಿ ನಾಯಕರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!!
ʼಕರ್ನಾಟಕದ ಜನರ ಹಿತರಕ್ಷಣೆಯ ಕಿಂಚಿತ್ತಾದರೂ ಕಾಳಜಿ ಈ ಬಿಜೆಪಿ ನಾಯಕರಿಗೆ ಇರುವುದಾದರೆ ಮೊದಲು ಇವರು ಪ್ರಧಾನಮಂತ್ರಿ ನಿವಾಸದ ಎದುರು ಹೋಗಿ ಪ್ರತಿಭಟನೆ ನಡೆಸಬೇಕು. ಕರ್ನಾಟಕವನ್ನು ಶತ್ರುರಾಜ್ಯದಂತೆ ನೋಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತೆರಿಗೆ ಪಾಲು, ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿರುವುದು ಮಾತ್ರವಲ್ಲ ಈಗ ಕೇಂದ್ರದಲ್ಲಿ ಕರ್ನಾಟಕದ ದನಿಯನ್ನು ಕುಗ್ಗಿಸಬೇಕೆಂಬ ದುಷ್ಟ ಉದ್ದೇಶದಿಂದ ಕ್ಷೇತ್ರ ಮರುವಿಂಗಡಣೆಯನ್ನು ಮಾಡಲು ಹೊರಟಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿರುವ ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೇಂದ್ರದ ಗುಲಾಮರಂತೆ ವರ್ತಿಸುತ್ತಿದ್ದಾರೆ. ವೈಯಕ್ತಿಕವಾಗಿ ನಾನು ರಾಜ್ಯದಲ್ಲಿ ರಚನಾತ್ಮಕವಾಗಿ ಕಾರ್ಯನಿರ್ವಹಿಸುವ ಸಮರ್ಥ ವಿರೋಧ ಪಕ್ಷ ಇರಬೇಕೆಂದು ಬಯಸುವವನು. ಬಿಜೆಪಿಯವರಂತೆ ರಾಜ್ಯ ಬಿಜೆಪಿ ಮುಕ್ತ ಆಗಬೇಕೆಂದು ಬಯಸುವಷ್ಟು ಕೆಟ್ಟ ಮನಸ್ಸು ನನಗಿಲ್ಲ. ನಮ್ಮ ಆಡಳಿತದಲ್ಲಿ ತಿಳಿದೋ, ತಿಳಿಯದೆಯೋ ತಪ್ಪುಗಳಾಗಿದ್ದರೆ ಅದನ್ನು ನಮ್ಮ ಗಮನಕ್ಕೆ ತರುವುದು ವಿರೋಧ ಪಕ್ಷದ ಮುಖ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿರುವ ವಿರೋಧ ಪಕ್ಷ ತನ್ನ ಒಳಜಗಳ ಮತ್ತು ಅಸಾಮರ್ಥ್ಯದಿಂದ ರಾಜ್ಯದ ಜನತೆ ಎದುರು ನಗೆಪಾಟಲಿಗೀಡಾಗಿದೆʼ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









