ಬಿ.ಎಸ್.ಯಡಿಯೂರಪ್ಪನ ತಟ್ಟೆಯಲ್ಲಿ ಕತ್ತೆಯೇ ಸತ್ತು ಬಿದ್ದಿದೆ: ಸಿಎಂ ಸಿದ್ದರಾಮಯ್ಯ

Siddaramaiah vs BS Yediyurappa: ಯಡಿಯೂರಪ್ಪನ ವಿರುದ್ಧ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ನ್ಯಾಯಾಲಯ ಜಾಮೀನು‌ ನೀಡಿದೆ ಅನ್ನೋ ಕಾರಣಕ್ಕೆ ಯಡಿಯೂರಪ್ಪ ಹೊರಗೆ ಇದ್ದಾರೆ. ಇಲ್ಲದಿದ್ದರೆ ಜೈಲಿನಲ್ಲಿ ಇರಬೇಕಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Written by - Puttaraj K Alur | Last Updated : Aug 5, 2024, 10:42 PM IST
  • ಬಿ.ಎಸ್.ಯಡಿಯೂರಪ್ಪ ನನ್ನ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ ಆದರೆ
  • ಯಡಿಯೂರಪ್ಪನ ತಟ್ಟೆಯಲ್ಲಿ ಕತ್ತೆಯೇ ಸತ್ತು ಬಿದ್ದಿದೆ ಎಂದು ಸಿದ್ದರಾಮಯ್ಯ ವ್ಯಂಗ್ಯ
  • ರಾಜೀನಾಮೆ ನೀಡಬೇಕೆಂಬ ಹೇಳಿಕೆಗೆ ಸಿಎಂ ಸಿದ್ದರಾಮಯ್ಯರಿಂದ ತಿರುಗೇಟು
ಬಿ.ಎಸ್.ಯಡಿಯೂರಪ್ಪನ ತಟ್ಟೆಯಲ್ಲಿ ಕತ್ತೆಯೇ ಸತ್ತು ಬಿದ್ದಿದೆ: ಸಿಎಂ ಸಿದ್ದರಾಮಯ್ಯ
ಬಿಎಸ್‌ವೈಗೆ ಸಿದ್ದರಾಮಯ್ಯ ತಿರುಗೇಟು!

Siddaramaiah vs BS Yediyurappa: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನನ್ನ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. ಅವರ ತಟ್ಟೆಯಲ್ಲಿ ಹೆಗ್ಗಣ ಮಾತ್ರವಲ್ಲ; ಕತ್ತೆಯೇ ಸತ್ತು ಬಿದ್ದಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿರುವ ಬಿಎಸ್‌ವೈಗೆ ಅವರು ತಿರುಗೇಟು ನೀಡಿದ್ದಾರೆ. 

Add Zee News as a Preferred Source

ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ʼಬಿಜೆಪಿ ಪಾದಯಾತ್ರೆ ಮುಗಿಯುವುದರೊಳಗೆ ನಾನು ರಾಜೀನಾಮೆ ನೀಡಬೇಕೆಂದು ಯಡಿಯೂರಪ್ಪ ಹೇಳಿದ್ದಾರೆ. ಸ್ವತಃ ಅವರೇ ಪೋಕ್ಸೊ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇಂತವರಿಗೆ ನನ್ನ ರಾಜೀನಾಮೆ ಕೇಳುವ ಹಕ್ಕು‌ ಇದೆಯೇ? ಯಡಿಯೂರಪ್ಪನಿಗೆ ಯಾವ ನೈತಿಕತೆ ಇದೆ? ಅಂತಾ ಖಾರವಾಗಿ ಪ್ರಶ್ನಿಸಿದರು.  

ಇದನ್ನೂ ಓದಿ: ಮತ್ತೊಬ್ಬ ಪಿಎಸ್ ಐ ಆತ್ಮಹತ್ಯೆ

ಯಡಿಯೂರಪ್ಪನ ವಿರುದ್ಧ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ನ್ಯಾಯಾಲಯ ಜಾಮೀನು‌ ನೀಡಿದೆ ಅನ್ನೋ ಕಾರಣಕ್ಕೆ ಯಡಿಯೂರಪ್ಪ ಹೊರಗೆ ಇದ್ದಾರೆ. ಇಲ್ಲದಿದ್ದರೆ ಜೈಲಿನಲ್ಲಿ ಇರಬೇಕಾಗಿತ್ತು. ಅವರ ಮೇಲೆ ಎಷ್ಟು ಕೇಸ್ ಇವೆ? ಯಾವ್ಯಾವ ಕೇಸ್‌ಗಳು ಇವೆ ಎಂದು ಅವರಿಗಾದರೂ ಗೊತ್ತಿದೆಯೇ ಅಂತಾ ಸಿದ್ದರಾಮಯ್ಯ ಪ್ರಶ್ನಿಸಿದರು.  

ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು 21 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಈಗಾಗಲೇ ಕೆಲವನ್ನು ಸಿಐಡಿ ತನಿಖೆಗೆ ಕೊಟ್ಟಿದ್ದೇನೆ. ಉಳಿದ ಎಲ್ಲಾ ಪ್ರಕರಣಗಳನ್ನೂ‌ ತನಿಖೆಗೆ ನೀಡಲಾಗುವುದು ಇದೇ ವೇಳೆ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಳು ಸ್ಥಳಗಳ ಗುರುತು: ಡಿಸಿಎಂ ಡಿಕೆ ಶಿವಕುಮಾರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News